ಸರ್ಕಾರದ ಸುತ್ತೋಲೆ ಹಿಂಪಡೆಯಲು ಆಗ್ರಹ

KannadaprabhaNewsNetwork |  
Published : Oct 25, 2025, 01:00 AM IST
24ಕೆಪಿಎಲ್23 ಸರ್ಕಾರದ ಸುತ್ತೋಲೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸುತ್ತಿರುವುದು. | Kannada Prabha

ಸಾರಾಂಶ

ಕಾಲೇಜುಗಳ ಶೈಕ್ಷಣಿಕ ಹಾಗೂ ಇತರೆ ಸೌಕರ್ಯಗಳ ಪರಿಶೀಲನೆಗೆ ನಮ್ಮದು ಯಾವುದೇ ಅಭ್ಯಂತರವಿಲ್ಲ

ಕೊಪ್ಪಳ: ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆ ಸ್ಥಿತಿಗತಿ ಮಾಹಿತಿ ಸಂಗ್ರಹಿಸುವ ಮತ್ತು ಪರಿಶೀಲನೆ ಮಾಡುವ ಸುತ್ತೋಲೆಯನ್ನು ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ಶಿಕ್ಷಣ ಮತ್ತು ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆಗಳಿಂದ ಜಂಟಿಯಾಗಿ ಸುತ್ತೋಲೆ ಹೊರಡಿಸಿದ್ದು, ಇದನ್ನು ಹಿಂಪಡೆಯುವಂತೆ ಕೊಪ್ಪಳ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕ ಮತ್ತು ಪ್ರಾಚಾರ್ಯರ ಸಂಘಗಳು ಜಂಟಿಯಾಗಿ ಒತ್ತಾಯಿಸಿದೆ.

ಕಾಲೇಜುಗಳ ಶೈಕ್ಷಣಿಕ ಹಾಗೂ ಇತರೆ ಸೌಕರ್ಯಗಳ ಪರಿಶೀಲನೆಗೆ ನಮ್ಮದು ಯಾವುದೇ ಅಭ್ಯಂತರವಿಲ್ಲ. ನಮ್ಮದೇ ಇಲಾಖೆಯ ಅಧಿಕಾರಿಗಳು, ಹಿರಿಯ ಪ್ರಾಚಾರ್ಯರು, ಉಪನ್ಯಾಸಕರುಗಳಿಂದ ಪರಿಶೀಲನೆಗೆ ತಕರಾರಿಲ್ಲ. ಆದರೆ ನಮ್ಮ ಇಲಾಖೆಗೆ ಸಂಬಂಧಪಡದ ಡಯಟ್ ಅಧಿಕಾರಿಗಳು ಹಾಗೂ ಉಪನ್ಯಾಸಕರುಗಳಿಂದ ಕಾಲೇಜುಗಳ ಪರಿಶೀಲನೆ ಮಾಡುವುದು ತರವಲ್ಲ. ಈ ಸುತ್ತೋಲೆ ಅವೈಜ್ಞಾನಿಕವಾಗಿದ್ದು, ನಮ್ಮ ನೌಕರರಲ್ಲಿ ಅಭದ್ರತೆ ಕಾಡುತ್ತದೆ. ಕೂಡಲೇ ಇದನ್ನು ವಾಪಸ್‌ ಪಡೆಯಬೇಕೆಂದು ಸಂಘಗಳ ಪದಾಧಿಕಾರಿಗಳು ಜಿಲ್ಲಾ ಉಪನಿರ್ದೇಶಕ ಜಿ.ಎಚ್.ಜಗದೀಶ ಮೂಲಕ ಇಲಾಖೆಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರಾಚಾರ್ಯರ ಸಂಘದ ಅಧ್ಯಕ್ಷ ಬಸಪ್ಪ ನಾಗೋಲಿ, ಕಾರ್ಯದರ್ಶಿ ಬಸವರಾಜ, ಖಜಾಂಚಿ ಟಿ.ಸಿ. ಶಾಂತಪ್ಪ, ಉಪನ್ಯಾಸಕರ ಸಂಘದ ಅಧ್ಯಕ್ಷ ಸೋಮಶೇಖರ ಗೌಡ, ಕಾರ್ಯಾಧ್ಯಕ್ಷ ಮಾರುತಿ ಲಕಮಾಪುರ, ಹಿರಿಯ ಪ್ರಾಚಾರ್ಯ ರಾಜಶೇಖರ ಪಾಟೀಲ್, ಶಿವಾನಂದ, ಮಂಜುನಾಥ ಸ್ವಾಮಿ, ಉಪನ್ಯಾಸಕ ಡಾ. ಸಿದ್ಧಲಿಂಗಪ್ಪ ಕೊಟ್ನೆಕಲ್, ರಾಚಪ್ಪ ಕೇಸರಬಾವಿ, ಕೆ.ಎಸ್‌.ಹುಲಿ, ಎಸ್.ವಿ. ಮೇಳಿ. ಕೆ.ಎಚ್. ಕೊಳ್ಳಣ್ಣನವರ್, ಶಿವಾನಂದ ಮೇಟಿ, ಲಲಿತಮ್ಮಾ ಹಾಗೂ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!