ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಸರ್‌ಎಂ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಸೇರಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡೀಸಿ ಮೂಲಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.
ನಮ್ಮ ದೈನಂದಿನ ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಬೀರುತ್ತಿವೆ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರುಗಳ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತಿವೆ. ಇದರ ಪರಿಣಾಮವಾಗಿ ಪದವಿ ಪೂರ್ವ ಕಾಲೇಜುಗಳ ಭವಿಷ್ಯ ಡೋಲಾಯನ ಸ್ಥಿತಿಗೆ ತಲುಪುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಪರೀಕ್ಷಾ ಮಂಡಳಿಯನ್ನು ಪದವಿ ಪೂರ್ವ ಇಲಾಖೆಯಿಂದ ಪ್ರತ್ಯೇಕಿಸಿದ ನಂತರ ದೇಶದಲ್ಲಿ ಮಾದರಿಯಾಗಿದ್ದ ಪದವಿ ಪೂರ್ವ ಶಿಕ್ಷಣ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇತ್ತೀಚೆಗೆ ಪದವಿ ಪೂರ್ವ ಶಿಕ್ಷಣಕ್ಕೆ ಸಂಬಂಧನೇ ಇಲ್ಲದ ಡಿಐಇಟಿ ಉಪನ್ಯಾಸಕರನ್ನು ಪದವಿ ಪೂರ್ವ ಕಾಲೇಜುಗಳ ಸ್ಥಿತಿಗತಿಗಳ ದತ್ತಾಂಶ ಕ್ರೂಢೀಕರಿಸುವ ನೆಪದಲ್ಲಿ ಕಾಲೇಜುಗಳನ್ನು ಪರಿಶೀಲನೆಗೊಳಪಡಿಸಲು ಹೊರಟಿರುವುದು ದುರಂತದ ಸಂಗತಿ ಎಂದು ದೂರಿದರು.
2024-25ನೇ ಸಾಲಿನ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಹಾಗೂ ಸಂಭಾವನೆ ಬಾಕಿ ಇರುವ 13.5 ಕೋಟಿ ಹಣವನ್ನು ಕೂಡಲೇ ಬಿಡುಗಡೆ ಮಾಡಿ ವಿತರಿಸಬೇಕು. ಸರ್ಕಾರಿ/ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೇಗಳು ಮತ್ತು ಪ್ರಾಂಶುಪಾಲರ ಹುದ್ದೇಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮಲ್ಯ ನಿರ್ಣಯ ಮಂಡಳಿಯಲ್ಲಿರುವರುವ ಪರೀಕ್ಷಾ ವಿಭಾಗವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಈ ಹಿಂದೆ ಇದ್ದಂತೆ ವರ್ಗಾಯಿಸಬೇಕು. ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಪರೀಕ್ಷೆ ಮತ್ತು ಶೈಕ್ಷಣಿಕ ಸುಧಾರಣೆಗಳನ್ನು ತರಲು ಅಕಾಡೆಮಿಕ್ ಕೌನ್ಸಿಲ್ ಸಮಿತಿಯನ್ನು ಉನ್ನತ ಶಿಕ್ಷಣ ಇಲಾಖೆಯಲ್ಲಿರುವಂತೆ ರಚಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಚೆನ್ನಕೃಷ್ಣಯ್ಯ ನೇತೃತ್ವದಲ್ಲಿ ನೂರಾರು ಮಂದಿ ಉಪನ್ಯಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.