ಫೆ.8ರಂದು ರಾಜ್ಯ ಮಟ್ಟದ ಸಿಎಂ ಜನಸ್ಪಂದನಕ್ಕೆ ಸರ್ವ ವ್ಯವಸ್ಥೆಗೆ ಸೂಚನೆ

KannadaprabhaNewsNetwork |  
Published : Feb 02, 2024, 01:03 AM IST
11 | Kannada Prabha

ಸಾರಾಂಶ

ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಹಾಜರಿದ್ದು, ವಿಶೇಷ ಆಸಕ್ತಿ ವಹಿಸಿ ಕುಂದು ಕೊರತೆ ನಿವಾರಣೆಗೆ ಕ್ರಮ ವಹಿಸಬೇಕೆಂದು ಎಲ್‌.ಕೆ. ಅತೀಕ್‌ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.8ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದು, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸಲಿದ್ದಾರೆ.ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರು ಪೂರ್ವಸಿದ್ಧತಾ ಸಭೆ ನಡೆಸಿ, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.ಜನಸ್ಪಂದನ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಬೇಕು. ಸಿಎಂ ನಡೆಸುತ್ತಿರುವ ಎರಡನೇ ಜನಸ್ಪಂದನ ಕಾರ್ಯಕ್ರಮ ಇದಾಗಿದ್ದು, ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಹಾಜರಿದ್ದು, ವಿಶೇಷ ಆಸಕ್ತಿ ವಹಿಸಿ ಕುಂದು ಕೊರತೆ ನಿವಾರಣೆಗೆ ಕ್ರಮ ವಹಿಸಬೇಕೆಂದು ಎಲ್‌.ಕೆ. ಅತೀಕ್‌ ಸೂಚಿಸಿದರು.ಸ್ವಚ್ಛತೆ, ಕುಡಿಯುವ ನೀರು, ಲಘು ಉಪಾಹಾರ, ಊಟದ ವ್ಯವಸ್ಥೆ ಮಾಡುವ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕಳೆದ ಬಾರಿಯ ಜನಸ್ಪಂದನದಲ್ಲಿ ಸ್ವೀಕರಿಸಿದ ಅರ್ಜಿಗಳ ತ್ವರಿತ ವಿಲೇವಾರಿ ಮಾಡುವ ಬಗ್ಗೆ ಎಲ್ಲ ಇಲಾಖೆಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ ಅವರು, ಕೆಡಿಪಿ ಸಭೆಯಲ್ಲಿಯೂ ಜನಸ್ಪಂದನ ಅರ್ಜಿ ವಿಲೇವಾರಿ ಪ್ರಗತಿ ಪರಿಶೀಲನೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಜನಸ್ಪಂದನಕ್ಕೆ ಆಗಮಿಸುವ ಜನರ ಅನುಕೂಲಕ್ಕಾಗಿ ಮೆಜೆಸ್ಟಿಕ್ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಲು ಸೂಚಿಸಿದರು.ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪಿಸಿ, ಅದಕ್ಕೆ ಅಗತ್ಯವಿರುವ ಎಲ್ಲ ಉಪಕರಣಗಳನ್ನೂ ಒದಗಿಸಲು ಹಾಗೂ ಸಿಬ್ಬಂದಿ ನಿಯೋಜಿಸಲು ಇ-ಆಡಳಿತ ಇಲಾಖೆಗೆ ಸೂಚಿಸಿದರು.

ಸಿಎಂ ಕಾರ್ಯದರ್ಶಿ ಡಾ.ಕೆ.ವಿ. ತ್ರಿಲೋಕಚಂದ್ರ, ಇ-ಆಡಳಿತ ಇಲಾಖೆ ಕಾರ್ಯದರ್ಶಿ ಉಜ್ವಲ್ ಕುಮಾರ್ ಘೋಷ್‌, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್ ಮತ್ತು ವಿವಿಧ ಇಲಾಖೆಗಳ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಡಿಮೆಯಾಗಲಿದೆ ಬೆಂಗಳೂರು - ದಾವಣರೆ ಮಧ್ಯೆ ಅಂತರ : ಎರಡೂ ಗಂಟೆ ಪ್ರಯಾಣ ಸಮಯ ಉಳಿತಾಯ
ನೇಮಕಾತಿ ಪ್ರಕ್ರಿಯೆ ಇನ್ನು ಸುಗಮ-ಒಳಮೀಸಲು ಬಿಲ್‌ಗೆ ಕೊನೆಗೂ ಗೌರ್ನರ್‌ ಗೆಹಲೋತ್‌ ಅಂಕಿತ