- ಮತಗಳ್ಳತನ ವಿರೋಧಿಸಿ ತರೀಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ಮತ್ತು ಸಹಿ ಸಂಗ್ರಹ ಕಾರ್ಯಕ್ರಮ
ಮತಚಲಾವಣೆ ಹಕ್ಕು ಕಸಿದುಕೊಂಡರೆ ಪ್ರಜಾಪ್ರಭುತ್ವ ನಾಶವಾಗುತ್ತದೆ ಎಂದ ಶಾಸಕ ಜಿ.ಎಚ್.ಶ್ರೀನಿವಾಸ್ ಮತಗಳ್ಳತನ ವಿರೋಧಿಸಿ ಎಲ್ಲಾ ಪಂಚಾಯಿತಿಗಳಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು. ಹೇಳಿದ್ದಾರೆ.ಶನಿವಾರ ಪಟ್ಟಣದ ಮಹಾತ್ಮಾ ಗಾಂಧಿ ವೃತ್ತದ ಬಳಿ ಶಾಸಕ ಜಿ.ಎಚ್.ಶ್ರೀನಿವಾಸ್ ನೇತೃತ್ವದಲ್ಲಿ ಮತಗಳ್ಳತನ ವಿರೋಧಿಸಿ ತರೀಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ನಡೆದ ಪ್ರತಿಭಟನೆ ಮತ್ತು ಸಹಿ ಸಂಗ್ರಹ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.ಇದೊಂದು ಬಹಳ ಗಂಭೀರ ಮತ್ತು ಯೋಚನೆ ಮಾಡಬೇಕಾದ ವಿಚಾರ. ಅಸ್ಸಾಂನಲ್ಲಿ ಮತದಾರರ ಪಟ್ಟಿಯಿಂದ 1 ಲಕ್ಷ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ಚುನಾವಣೆ ಆಯೋಗ ಬಿಜೆಪಿ ಕೈಗೊಂಬೆಯಾಗಿದೆ. ಕೋಟ್ಯಂತರ ಹುದ್ದೆಗಳ ಸೃಷ್ಟಿ ಎಲ್ಲವೂ ಸುಳ್ಳು, ಬಿಜೆಪಿ ಅದಾನಿ, ಅಂಬಾನಿ ಇಂಥವರಿಗೆ ಸಹಾಯ ಮಾಡಲಾಗುತ್ತಿದೆ. ಬಡವರಿಗೆ ಸಹಾಯ ಮಾಡುತ್ತಿಲ್ಲ ಎಂದು ಹೇಳಿದರು.
ಸರ್ವ ಜನಾಂಗ ಅಭಿವೃದ್ಧಿ ಆದರೆ ದೇಶದ ಅಭಿವೃದ್ಧಿಯಾಗುತ್ತದೆ. ಗ್ಯಾರಂಟಿ ಯೋಜನೆಗಳಿಂದ ತಲಾ ಆದಾಯ ಹೆಚ್ಚುತ್ತಿದೆ. ಶಕ್ತಿ ಯೋಜನೆಯಿಂದ ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣ ಮಾಡಿ ಕೆಲಸಕ್ಕೆ ಹೋಗುತ್ತಿದ್ದಾರೆ.ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ಮಾತನಾಡಿ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಹೋರಾಟ ನಡೆಸಲಾಗುತ್ತಿದೆ. ಈ ಹೋರಾಟ ಅತ್ಯಂತ ಅವಶ್ಯಕ ಮತ್ತು ಜವಾಬ್ದಾರಿ ಯುತವಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಆಪರೇಶನ್ ಕಮಲದ ಮೂಲಕ ಹಿಂಬಾಗಿಲ ಪ್ರವೇಶ ಮಾಡಿದ್ದಾರೆ, 11 ವರ್ಷಗಳಿಂದ ಮೋದಿ ಸರ್ಕಾರ ಅವೈಜ್ಞಾನಿಕ ಕಾನೂನು ಜಾರಿ ಮಾಡುತ್ತಿದೆ. ಜಿಎಸ್ಟಿ ತೆರಿಗೆ, ನಿರಂತರವಾಗಿ ಬೆಲೆ ಏರಿಕೆ ನಿರಂತರವಾಗಿ ನಡೆಯುತ್ತಿದೆ ಎಂದರು.
ಪುರಸಭೆ ಅಧ್ಯಕ್ಷ ವಸಂತಕುಮಾರ್ ಮಾತನಾಡಿ ಪಕ್ಷದ ವರಿಷ್ಟರಾದ ರಾಹುಲ್ ಗಾಂಧಿ ಮತಗಳ್ಳತನ ವಿಚಾರವನ್ನು ಹೊರಕ್ಕೆ ತಂದಿದ್ದಾರೆ. ಮತಗಳ್ಳತನವನ್ನು ಖಂಡಿಸಬೇಕು ಎಂದರು.
-ಫೋಟೋ ಇದೆಃ11ಕೆಟಿಆರ್.ಕೆ.1ಃ ಮತಗಳ್ಳತನ ಪ್ರತಿಭಟಿಸಿ ತರೀಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶಾಸಕರಾದ ಜಿ.ಹೆಚ್.ಶ್ರೀನಿವಾಸ್ ಅವರ ನೇತೃತ್ವದಲ್ಲಿ ಏರ್ಪಾಡಾಗಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಶಾಸಕ ಜಿ.ಹೆಚ್.ಶ್ರೀನಿವಾಸ್ ಅವರು ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್, ಪುರಸಭೆ ಅಧ್ಯಕ್ಷರು ವಸಂತಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಯು.ಫಾರೂಕ್ ನಗರ ಕಾಂಗ್ರೆಸ್ ಅಧ್ಯಕ್ಷರು ಟಿ.ಎಸ್.ಪ್ರಕಾಶ್ ವರ್ಮ, ಜಿ.ಪಂ.ಮಾಜಿ ಅಧ್ಯಕ್ಷರು ಹೆಚ್.ವಿಶ್ವನಾಥ್ ಮತ್ತಿತತರು ಭಾಗವಹಿಸಿದ್ದರು.