ಕನ್ನಡಪ್ರಭ ವಾರ್ತೆ ರಾಯಚೂರು
2016 ರಿಂದ ಶಿಕ್ಷಣ ಇಲಾಖೆ ಇಂತಹ ಪ್ರಯತ್ನಗಳನ್ನು ನಡೆಸುತ್ತಲೇ ಬರುತ್ತಿದೆ. ಇರುವಂತಹ ಐಸಿಡಿಎಸ್‌ನ್ನು ಬಲಿಷ್ಠಗೊಳಿಸುವ ಬದಲಿಗೆ ಆಯಾಯ ಇಲಾಖೆಗಳು ತಮ್ಮ ವ್ಯಾಪ್ತಿಯನ್ನು ಮೀರಿ ಐಸಿಡಿಎಸ್‌ನ ಕೆಲಸಗಳನ್ನು ಹಂಚಿಕೊಳ್ಳುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ರಾಜ್ಯದ ಶಿಕ್ಷಣ ನೀತಿಯನ್ನು ರೂಪಿಸಲು ಪ್ರತ್ಯೇಕ ಆಯೋಗವನ್ನು ಮಾಡಿದೆ. ಆಯೋಗ ರಚನೆಯ ವರದಿ ಬರುವ ಪೂರ್ವದಲ್ಲಿಯೇ ಈ ರೀತಿಯ ಆದೇಶ ಮಾಡಿರುವುದು ಏಕಮುಖವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಶಿಕ್ಷಣ ಇಲಾಖೆ ಈಗ ಪ್ರಾರಂಭಿಸುವ ಎಲ್‌ಕೆಜಿ-ಯುಕೆಜಿಗೆ ದಾಖಲಾಗುವ ಮಕ್ಕಳು ಐಸಿಡಿಎಸ್‌ನಲ್ಲಿ ಈಗಾಗಲೇ ದಾಖಲಾಗಿರುವುದರಿಂದ ಎರಡು ಕಡೆ ಮಕ್ಕಳು ದಾಖಲು ಆಗುತ್ತಿದೆ ಎಂದು ಸಮಸ್ಯೆ ವಿವರಿಸಿದರು.
ಅಂಗನವಾಡಿ ಕೇಂದ್ರ ಪೂರ್ವ ಪ್ರಾಥಮಿಕ ಶಿಕ್ಷಣ ಮತ್ತು ಪೌಷ್ಟಿಕತೆ ಎರಡರ ಬಗ್ಗೆಯೂ ಕಾಳಜಿ ವಹಿಸಲಾಗುತ್ತದೆ ಹಾಗೂ ಇಂತಹ ಅನೇಕ ನ್ಯೂನತೆಗಳನ್ನು ಒಳಗೊಂಡಿರುವ ಆದೇಶ ಜಾರಿಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.
ಅಧ್ಯಯನ ಮಾಡಲು ಮಕ್ಕಳ ತಜ್ಞರು, ಮಕ್ಕಳ ವೈದ್ಯರು ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಸಂಬಂಧಿಸಿದ ತಜ್ಞರು ಹಾಗೂ ನಮ್ಮ ಸಂಘದ ಪ್ರತಿನಿಧಿಗಳು ಮತ್ತು ಎರಡು ಇಲಾಖೆಯ ಪ್ರಮುಖರನ್ನೊಳಗೊಂಡು ಸಮಿತಿ ರಚಿಸಿ ಕಾಲಮಿತಿಯೊಳಗೆ ವರದಿ ಮಾಡಲು ಸೂಚಿಸಬೇಕು. ಈ ವರದಿ ಬರುವ ತನಕ ಶಿಕ್ಷಣ ಇಲಾಖೆ ಹೊಸದಾಗಿ ಇಸಿಸಿಡಿಯನ್ನು ಪ್ರಾರಂಭಿಸದ ಹಾಗೆ ಸೂಚಿಸಬೇಕು. ವರದಿ ಬರುವ ತನಕ ಇಲಾಖೆ ಹೊಸದಾಗಿ ಇಸಿಸಿಡಿಯುಯನ್ನು ಪ್ರಾರಂಭಿಸಕೂಡದು. ಶಿಕ್ಷಣ ಇಲಾಖೆಯೆ ಬದಲಾವಣೆಗಳು ತರುವ ಸಮಯದಲ್ಲಿ ಡಬ್ಲ್ಯೂಸಿಒ ಇಲಾಖೆಯ ಒಪ್ಪಿಗೆ ಪಡೆಯಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ಕಾರ್ಯದರ್ಶಿ ನರ್ಮದಾ, ಖಜಾಂಚಿ ವೀರಗೋಟ ಗಂಗಮ್ಮ, ಮುಖಂಡರಾದ ಕೆ.ಜಿ ವೀರೇಶ, ಡಿ.ಎಸ್ ಶರಣಬಸವ ಸೇರಿ ಅಂಗನವಾಡಿ ನೌಕರರು, ಸಹಾಯಕರು ಇದ್ದರು.