ನಿಷ್ಪಕ್ಷಪಾತ ಪತ್ರಿಕೋದ್ಯಮದಿಂದ ಪ್ರಜಾಪ್ರಭುತ್ವ ಜೀವಂತ: ಶರಣಪ್ರಕಾಶ ಪಾಟೀಲ

KannadaprabhaNewsNetwork |  
Published : Jul 29, 2024, 12:54 AM IST
28ಕೆಪಿಆರ್‌ಸಿಆರ್ 04: | Kannada Prabha

ಸಾರಾಂಶ

ರಾಯಚೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವೈದ್ಯಕೀಯ ಶಿಕ್ಷಣ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ನಿಷ್ಪಕ್ಷಪಾತ, ಜನಪರ ಕಾಳಜಿಯ ಪತ್ರಿಕೋದ್ಯಮದಿಂದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಜೀವಂತವಾಗಿಡಲು ಸಾಧ್ಯವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಡಾ. ಬಿ.ಆರ್.ಅಂಬೇಡ್ಕರ ಹಾಗೂ ಬಾಬು ಜಗಜೀವನರಾಮ್ ಸಮುದಾಯ ಭವನದಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಪೂರ್ವ ಹಾಗೂ ನಂತರದ ದಿನಗಳಲ್ಲಿ ಆದಂತಹ ಬದಲಾವಣೆಯಲ್ಲಿ ಪತ್ರಿಕೋದ್ಯಮದ ಪಾತ್ರ ಅತ್ಯಂತ ದೊಡ್ಡದಾಗಿದೆ ಎಂದರು.

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ಗ್ರಾಮಿಣ ಪತ್ರಕರ್ತರಿಗೆ ಬಸ್‌ಪಾಸ್ ನೀಡುವ ಬೇಡಿಕೆ ಗಮನನದಲ್ಲಿದೆ. ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಪತ್ರಕರ್ತರಿಗೆ ನಿವೇಶನ ಮತ್ತು ಮನೆಗಳ ನಿರ್ಮಾಣ ಸ್ಥಳೀಯ ಸಂಸ್ಥೆಗಳು, ನಗರಾಭಿವೃದ್ಧಿ ಪ್ರಾಧಿಕಾರದ ಸಹಕಾರವಿದ್ದರೆ ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ನ್ಯೂಸ್ 18 ಕನ್ನಡದ ವಾಹಿನಿಯ ಸಂಪಾದಕ ಹರಿಪ್ರಸಾದ ವಿಶೇಷ ಉಪನ್ಯಾಸ ನೀಡಿದರು. ಪ್ರಾಸ್ತಾವಿಕವಾಗಿ ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ ಮಾತನಾಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ, ಶಾಸಕರಾದ ಹಂಪನಗೌಡ ಬಾದರ್ಲಿ, ಹಂಪಯ್ಯ ನಾಯಕ, ಆರ್.ಬಸನಗೌಡ ತುರ್ವಿಹಾಳ,ಡಾ.ಶಿವರಾಜ ಪಾಟೀಲ್, ಆರ್‌ಡಿಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಜಿಲ್ಲಾಧಿಕಾರಿ ನಿತೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, ಕೆಯುಡಬ್ಲೂಜೆ ರಾಜ್ಯ ಸಮಿತಿ ಸದಸ್ಯ ಶಿವಮೂರ್ತಿ ಹಿರೇಮಠ, ಉಪಾಧ್ಯಕ್ಷ ಶಿವಪ್ಪ ಮಡಿವಾಳ, ಪ್ರಧಾನ ಕಾರ್ಯದರ್ಶಿ ಪಾಶಾ ಹಟ್ಟಿ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು, ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಕಿರಿಯ, ಹಿರಿಯ ಪತ್ರಕರ್ತರು, ಛಾಯಾಗ್ರಾಹಕಗಳು, ಸಾರ್ವಜನಿಕರು ಇದ್ದರು. ಸಿದ್ದಯ್ಯಸ್ವಾಮಿ ಕುಕನೂರು ನಿರೂಪಿಸಿದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...