ಜಿಲ್ಲಾಧಿಕಾರಿಗಳಿಂದ ಭೂಸ್ವಾಧೀನ ಪ್ರಗತಿ ಪರಿಶೀಲನೆ

KannadaprabhaNewsNetwork |  
Published : Jul 29, 2026, 01:15 AM IST
9 | Kannada Prabha

ಸಾರಾಂಶ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ-206 ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಂಗಳವಾರ ಭೂಸ್ವಾಧೀನ ಪ್ರಗತಿಯನ್ನು ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರುಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ-206 ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಂಗಳವಾರ ಭೂಸ್ವಾಧೀನ ಪ್ರಗತಿಯನ್ನು ಪರಿಶೀಲಿಸಿದರು. ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ತುಮಕೂರು ಬೈಪಾಸ್ ರಸ್ತೆ ಯೋಜನೆ ಹಾಗೂ ರಾಷ್ಟ್ರೀಯ ಹೆದ್ದಾರಿ-206 ಯೋಜನೆಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ತುಮಕೂರು ಬೈಪಾಸ್ ರಸ್ತೆ ಯೋಜನೆಯಡಿ ದೊಡ್ಡಸಾರಂಗಿ ಹಾಗೂ ಸಾರಂಗಿಪಾಳ್ಯ ಗ್ರಾಮಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಸುಗಮವಾಗಿ ಕೈಗೊಳ್ಳಲು ಪೊಲೀಸ್ ರಕ್ಷಣೆ ಒದಗಿಸುವಂತೆ ರಾಷ್ಟ್ರೀಯ ಹೆದ್ದಾರಿ-206ರ ವಿಶೇಷ ಭೂಸ್ವಾಧೀನಾಧಿಕಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದಾಗ ಪೊಲೀಸ್ ರಕ್ಷಣೆ ಸಂಬಂಧ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಯ್ಯನಬಾವಿ ಹಾಗೂ ರಾಮಶೆಟ್ಟಿಹಳ್ಳಿ ಗ್ರಾಮಗಳಲ್ಲಿ ರಾಷ್ಟ್ರೀಯ ಹೆದ್ದಾರಿ-206 ಯೋಜನೆಗೆ ಸಂಬಂಧಿಸಿದಂತೆ ಉಂಟಾಗಿರುವ ತೊಡಕುಗಳನ್ನು ಶೀಘ್ರ ಇತ್ಯರ್ಥಪಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಅಭಿಯಂತರರಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಅದೇ ರೀತಿ, ಜಯಂತಿ ಗ್ರಾಮ, ಕರಡಿಕೋಡಿ ಗ್ರಾಮ ಹಾಗೂ ದೊಡ್ಡಗುಣಿ ಗ್ರಾಮಗಳಲ್ಲಿ ಯೋಜನೆಗೆ ಇರುವ ತೊಡಕುಗಳನ್ನು ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಇತ್ಯರ್ಥಪಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಅಭಿಯಂತರರಿಗೆ ಸೂಚನೆ ನೀಡಿದರು. ಕೆಪಿಟಿಸಿಎಲ್‌ಗೆ ಅಗತ್ಯವಿರುವ ಜಮೀನಿಗೆ ಸಂಬಂಧಿಸಿದಂತೆ ಈಗಾಗಲೇ ಒದಗಿಸಲಾದ ಭೂಮಿ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಸಭೆಯಲ್ಲಿ ವಿವಿಧ ನೀರಾವರಿ ಯೋಜನೆಗಳ ಮುಖ್ಯಸ್ಥರು, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬರಿಗೈಲಿ ಮಲಗುಂಡಿ ಸ್ವಚ್ಛತೆ: ಕ್ರಮಕ್ಕೆ ಡಿಎಸ್ಸೆಸ್ ಒತ್ತಾಯ
ಕೌಶಲ್ಯಾಧಾರಿತ, ಗುಣಮಟ್ಟದ ಶಿಕ್ಷಣಕ್ಕೆ ದಾವಿವಿ ಒತ್ತು