ಬೆಳೆ ಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

KannadaprabhaNewsNetwork |  
Published : Aug 27, 2025, 01:01 AM IST
ಲಕ್ಷೆö್ಮÃಶ್ವರ ತಾಲೂಕಿನ ಮಾಡಳ್ಳಿ ಗ್ರಾಮದಲ್ಲಿ ಬೆಳೆಹಾನಿಯಾದ ರೈತರ ಜಮೀನುಗಳಿಗೆ ಲ್ಲಾಧಿಕಾರಿ ಸಿ.ಎನ್ ಶ್ರೀಧರ ಬೇಟಿ ನೀಡಿ ವಸ್ತುಸ್ಥಿತಿ ಪರಿಶೀಲಿಸಿದರು. | Kannada Prabha

ಸಾರಾಂಶ

ಯಂತ್ರಗಳ ಸಹಾಯದಿಂದ ಬೆಳೆ ಕಟಾವು ಮಾಡುತ್ತಿರುವುದು, ಒಕ್ಕಲಿಯಾದ ಹೆಸರು ಕಾಳಿನ ಗುಣಮಟ್ಟ ಪರಿಶೀಲಿಸಿದರು

ಲಕ್ಷ್ಮೇಶ್ವರ: ಸತತ ಮಳೆಯಿಂದ ಮುಂಗಾರಿನ ಬೆಳೆಗಳು ಹಾನಿಗೀಡಾದ ತಾಲೂಕಿನ ರೈತರ ಜಮೀನುಗಳಿಗೆ ಬುಧವಾರ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲಿಸಿದರು.

ತಾಲೂಕಿನ ಮಾಡಳ್ಳಿ ಗ್ರಾಮದ ಬಸನಗೌಡ ಪಾಟೀಲ ಅವರ ಹೆಸರು ಬೆಳೆ ಜಮೀನಿನಲ್ಲಿ ಬೆಳೆ ಕಟಾವು ಪ್ರಕ್ರಿಯೆ/ ಪ್ರಾತ್ಯಕ್ಷತೆ, ಮಳೆಯಿಂದ ಹಾಳಾದ ಬೆಳೆ, ಯಂತ್ರಗಳ ಸಹಾಯದಿಂದ ಬೆಳೆ ಕಟಾವು ಮಾಡುತ್ತಿರುವುದು, ಒಕ್ಕಲಿಯಾದ ಹೆಸರು ಕಾಳಿನ ಗುಣಮಟ್ಟ ಪರಿಶೀಲಿಸಿದರು.

ಈ ವೇಳೆ ಕೆಸಿಸಿ ಬ್ಯಾಂಕ್ ನಿರ್ದೇಶಕ ಜಿ.ವಿ.ಪಾಟೀಲ ಮತ್ತು ರೈತರು ಸತತ ಮಳೆಯಿಂದ ಮುಂಗಾರಿನ ಪ್ರಮುಖ ವಾಣಿಜ್ಯ ಬೆಳೆ ಹೆಸರು ಸೇರಿದಂತೆ ಬಹುತೇಕ ಬೆಳೆಗಳು ಹಾಳಾಗಿವೆ. ಮುಂಗಾರಿನ ಕೃಷಿಗೆ ಮಾಡಿದ ಸಾಲ ತೀರಿಸುವುದು ಹೇಗೆ ? ಹಿಂಗಾರಿಗೆ ಮತ್ತೇ ಭೂಮಿ ಹದಗೊಳಸಬೇಕು. ಬದುಕು ಸಾಗಿಸುವುದು ಹೇಗೆಂಬ ಚಿಂತೆಯಲ್ಲಿ ರೈತರಿದ್ದೇವೆ. ಅನಕ್ಷರಸ್ಥ ಮುಗ್ಧ ರೈತರನೇಕರು ಮಾಹಿತಿ ಕೊರತೆಯಿಂದಲೂ ಅರ್ಥಿಕ ಮುಗ್ಗಟ್ಟಿನಿಂದಲೂ ಬೆಳೆವಿಮೆ ಪಾವತಿಸಿಲ್ಲ. ಸಂಕಷ್ಟದ ಸುಳಿಯಲ್ಲಿ ಸಿಕ್ಕು ಒದ್ದಾಡುತ್ತಿರುವ ರೈತರಿಗೆ ಬೆಳೆವಿಮೆ, ಬೆಳೆಹಾನಿ ಪರಿಹಾರ ಕಲ್ಪಿಸುವ ಮೂಲಕ ಹಿತ ಕಾಪಾಡುವ ಕೆಲಸ ಮಾಡಿ ಪುಣ್ಯ ಕಟ್ಟಿಕೊಳ್ಳಿ ಎಂದು ಮನವಿ ಮಾಡಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು ಸಂಬಂಧಪಟ್ಟವರು ಬೆಳೆ ಕಟಾವು ಮಾಡಲು ಬಂದ ಸಂದರ್ಭದಲ್ಲಿ ಅವರಿಗೆ ಇಳುವರಿ ಕಡಿಮೆ ತೋರಿಸುವಂತೆ ಒತ್ತಾಯಿಸುವುದು.ರೈತರ ಮುಗ್ಧತೆಯ ಏಜೆಂಟರು ದುರ್ಲಬ ಪಡಿಸಿಕೊಳ್ಳುತ್ತಿದ್ದಾರೆ.ಇದರಿಂದ ಭವಿಷ್ಯದ ದಿನಮಾನಗಳಲ್ಲಿ ವಿಮಾ ಸೌಲಭ್ಯದಿಂದ ವಂಚಿತರಾಗುತ್ತೇವೆ. ವಸ್ತುಸ್ಥಿತಿ ವರದಿಗೆ ಸಮ್ಮತಿಸಬೇಕು. ಅತಿಯಾದ ಮಳೆಯಿಂದ ಗದಗ ಜಿಲ್ಲಾದ್ಯಂತ ಮುಂಗಾರಿನ ಬೆಳೆಗಳು ಹಾನಿಗೀಡಾಗಿವೆ. ರೈತರು ನಷ್ಟಕ್ಕೊಳಗಾಗಿದ್ದಾರೆ. ಈ ಬಗ್ಗೆ ಕೃಷಿ, ಕಂದಾಯ, ತೋಟಗಾರಿಕೆ ಸೇರಿ ಇಲಾಖೆಯಿಂದ ಜಂಟಿ ಸಮೀಕ್ಷಾ ವರದಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರೂ ಸಹ ಖುದ್ದಾಗಿ ರೈತರ ಜಮೀನುಗಳಿಗೆ ತೆರಳಿ ಪರಿಶೀಲಿಸಿ ಮಾಹಿತಿ ಪಡೆದಿದ್ದಾರೆ. ವಸ್ತುಸ್ಥಿತಿ ಸರ್ಕಾರದ ಗಮನಕ್ಕೆ ತರಲಿದ್ದಾರೆ. ರೈತರಿಗೆ ಬೆಳೆಹಾನಿ ಪರಿಹಾರ ಕಲ್ಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಈ ವೇಳೆ ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಉಪತಹಸೀಲ್ದಾರ ಮಂಜುನಾಥ ಅಮಾಸಿ, ಕಂದಾಯ ನಿರೀಕ್ಷಕ ಎನ್.ಎ. ನದಾಫ್‌, ಸಾಂಖೀಕ ಅಧಿಕಾರಿ ಸುರೇಶ ಸಿಂದಗಿ, ಪ್ರಕಾಶ ಸಿಂದಗಿ, ಹನಮಂತ ಚಿಂಚಲಿ, ಫಕ್ಕಣ್ಣ ನಾಯಕರ, ಅಜ್ಜು ಹೂಗಾರ, ಮುತ್ತಪ್ಪ ಪಾಟೀಲ, ಗ್ರಾಮ ಆಡಳಿತಾಧಿಕಾರಿ ಡಿ.ಎಲ್.ವಿಭೂತಿ ಸೇರಿದಂತೆ ರೈತರನೇಕರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ