- ಪುರಸಭೆ ಮುಖ್ಯಾಧಿಕಾರಿ, ಹಿರಿಯ ಆರೋಗ್ಯ ನಿರೀಕ್ಷಕರ ಸಮ್ಮುಖ ಕರ್ತವ್ಯ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ
ಜ್ವರದಿಂದ ಬಳಲುತ್ತಿರುವ ನೂರಾರು ರೋಗಿಗಳು ಆಸ್ಪತ್ರೆಗೆ ಬಂದು ರಕ್ಷ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ. ಡೆಂಘೀ ಅಥವಾ ಚಿಕೂನ್ ಗುನ್ಯಾ ಎಂದು ಕಂಡುಬಂದಲ್ಲಿ ಅಂತಹ ವಿಶೇಷ ಪ್ರಕರಣಗಳಿಗೆ ಸೂಕ್ತ ಚಿಕಿತ್ಸೆ ನೀಡಿ, ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳುತ್ತಿದ್ದಾರೆ. ಒಂದುವೇಳೆ ಹೆಚ್ಚಿನ ಚಿಕಿತ್ಸೆ ಅವಶ್ಯವಿದೆ ಎಂದು ಕಂಡುಬಂದರೆ ಶಿವಮೊಗ್ಗ ಅಥವಾ ದಾವಣಗೆರೆ ಆಸ್ಪತ್ರೆಗಳಿಗೆ ಕಳಿಸುತ್ತಿದ್ದಾರೆ.
ಪುರಸಭೆ ಮುಖ್ಯಾಧಿಕಾರಿ ಲೀಲಾವತಿ ಮಾತನಾಡಿ, ಸೊಳ್ಳೆ ಉತ್ಪತ್ತಿಯಾಗುವ ಹೊನ್ನಾಳಿ ಪಟ್ಟಣದ ಸರ್ಕಾರಿ ಕಟ್ಟಡಗಳು, ಶಾಲೆ, ಅಂಗನವಾಡಿ, ಮನೆಗಳ ಸುತ್ತಮುತ್ತ ನೀರು ನಿಂತಿದ್ದರೆ ಅಂತಹ ಕಡೆಗಳಲ್ಲಿ ಮೆಲಾತೀನ್ ಪೌಡರ್ ಸಿಂಪರಣೆ ಮಾಡಿ, ನೀರು ನಿಲ್ಲದ ಹಾಗೇ ಸ್ವಚ್ಛತೆ ಕಾಪಾಡಬೇಕು. ಪ್ರತಿದಿನ ಬೆಳಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಲೀಲಾವತಿ ತಿಳಿಸಿದರು.ಸದ್ಯ ಹೊನ್ನಾಳಿ ಪಟ್ಟಣದ ವ್ಯಾಪ್ತಿಯಲ್ಲಿ ಎಲ್ಲಿಯೂ ರೋಗ ಹರಡಿಲ್ಲ. ಆದರೂ, ಮುಂಜಾಗ್ರತಾ ಕ್ರಮವಾಗಿ ನಾವು ಪಟ್ಟಣದ ಎಲ್ಲ ವಾರ್ಡಿನಲ್ಲೂ ಪೌರ ಕಾರ್ಮಿಕರು ಮೆಲಾತೀನ್ ಪೌಡರ್ ಸಿಂಪರಣೆ ಮಾಡುತ್ತಿದ್ದಾರೆ. ಖಾಲಿ ನಿವೇಶನದಲ್ಲಿ ಜಾಲಿ ಗಿಡಗಳು ಬೆಳೆದಿದ್ದು, ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ಸ್ವಚ್ಛತೆ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.
- - - -12ಎಚ್.ಎಲ್.ಐ1:ಹೊನ್ನಾಳಿ ಪಟ್ಟಣದ ವಾರ್ಡ್‌ಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಚರಂಡಿಗಳನ್ನು ಸ್ವಚ್ಛಗೊಳಿಸಿ, ಮೆಲಾತೀನ್ ಪೌಡರ್ ಸಿಂಪರಣೆ ಮಾಡಲಾಯಿತು. ಪುರಸಭೆ ಮುಖ್ಯಾಧಿಕಾರಿ ಲೀಲಾವತಿ, ಹಿರಿಯ ಆರೋಗ್ಯ ನಿರೀಕ್ಷಕ ಪರಿಮೇಶ್ ನಾಯ್ಕ್, ರವಿ, ಶಿವು ಹಾಜರಿದ್ದರು.