ಕೊಪ್ಪಳ:
ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳ ಕಚೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ದದೇಗಲ್ ಸಹಯೋಗದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ದಿನಾಚರಣೆ ಅಂಗವಾಗಿ ದದೇಗಲ್ ಕಾಲೇಜಿನಲ್ಲಿ ಆಯೋಜಿಸಿದ್ದ ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಾನಸಿಕ ಆರೋಗ್ಯ ವ್ಯಕ್ತಿಯ ವ್ಯಕ್ತಿತ್ವದ ಕನ್ನಡಿಯಾಗಿದ್ದು ಮಾನಸಿಕ ಸದೃಢತೆ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಖಿನ್ನತೆಯಿಂದ ಕೂಡಿದ ಮಾನಸಿಕ ಸ್ಥಿತಿಯು ಆತ್ಮಹತ್ಯೆಯಂತಹ ಕೆಟ್ಟ ಆಲೋಚನೆಗಳಿಗೆ ದಾರಿ ಮಾಡಿಕೊಡುತ್ತದೆ. ಆದ್ದರಿಂದ ಮಾನಸಿಕ ಆರೋಗ್ಯ ಕಾಯ್ದುಕೊಳ್ಳಬೇಕು ಎಂದರು.ಜಿಲ್ಲಾ ಕುಷ್ಠರೋಗ ನಿವಾರಣಾ ಅಧಿಕಾರಿಗಳು ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಎಚ್. ಪ್ರಕಾಶ ಮಾತನಾಡಿ, ಜೀವನದಲ್ಲಿ ನಿರಾಶೆ, ಒತ್ತಡ, ಮಾದಕ ವಸ್ತುಗಳ ವ್ಯಸನ ಸೇರಿದಂತೆ ಅನೇಕ ಕಾರಣಗಳಿಂದ ವ್ಯಕ್ತಿ ಆತ್ಮಹತ್ಯೆಗೆ ಒಳಗಾಗುವ ಸಾಧ್ಯತೆ ಇದೆ. ಇಂತಹ ಸನ್ನಿವೇಶದಲ್ಲಿ ಇತರರೊಂದಿಗೆ ತಮ್ಮ ಭಾವನೆ ಹಂಚಿಕೊಳ್ಳಬೇಕು. ಅವಶ್ಯವಿದ್ದಲ್ಲಿ ಆಪ್ತ ಸಮಾಲೋಚಕರನ್ನು ಭೇಟಿಯಾಗಬೇಕು. ಆರೋಗ್ಯ ಇಲಾಖೆಯ 14416ಕ್ಕೆ ಕರೆ ಮಾಡಿ ಸೂಕ್ತ ಸಮಯಕ್ಕೆ ಆಪ್ತ ಸಮಾಲೋಚನೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ವಿಶೇಷ ಉಪನ್ಯಾಸ ನೀಡಿದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯೆ ಡಾ. ಲಕ್ಷ್ಮೀದೇವಿ ಎಂ. ಪಾಟೀಲ, ಆತ್ಮಹತ್ಯೆ ಬಗ್ಗೆ ಇರುವ ಅಪನಂಬಿಕೆ ಮತ್ತು ಕಳಂಕ ದೂರ ಮಾಡುವುದು ಮುಖ್ಯವಾಗಿದೆ. ಆತ್ಮಹತ್ಯೆಗೆ ಮೊರೆ ಹೋಗುವ ಅಪಾಯದಂಚಿನಲ್ಲಿರುವವರ ಜತೆಗೆ ಸಹನೆ ಹಾಗೂ ಸಹಾನೂಭೂತಿಯಿಂದ ಮಾತನಾಡುವುದು, ಕೌಟುಂಬಿಕ ಬೆಂಬಲ, ಒಂಟಿಯಾಗಿರಲು ಬಿಡದಿರುವುದು ಮುಖ್ಯವಾಗಿದೆ ಎಂದರು.