ಕನ್ನಡಪ್ರಭ ವಾರ್ತೆ ಮಂಗಳೂರು
ಇಲ್ಲಿನ ಅಟಲ್ ಸೇವಾ ಕೇಂದ್ರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ತೊಂದರೆಯಾಗುವ ಇಂತಹ ನಿಯಮಗಳನ್ನು ಏಕಾಏಕಿ ಇಡೀ ರಾಜ್ಯದಲ್ಲಿ ಜಾರಿಗೊಳಿಸುವ ಮೊದಲು ಯಾವುದಾದರೂ ಒಂದೆರಡು ಸಬ್ ರಿಜಿಸ್ಟರ್ ಕಚೇರಿಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಿ ಅದರ ಸಾಧಕ-ಭಾದಕಗಳನ್ನು ನೋಡಿಕೊಂಡು ನಂತರವೇ ರಾಜ್ಯಕ್ಕೆ ಅನ್ವಯಿಸಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.ಕಾವೇರಿ 2.0 ತಂತ್ರಾಂಶ ಜೋಡಣೆಯ ನಂತರವಂತೂ ಸಮಸ್ಯೆ ಉಲ್ಬಣವಾಗಿದ್ದು ಯಾವಾಗ ನೋಡಿದರೂ ಸರ್ವರ್ ಡೌನ್, ದಾಖಲೆಗಳು ಅಪ್‌ಲೋಡ್ ಆಗುತ್ತಿಲ್ಲ ಎಂಬ ಉತ್ತರ ಸಿಗುತ್ತಿದೆ. ಅವಿಭಜಿತ ಹಕ್ಕಿನ ಕ್ರಯ ಸಾಧನ ಪತ್ರ, ಮೂಲ ಹಕ್ಕಿನ ಕ್ರಯ ಸಾಧನ ಪತ್ರ, ವರ್ಗ ರೈಟ್ಸ್, ಹಕ್ಕು ಬಿಡುಗಡೆ ಪತ್ರ, ನಗರ ಪ್ರದೇಶಗಳ ಕೃಷಿ ಭೂಮಿಯ ಕ್ರಯ ಸಾಧನ ಪತ್ರ, ಮೊಬೈಲ್ ಮೂಲಕ ಆಸ್ತಿಯ ಸ್ಥಳಸೂಚಿ ಸೆರೆಹಿಡಿಯುವ ಸಮಯದಲ್ಲಿ ತಾಂತ್ರಿಕ ಸಮಸ್ಯೆ ಸೇರಿದಂತೆ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಇ ಖಾತಾ ಸಮಸ್ಯೆಯಿಂದಾಗಿ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದ್ದರೂ ಅದನ್ನು ಸರಿಪಡಿಸಲು ಮನಸ್ಸು ಮಾಡದೇ ಇರುವುದು ವಿಪರ್ಯಾಸ ಎಂದರು.
ಟ್ಯಾಕ್ಸಿ ಚಾಲಕರ ಲೂಟಿ:ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಇಲಾಖೆಯು ಉತ್ತಮ ಉದ್ದೇಶದೊಂದಿಗೆ ಜಾರಿಗೆ ತಂದ ಮೋಟಾರು ವಾಹನಗಳ ನಿಯಮ-2018 ಅನ್ನು ರಾಜ್ಯ ಸರ್ಕಾರ ಟ್ಯಾಕ್ಸಿ ಚಾಲಕರನ್ನು ಲೂಟಿ ಮಾಡಲು ಬಳಸಿಕೊಂಡಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಬಗ್ಗೆ ಅಧಿವೇಶನದಲ್ಲೂ ಸರ್ಕಾರದ ಗಮನ ಸೆಳೆದಿದ್ದೇನೆ.
ಮುಖಂಡರಾದ ರಮೇಶ್ ಕಂಡೆಟ್ಟು, ಪೂರ್ಣಿಮಾ, ಪ್ರೇಮಾನಂದ ಶೆಟ್ಟಿ, ಸಂಜಯ್ ಪ್ರಭು, ನಿತಿನ್ ಕುಮಾರ್, ರವಿಶಂಕರ್ ಮಿಜಾರ್, ಲಲ್ಲೇಶ್, ರಮೇಶ್ ಹೆಗ್ಡೆ ಇದ್ದರು. .................
ಟೈಪಿಸ್ಟ್, ಸರ್ವೇಯರ್ ಹೀಗೆ ಪ್ರತಿಯೊಂದು ವಿಭಾಗದಲ್ಲೂ ಸಿಬ್ಬಂದಿ ಕೊರತೆ ಇದೆ. ಹೀಗಾದರೆ ಸಮಯಕ್ಕೆ ಸರಿಯಾಗಿ ಜನರ ಕೆಲಸಗಳು ನಡೆಯುವುದಾದರೂ ಹೇಗೆ ಎಂದು ಅವರು ಪ್ರಶ್ನಿಸಿದರು.