ಹಂಪಿ ಉತ್ಸವ ಸಿದ್ಧತಾ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

KannadaprabhaNewsNetwork |  
Published : Feb 04, 2026, 02:45 AM IST
ಫೋಟೋವಿವರ-(3ಎಚ್‌ಪಿಟಿ2)ಹಂಪಿಯಲ್ಲಿ ನಡೆಯುತ್ತಿರುವ ಹಂಪಿ ಉತ್ಸವ ಸಿದ್ಧತೆ ಕಾರ್ಯಗಳನ್ನು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಮಂಗಳವಾರ ಹಂಪಿಗೆ ಭೇಟಿ ನೀಡಿ ಪೂರ್ವ ಸಿದ್ದತೆ ಕಾರ್ಯ ಪರಿಶೀಲಿಸಿದರು | Kannada Prabha

ಸಾರಾಂಶ

ಹಂಪಿ ಉತ್ಸವಕ್ಕೆ ಇನ್ನೂ 9 ದಿನ ಬಾಕಿ ಉಳಿದಿದ್ದು, ಸಕಲ ಸಿದ್ಧತೆ ಕಾರ್ಯಗಳು ನಡೆಯುತ್ತಿವೆ.

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯಲ್ಲಿ ಹಂಪಿ ಉತ್ಸವ ಸಿದ್ಧತೆ ಕಾರ್ಯ ಭರದಿಂದ ಸಾಗಿದ್ದು, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಂಗಳವಾರ ಹಂಪಿಗೆ ಭೇಟಿ ನೀಡಿ ಪೂರ್ವ ಸಿದ್ಧತೆ ಕಾರ್ಯ ಪರಿಶೀಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಫೆ.13,14 ಮತ್ತು 15 ರಂದು ನಡೆಯುವ ಹಂಪಿ ಉತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಹಂಪಿ ಉತ್ಸವಕ್ಕೆ ಇನ್ನೂ 9 ದಿನ ಬಾಕಿ ಉಳಿದಿದ್ದು, ಸಕಲ ಸಿದ್ಧತೆ ಕಾರ್ಯಗಳು ನಡೆಯುತ್ತಿವೆ.

ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆದಿದೆ. ಈ ಬಾರಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅದ್ಯತೆ ನೀಡಲಾಗಿದೆ. ಕಳೆದ ಉತ್ಸವದಲ್ಲಿ ನಡೆದ ಸಣ್ಣ ಪುಟ್ಟ ತಪ್ಪುಗಳನ್ನು ಸರಿ ಪಡಿಸಿ ಕೊಂಡು ಉತ್ಸವಕ್ಕೆ ಬರುವ ಜನತೆಗೆ ತೊಂದರೆಯಾಗದಂತೆ ಎಲ್ಲ ಅಗತ್ಯ ಕ್ರಮ ವಹಿಸುವುದಾಗಿ ಅವರು ಹೇಳಿದರು.

ಹಂಪಿ ಉತ್ಸವಕ್ಕೆ ಸಿದ್ಧತೆ ಭರದಿಂದ ಸಾಗಿದೆ, ಧ್ವನಿ ಮತ್ತು ಬೆಳಕು ಕಾರ್ಯಕ್ರಮ ವೇದಿಕೆ ಸೇರಿದಂತೆ ಪ್ರಮುಖ 6 ವೇದಿಕೆಗಳು ನಿರ್ಮಾಣವಾಗುತ್ತಿವೆ, ಈ ಬಾರಿ ಹಂಪಿ ಉತ್ಸವಕ್ಕೆ ಡಾ.ಶಿವರಾಜಕುಮಾರ್, ಡಾಲಿ ಧನಂಜಯ್ ಸೇರಿದಂತೆ ಹಲವು ಚಿತ್ರನಟರು ಆಗಮಿಸಿಲಿದ್ದಾರೆ.

ಈ ಬಾರಿಯ ಹಂಪಿ ಉತ್ಸವದ ಪ್ರಮುಖ ಆಕರ್ಷಣೆಯಾಗಲಿದೆ. ಬೇರೆ ಬೇರೆ ವೇದಿಕೆ ಹಂಚಿಕೊಳ್ಳಲಿರೋ ಹೆಸರಾಂತ ಕಲಾವಿದರು ಹಂಪಿ ಉತ್ಸವದ ಮೇರಗು ನೀಡಲಿದ್ದಾರೆ ಎಂದರು. ಮುಖ್ಯವೇದಿಕೆಯಾಗಿರುವ ಗಾಯಿತ್ರೀ ಪೀಠದ ವೇದಿಕೆಯಲ್ಲಿ 50 ಸಾವಿರ ಆಸನಗಳ ವ್ಯವಸ್ಥೆಯನ್ನು ಮಾಡಲಾಗುವುದು, ಕಲಾವಿದರಿಗಾಗಿ ಗ್ರೀನ್ ರೂಂ, ಮಾಧ್ಯಮ ಕೇಂದ್ರ, ಪ್ರಮುಖ ವೇದಿಕೆ ನಿರ್ಮಾಣ ಕಾರ್ಯಕ್ಕೆ ವೇಗ ನೀಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಪ್ರತಿವರ್ಷದಂತೆ ಹಂಪಿಯಲ್ಲಿ ಶಿಲ್ಪಕಲಾ ಶಿಬಿರ ನಡೆಯುತ್ತಿದ್ದು, ವಿಶೇಷ ಶಿಲ್ಪಿಗಳಿಂದ ವಿಭಿನ್ನವಾದ ಶಿಲ್ಪಗಳು ಮೂಡಿಬರುತ್ತಿವೆ. ಚಿತ್ರಕಲಾ ಶಿಬಿರ, ವಿಶೇಷ ಚಿತ್ರ ಕಲಾವಿದರಿಂದ ವಿಭಿನ್ನವಾದ ಕೃತಿಗಳು ಮೂಡಿಬರುತ್ತಿವೆ. ವಸಂತ ವೈಭವ ಭವ್ಯ ಮೆರವಣಿಗೆ ಕಾರ್ಯಕ್ರಮವು ಸಹ ನಡೆಯಲಿದೆ, ಸಹಾಸ ಕ್ರೀಡೆ. ಕುಸ್ತಿ ಸ್ವರ್ಧೆಗಳು ನಡೆಯಲಿವೆ ಎಂದು ಅವರು ವಿವರಿಸಿದರು.

ಉಪವಿಭಾಗಾಧಿಕಾರಿ ಪಿ. ವಿವೇಕಾನಂದ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಂಪಿಯಲ್ಲಿ ನಡೆಯುತ್ತಿರುವ ಹಂಪಿ ಉತ್ಸವ ಸಿದ್ಧತೆ ಕಾರ್ಯಗಳನ್ನು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಂಗಳವಾರ ಹಂಪಿಗೆ ಭೇಟಿ ನೀಡಿ ಪೂರ್ವ ಸಿದ್ಧತೆ ಕಾರ್ಯ ಪರಿಶೀಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌
ಕರಗಕ್ಕೆ ವಿಶ್ವಪ್ರಸಿದ್ಧಿ ಪಡೆದ ಧರ್ಮರಾಯ ದೇಗುಲ ಚಿನ್ನ ಕಳವು