ಕನ್ನಡಪ್ರಭ ವಾರ್ತೆ, ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪ ಅವರು ತಾಲೂಕಿನ ಬದನಗುಪ್ಪೆಯ ಸರ್ಕಾರಿ ಪ್ರಾಥಮಿಕ ಶಾಲೆಗೆ ಬುಧವಾರ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.
ಮಕ್ಕಳ ಹಾಜರಾತಿ, ಬೋಧನಾ ಪ್ರಕ್ರಿಯೆ, ಇನ್ನಿತರ ವ್ಯವಸ್ಥೆಗಳನ್ನು ಪರಿಶೀಲಿಸಿ ಮಾಹಿತಿ ಪಡೆದುಕೊಂಡರು. ಮಕ್ಕಳೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿ ಕಲಿಕಾ ಸಾಮರ್ಥ್ಯದ ಬಗ್ಗೆ ತಿಳಿದುಕೊಂಡರು.
ಶಾಲೆಯಲ್ಲಿ ಆಗಬೇಕಿರುವ ಮೂಲ ಸೌಲಭ್ಯಗಳ ಕಾಮಗಾರಿ ನಿರ್ವಹಣೆ ಸಂಬಂಧ ಅಗತ್ಯ ಸೂಚನೆಯನ್ನು ನೀಡಿದರು. ಇದಕ್ಕೂ ಮೊದಲು ಮಂಗಳವಾರ ರಾತ್ರಿ ಬೆಂಡರವಾಡಿ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಪಘಾತ ಕುರಿತು ಮಾಹಿತಿ ಪಡೆದರು. ಸಾರ್ವಜನಿಕರು, ವಾಹನ ಸಂಚಾರ ಸುರಕ್ಷತೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.