ಹಾವೇರಿ: ಹಾನಗಲ್ಲ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಪಂಗಡದ ಬಾಲಕರ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಒದಗಿಸಿರುವ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ವಿದ್ಯಾರ್ಥಿಗಳಿಗೆ ಉತ್ತಮ ವಾತಾವರಣದಲ್ಲಿ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ವಸತಿ ನಿಲಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳಿಗೆ ಒದಗಿಸಬೇಕಾದ ಮೂಲಭೂತ ಸೌಕರ್ಯಗಳಲ್ಲಿ ಯಾವುದೇ ಕೊರತೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು ಸೂಚಿಸಿದರು.
ವಸತಿ ನಿಲಯದ ನಿರ್ವಹಣೆಯಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವುದರ ಜೊತೆಗೆ ವಿದ್ಯಾರ್ಥಿಗಳ ಅಗತ್ಯಗಳಿಗೆ ಸ್ಪಂದಿಸಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾದ ವಾತಾವರಣ ಕಲ್ಪಿಸಿ, ಸರ್ಕಾರದ ಸೌಲಭ್ಯಗಳು ಅವರಿಗೆ ಸಮರ್ಪಕವಾಗಿ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.