ಕನ್ನಡಪ್ರಭ ವಾರ್ತೆ ಶಹಾಪುರ
ಈ ವೇಳೆ ಮಾತನಾಡಿದ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಪ್ರದೀಪ್ ಅಣಬಿ, ಪ್ರಸ್ತುತ 2024-25ನೇ ಶೈಕ್ಷಣಿಕ ಶಾಲಾ ಪ್ರವೇಶಾತಿ ಆರಂಭವಾಗಿದ್ದು, ನಗರದ ವಿವಿಧ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ಜಾಸ್ತಿಯಾಗಿದೆ. ಬಡವರ ಮತ್ತು ಮಧ್ಯಮಸ್ಥರ ಮಕ್ಕಳು ಪ್ರವೇಶಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಶೈಕ್ಷಣಿಕ ಇಲಾಖೆ ಈ ಕುರಿತು ಪರಿಶೀಲನೆ ನಡೆಸಿ, ಹೆಚ್ಚಿನ ಡೊನೇಷನ್ ಪಡೆಯುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಕುರಿತು ಜಿಲ್ಲಾಡಳಿತ ಪರಿಶೀಲನೆ ನಡೆಸಬೇಕಿದೆ. ಸರ್ಕಾರ ನಿಗದಿಪಡಿಸಿದ ಶುಲ್ಕ ಮಾತ್ರ ಪಡೆಯುವಂತೆ ಕಠಿಣ ಆಜ್ಞೆ ನೀಡಬೇಕೆಂದು ಸಂಘ ಮನವಿ ಮಾಡಿದೆ. ಅಲ್ಲದೆ ಈ ಕುರಿತು ಈಗಾಗಲೇ ಕ್ಷೇತ್ರ ಶಿಕ್ಷಣ ಅಧಿಕಾರಿಗಳು, ಡಿಡಿ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಸಂಘದ ಸಂಗಮೇಶ ಬೇವಿನಹಳ್ಳಿ, ದೇವರಾಜ, ಸಿದ್ದಪ್ಪ, ಭೋಜಪ್ಪ, ಆಂಜನೇಯ ಇಮ್ಲಾಪುರ ಇತರರಿದ್ದರು.