ಶಾಸಕ ಎಚ್.ಡಿ ತಮ್ಮಯ್ಯ, ಡಿಸಿ ಮೀನಾ ನಾಗರಾಜ್, ವೈದ್ಯಾಧಿಕಾರಿಗಳ ತಂಡದೊಂದಿಗೆ ರೋಗಿಗಳ ಆರೋಗ್ಯ ವಿಚಾರಣೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಘೀ ಜ್ವರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಬುಧವಾರ ನಗರದ ಮಲ್ಲೇಗೌಡ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.ಶಾಸಕ ಎಚ್.ಡಿ ತಮ್ಮಯ್ಯ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ.ಗೋಪಾಲಕೃಷ್ಣ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್‌ಬಾಬು, ಜಿಲ್ಲಾ ಸರ್ಜನ್ ಡಾ.ಮೋಹನ್ ಕುಮಾರ್ ಮತ್ತು ವೈದ್ಯಾಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿದ ಸಚಿವರು ರೋಗಿಗಳ ಆರೋಗ್ಯ ವಿಚಾರಿಸಿದರು.ಡೆಂಘೀ ಜ್ವರದ ಪ್ರಕರಣಗಳು ಕೇವಲ ಸೊಳ್ಳೆ ಕಚ್ಚುವುದರಿಂದ ಹರಡುತ್ತಿದ್ದು, ನಾಗರಿಕರು ಭಯಪಡುವ ಅಗತ್ಯ ಇಲ್ಲ ಎಂದು ರೋಗಿಗಳಲ್ಲಿ ವಿಶ್ವಾಸ ಮೂಡಿಸಿದ ಸಚಿವರು, ತಮ್ಮ ಮನೆಗಳ ಸುತ್ತಮುತ್ತ ಕೊಳಚೆ ನೀರು ಸಂಗ್ರಹವಾಗದಂತೆ ಸ್ವಚ್ಛತೆ ಕಾಪಾಡಲು ಕೋರಿದರು.ತೀವ್ರ ನಿಗಾ ಘಟಕಕ್ಕೆ ಭೇಟಿನೀಡಿದ ಸಚಿವರು ಎಂಡಿಆರ್‌ಎಸ್ ಶಾಲೆಯ ವಿದ್ಯಾರ್ಥಿನಿ ಅನುಶ್ರೀ ಬೆಳಗ್ಗೆ ಪ್ರಾರ್ಥನೆ ಮಾಡುವಾಗ ಕುಸಿದುಬಿದ್ದಿದ್ದು ತಕ್ಷಣ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿ ಹತ್ತು ನಿಮಿಷಗಳಾದರೂ ವೈದ್ಯರು ಸ್ಪಂದಿಸಿಲ್ಲ ಎಂಬ ಆರೋಪ ಮಾಡಿದ ಪೋಷಕರಿಗೆ ಸಮಾಧಾನಪಡಿಸಿ ಸಿಇಒ ಡಾ. ಗೋಪಾಲಕೃಷ್ಣ ವೈದ್ಯರೂ ಆಗಿದ್ದು ಅವರೇ ಪರೀಕ್ಷೆ ಮಾಡಿದ್ದು, ಗಾಬರಿ ಪಡುವಂತಹ ಅಗತ್ಯ ಇಲ್ಲ ಎಂದರು.ಅಷ್ಟರಲ್ಲಿ ವೈದ್ಯ ಡಾ. ಭರತ್ ಆಗಮಿಸಿದಾಗ ಸಚಿವರು ತುರ್ತು ಚಿಕಿತ್ಸೆಸಂದರ್ಭದಲ್ಲಿ ಎಲ್ಲಿಗೆ ಹೋಗಿದ್ದೀರಿ ಎಂದು ಪ್ರಶ್ನಿಸಿದಾಗ ವಾರ್ಡ್‌ಗಳ ಭೇಟಿಗೆ ತೆರಳಿ ರೋಗಿಗಳಿಗೆ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡುತ್ತಿದ್ದೆ ಎಂದು ಉತ್ತರಿಸಿದಾಗ ಸಚಿವರು ವಿದ್ಯಾರ್ಥಿನಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು.ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಲ್ಲಾ ರೋಗಿಗಳ ಆರೋಗ್ಯ ತಪಾಸಣೆ ನಡೆಸಿ, ಸೂಕ್ತ ವರದಿ ಸಿದ್ಧಪಡಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿಗಳಿಗೆ ಆದೇಶಿಸಿದರು.
ಈ ಸಂದರ್ಭದಲ್ಲಿ ಕಡೂರು ಕ್ಷೇತ್ರದ ಶಾಸಕ ಕೆ.ಎಸ್. ಆನಂದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್, ಅಧ್ಯಕ್ಷ ಬಿ.ಎಚ್ ಹರೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ ಮಂಜೇಗೌಡ, ಹಿರೇಮಗಳೂರು ರಾಮಚಂದ್ರ, ತನೂಜ್ ಕುಮಾರ್, ರೂಬಿನ್ ಮೊಸಸ್ ಇದ್ದರು.19 ಕೆಸಿಕೆಎಂ 5
ಡೆಂಘೀ ಪ್ರಕರಣಗಳು ಹೆಚ್ಚಾಗಿರುವ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ್ದರು. ಶಾಸಕ ಎಚ್.ಡಿ. ತಮ್ಮಯ್ಯ ಇದ್ದರು.