ಶಿಸ್ತು, ಪರಿಶ್ರಮದಿಂದ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ

KannadaprabhaNewsNetwork |  
Published : Sep 03, 2026, 03:15 AM IST
43 | Kannada Prabha

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಎಲ್ಲ ಸ್ವರ್ಧಾತ್ಮಕ ಪರೀಕ್ಷೆಗಳು ಪಾರದರ್ಶಕವಾಗಿ ನಡೆಯುತ್ತಿದ್ದು,

ಕನ್ನಡಪ್ರಭ ವಾರ್ತೆ ಮೈಸೂರುಅಭ್ಯರ್ಥಿಗಳು ಶಿಸ್ತು, ಪರಿಶ್ರಮ, ಪ್ರಾಮಾಣಿಕತೆ ಮೈಗೂಡಿಸಿಕೊಂಡರೆ ಯಾವುದೇ ಸ್ವರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ಪೊಲೀಸ್ ನಗರ ಮೀಸಲು ಸಶಸ್ತ್ರ ಪಡೆಯ ಉಪ ಆಯುಕ್ತ ಸಿದ್ದನಗೌಡ ವೈ. ಪಾಟೀಲ್ ಹೇಳಿದರು.ನಗರ ಕೇಂದ್ರ ಗ್ರಂಥಾಲಯ ಹಾಗೂ ಜ್ಞಾನ ಗಂಗೋತ್ರಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಹಾಗೂ ಬೆಂಗಳೂರಿನ ಇವರ ಸಹಯೋಗದೊಂದಿಗೆ ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್‌ ಪರೀಕ್ಷೆಗಳಿಗೆ ಹಾಜರಾಗುತ್ತಿರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಒಂದರಂದು ಉಚಿತವಾಗಿ ಅಣುಕು ಪರೀಕ್ಷೆಯನ್ನು ಪೀಪಲ್ಸ್ ಪಾರ್ಕ್‌ನಲ್ಲಿ ನಡೆಯಿತು. ಮುಖ್ಯಅತಿಥಿಯಾಗಿ ಆಗಮಿಸಿದ್ದ ಅವರು ಉದ್ಯೋಗಾಕ್ಷಾಂಕಿಗಳನ್ನು ಉದ್ದೇಶಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಎಲ್ಲ ಸ್ವರ್ಧಾತ್ಮಕ ಪರೀಕ್ಷೆಗಳು ಪಾರದರ್ಶಕವಾಗಿ ನಡೆಯುತ್ತಿದ್ದು, ಅಭ್ಯರ್ಥಿಗಳ ಆಯ್ಕೆಯಲ್ಲಿ ಪ್ರತಿಭೆಯೊಂದೇ ಮಾನದಂಡವಾಗಿದೆ ಎಂದರು.ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಡ್ಡ ದಾರಿಯ ಮೂಲಕ ಯಶಸ್ಸು ಪಡೆಯಲು ಸಾಧ್ಯವಿಲ್ಲ. ಹಾಗಾಗಿ ಸ್ವ-ಪ್ರತಿಭೆ ಮತ್ತು ಪರಿಶ್ರಮ ಬಹಳ ಮುಖ್ಯ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಸರ್ಕಾರಿ ಹುದ್ದೆಗಳಿಗೆ ಆಯ್ಕೆಯಾಗುತ್ತಿರುವುದು ಒಂದು ಸ್ವಾಗತಾರ್ಹ ಬೆಳವಣಿಗೆ. ಯುವಕರು ಎಲ್ಲ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಅವರು ಪರೀಕ್ಷೆಯನ್ನು ಎದುರಿಸುವ ಅನುಭವ ಪಡೆಯುವುದರ ಜೊತೆಗೆ ತಮಗೆ ಸಾಮರ್ಥವುಳ್ಳ ಹಾಗೂ ಆಸಕ್ತಿದಾಯಕ ಇಲಾಖೆಯನ್ನು ಆಯ್ಕೆ ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದರು.ಯುವಕರು ಕೇವಲ ವೈದ್ಯಕೀಯ, ಎಂಜಿನಿಯರಿಂಗ್ ವೃತ್ತಿಗಳನ್ನು ಹೆಚ್ಚು ಹೆಚ್ಚು ಬಯಸುವುದನ್ನು ಬಿಡಬೇಕು. ಇವುಗಳಲ್ಲದೆ ಇನ್ನಿತರ ಕ್ಷೇತ್ರಗಳು ಉತ್ತಮ ಜೀವನಾವಕಾಶಗಳನ್ನು ನೀಡುತ್ತವೆ ಎಂಬುದನ್ನು ಮರೆಯಬಾರದು. ಎಲ್ಲರೂ ವೈದ್ಯರು ಅಥವಾ ಎಂಜಿನಿಯರ್‌ ಗಳೇ ಆದಲ್ಲಿ ಇತರೆ ವೃತ್ತಿಗಳನ್ನು ಮಾಡುವವರು ಯಾರು ಎಂದು ಪ್ರಶ್ನಿಸಿದ ಅವರು ಯಾವುದೇ ವೃತ್ತಿಗೆ ಪ್ರವೇಶ ಪಡೆದ ಮೇಲೆ ಆ ವೃತ್ತಿಗೆ ತಕ್ಕನಾದ ಗೌರವ ತರುವಂತಹ ಹಾಗೂ ನ್ಯಾಯ ಒದಗಿಸುವಂತಹ ಕಾರ್ಯದಲ್ಲಿ ತೊಡಗಬೇಕು ಎಂದು ಒತ್ತಿ ಹೇಳಿದರು.ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕ ಬಿ. ಮಂಜುನಾಥ್ ಅವರು ಮಾತನಾಡಿ, ಇದೇ ತಿಂಗಳಲ್ಲಿ ನಡೆಯುವ ಕೆ.ಎಸ್.ಆರ್.ಪಿ. ಕಾನ್ಸ್ಟೇಬಲ್ ಹುದ್ದೆಗಳಿಗೆ ಆಯ್ಕೆ ಪರೀಕ್ಷೆ ನಡೆಯಲಿದ್ದು, ಇದಕ್ಕೆ ಅನುಗುಣವಾಗಿ ಎರಡು ಅಣುಕು ಪರೀಕ್ಷೆಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಹಾಗೂ ಕೆ.ಎ.ಎಸ್, ಇನ್ನಿತರೆ ಪರೀಕ್ಷೆಗಳಿಗೂ ಇದೇ ರೀತಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದೆಂದು ಹೇಳಿದರು. ಸಹಾಯಕ ಪೊಲೀಸ್ ಆಯುಕ್ತ ಚಂದ್ರಶೇಖರ್ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ಆನಂದ ಇದ್ದರು. ಅಣಕು ಪರೀಕ್ಷೆಗೆ 60 ಕ್ಕೂ ಹೆಚ್ಚು ಉದ್ಯೋಗಾಕ್ಷಾಂಕಿಗಳು ಹಾಜರಾಗಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇತಿಹಾಸ ಪ್ರಸಿದ್ಧ ಚಿಕ್ಕಗಡಿಯಾರಕ್ಕೆ ನವೀಕರಣ ಭಾಗ್ಯ
ರೇಷ್ಮೆಗೂಡಿಗೆ ಬಂಪರ್ ಬೆಲೆ: ಕೆಜಿಗೆ 1100 ರು. ಹೊಸ ದಾಖಲೆ