ಕಾರ್ಕಳಕ್ಕೆ ಉಪ ಮುಖ್ಯಮಂತ್ರಿ: ಕಾರ್ಯಕ್ರಮ ಯಶಸ್ವಿಗೆ ಪೂರ್ವಭಾವಿ ಸಭೆ

KannadaprabhaNewsNetwork | Published : Feb 27, 2025 12:30 AM

ಸಾರಾಂಶ

ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಕಾರ್ಕಳಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳ

‘ಕಾಂಗ್ರೆಸ್ ಕುಟುಂಬೋತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಕಾರ್ಕಳಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸಂಜೆ ನಡೆಯಿತು.

ಡಿ‌.ಕೆ.ಶಿವಕುಮಾರ್‌ ನಮ್ಮೂರಿಗೆ ಆಗಮಿಸುತ್ತಿರುವುದು ಸಂತಸದ ಸುದ್ದಿ, ಅವರ ಬೇಟಿಯಿಂದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಲಿದೆ, ಪ್ರತೀ ಬೂತಿನಿಂದ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಮನವಿ ಮಾಡಿದರು.

ಕಾರ್ಕಳ ಬ್ಲಾಕ್ ಅಧ್ಯಕ್ಷ ಶುಭದ ರಾವ್ ಮಾತನಾಡಿ, ಬ್ಲಾಕ್ ಮಟ್ಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಭಾಗವಹಿಸುತ್ತಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ. ಇದು ಕಾರ್ಯಕರ್ತರ ಉತ್ಸವದ ಕಾರ್ಯಕ್ರಮವಾಗಿದೆ. ಹಾಗಾಗಿ ಕಾರ್ಯಕ್ರಮದ ಯಶಸ್ವಿಯಲ್ಲಿ ಕಾರ್ಕಳ ಕಾಂಗ್ರೆಸ್ ಪ್ರತಿಯೊಬ್ಬ ಸದಸ್ಯನ ಪಾತ್ರವೂ ಅವಶ್ಯವಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾಲ್ಗೊಳ್ಳಲಿರುವ ಕಾರ್ಕಳ ಕಾಂಗ್ರೆಸ್ ಕುಟುಂಬಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಸಂಪೂರ್ಣ ಬೆಂಬಲ ಹಾಗೂ ಸಹಕಾರವಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಬಿಪಿನ್ ಚಂದ್ರ ಪಾಲ್, ಹೆಬ್ರಿ ಬ್ಲಾಕ್ ಅಧ್ಯಕ್ಷ ಗೋಪಿನಾಥ ಭಟ್, ಹಿರಿಯ ಕಾಂಗ್ರೆಸ್ ನಾಯಕ ಮಂಜುನಾಥ ಪೂಜಾರಿ ಮುದ್ರಾಡಿ ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಿರಿಯಣ್ಣ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ್ ಪೂಜಾರಿ, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ‌ ದೇವಾಡಿಗ, ಹೆಬ್ರಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಂಕರ್, ಜಿಲ್ಲಾ ಉಪಾದ್ಯಕ್ಷ ಸುಧಾಕರ ಕೋಟ್ಯಾನ್, ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಲಿಕ್ ಅತ್ತೂರು, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ಡಿಸೋಜ, ಕಾರ್ಕಳ ಬ್ಲಾಕ್ ಉಪಾದ್ಯಕ್ಷ ಜಾರ್ಜ್ ಕ್ಯಾಸ್ಟಲಿನೋ, ಇಂಟಕ್ ಜಿಲ್ಲಾಧ್ಯಕ್ಷ ಕಿರಣ್ ಹೆಗ್ಡೆ ಹಾಗೂ ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು, ಚುನಾಯಿತ ಜನಪ್ರತಿನಿಧಿಗಳು, ಪುರಸಭಾ ಸದಸ್ಯರು ಇದ್ದರು. ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ನಿರೂಪಿಸಿದರು, ಅಲ್ಪಸಂಖ್ಯಾತ ಘಟಕದ ಅದ್ಯಕ್ಷ ಶಬ್ಬೀರ್ ಮಿಯಾರು ಸ್ವಾಗತಿಸಿದರು, ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ ವಂದಿಸಿದರು.

Share this article