ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿ ₹7 ನೀಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಸರ್ಕಾರ ತನ್ನ ಬೊಕ್ಕಸದಿಂದ ಹಣ ಭರಿಸಬೇಕು. ಜನರ ಮೇಲೆ ಹೊರೆ ಹಾಕಬಾರದು. ಹಾಲಿನ ದರ ₹12ರಿಂದ ₹15ವರೆಗೆ ಹೆಚ್ಚಿಸುವುದರ ಜೊತೆಗೆ ಬೆಣ್ಣೆ, ಮೊಸರು ಸೇರಿ ಉಪ ಉತ್ಪನ್ನಗಳ ದರವನ್ನೂ ಏರಿಸಲಾಗಿದೆ. ಬಸ್ ಪ್ರಯಾಣ ದರವನ್ನೂ ಹೆಚ್ಚಿಸಿ ಜನರಿಗೆ ತೊಂದರೆ ನೀಡಲಾಗುತ್ತಿದೆ. ಕೂಡಲೇ ಬೆಲೆ ಏರಿಕೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಬೆಲೆ ಏರಿಕೆ ಖಂಡಿಸಿ ಶನಿವಾರ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಬಸ್ ನಿಲ್ದಾಣಗಳಲ್ಲಿ ಡಿ.ಕೆ. ಶಿವಕುಮಾರ್ ಅವರ ಮುಖವಾಡ ಧರಿಸಿ ಬಿಜೆಪಿ ವಿನೂತನ ಪ್ರತಿಭಟನೆ ನಡೆಸಲಿದೆ. ಶಾಸಕರು, ಸಂಸದರು ಹಾಗೂ ಮಾಜಿ ಸಚಿವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.ಸಂಸದ ಪಿ.ಸಿ. ಗದ್ದಿಗೌಡರ ಮಾತನಾಡಿ, ಪೆಟ್ರೋಲ್, ಡೀಸೆಲ್ ದರ ಏರಿಕೆ ದೇಶಾದ್ಯಂತ ಅನ್ವಯಿಸುವ ವಿಚಾರ. ಕೇಂದ್ರದ ಮೇಲೆ ಆರೋಪ ಮಾಡುವುದು ಸರಿಯಲ್ಲ. ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿಲ್ಲ. ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿದರು.