ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 72.50 ಲಕ್ಷ ರು. ವೆಚ್ಚದಲ್ಲಿ ಸರ್ಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ನಿಡಘಟ್ಟ ಶಾಲೆ 125 ವರ್ಷಗಳ ಇತಿಹಾಸ ಹೊಂದಿದೆ. ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿರುವ ಸಚಿವರು ಅನುದಾನ ಬಿಡುಗಡೆ ಮಾಡಿದ್ದು, ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.ಕ್ಷೇತ್ರ ವ್ಯಾಪ್ತಿಯ ನವಿಲೇ, ಅರುವನಹಳ್ಳಿ, ಸುಣ್ಣದದೊಡ್ಡಿ ಹಾಗೂ ಬಿದರ ಹೊಸಹಳ್ಳಿಯಲ್ಲಿ ಹೊಸದಾಗಿ ಸರ್ಕಾರಿ ಶಾಲೆ ಕಟ್ಟಡಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿವೆ. ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ ಕಲ್ಪಿಸಲು ಕ್ಷೇತ್ರಕ್ಕೆ ಮತ್ತೆರಡು ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಕೆಲ ದಿನಗಳಲ್ಲೇ ಮಂಜೂರಾತಿ ಸಿಗಲಿದೆ ಎಂದು ಭರವಸೆ ನೀಡಿದರು.
-----------
ಮದ್ದೂರು ತಾಲೂಕು ನಿಡಘಟ್ಟ ಗ್ರಾಮದಲ್ಲಿ ಸರ್ಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು.
ಮದ್ದೂರು: ಬೆಂಗಳೂರು ಅಭಿವೃದ್ಧಿ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ಆಡಳಿತ ಆರಂಭವಾಗಿದೆ. ಇದನ್ನು ವಿರೋಧಿಸುವ ಬಿಜೆಪಿ ನಾಯಕರಿಗೆ ಸಾಮಾನ್ಯ ಜ್ಞಾನ ಮತ್ತು ಬುದ್ಧಿಯೂ ಇಲ್ಲ ಎಂದು ಶಾಸಕ ಕೆ.ಎಂ.ಉದಯ್ ವ್ಯಂಗ್ಯವಾಡಿದರು.
ಮದ್ದೂರು ಪಟ್ಟಣ ವ್ಯಾಪ್ತಿಯ ಸಾರ್ವಜನಿಕರ ಒತ್ತಾಯದಂತೆ ಬಿಎಂಐಸಿ ಯೋಜನೆಯಿಂದ ಕೈ ಬಿಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದೆ. ಹೀಗಾಗಿ ಸದನದಲ್ಲಿ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಸಾಕಷ್ಟು ಚರ್ಚೆಗಳಾಗಿವೆ. ಸುಪ್ರೀಂಕೋರ್ಟ್ ನಲ್ಲಿಯೂ ವಿಚಾರಣೆ ಹಂತದಲ್ಲಿದ್ದು, ನ್ಯಾಯಾಲಯದ ತೀರ್ಪು ಹೊರಬಿದ್ದ ಬಳಿಕ ಬಿಎಂಐಸಿ ಯೋಜನೆ ಬಗ್ಗೆ ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳಲಿದೆ. ಈ ಸಮಸ್ಯೆಗೆ ಆದಷ್ಟು ಬೇಗ ಮುಕ್ತಿ ಸಿಗಲಿದೆ ಎಂದು ಶಾಸಕರು ತಿಳಿಸಿದರು.