ಇಂದಿನಿಂದ ಉಪ ಲೋಕಾಯುಕ್ತರ ಪ್ರವಾಸ, ವಿವಿಧ ಕಾರ್ಯಕ್ರಮ

KannadaprabhaNewsNetwork |  
Published : Jan 22, 2025, 12:34 AM IST
ಚಿತ್ರದುರ್ಗ ಎರಡನೇ ಪುಟದ ಟಿಂಟ್  ಬಾಟಂ | Kannada Prabha

ಸಾರಾಂಶ

ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಜ.22 ರಿಂದ 24 ರವರೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

- ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ- ವಿಚಾರಣೆ, ಸಭೆ-ಸಂವಾದ - - - ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಜ.22 ರಿಂದ 24 ರವರೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಜ.22 ರಂದು ಬೆಳಿಗ್ಗೆ 10 ರಿಂದ 1.30 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ 5 ರವರೆಗೆ ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ. ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸುವರು. ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ, ನೌಕರರಿಂದ ತೊಂದರೆಗೊಳಗಾದ ಸಾರ್ವಜನಿಕರು ಉಪಲೋಕಾಯುಕ್ತರ ಮುಂದೆ ತಮ್ಮ ಅಹವಾಲುಗಳನ್ನು ಅರ್ಜಿ ನಮೂನೆ-1 ಮತ್ತು ನಮೂನೆ-2 ರಲ್ಲಿ ಲಿಖಿತ ರೂಪದಲ್ಲಿ ದಾಖಲೆ, ಸಾಕ್ಷ್ಯಾಧಾರಗಳೊಂದಿಗೆ ಸಲ್ಲಿಸಬಹುದು. ಸಂಜೆ 5.30 ಗಂಟೆಗೆ ಎಸ್.ಜಿ. ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಹಯೋಗದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆ ಕುರಿತಂತೆ ಶಿಕ್ಷಣ, ರೇಷ್ಮೆ, ಕೃಷಿ, ತೋಟಗಾರಿಕೆ ಇಲಾಖೆಗಳು, ಆರ್‌ಟಿಒ, ಸಬ್‍ರಿಜಿಸ್ಟರ್, ಸಮಾಜ ಕಲ್ಯಾಣ ಹಾಗೂ ನ್ಯಾಯಾಂಗ ಇಲಾಖೆ ಅಧಿಕಾರಿಗಳಿಗೆ ಏರ್ಪಡಿಸಿರುವ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಜ.23ರಂದು ಬೆಳಗ್ಗೆ 9.45 ಗಂಟೆಗೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಆವರಣದಲ್ಲಿನ ಬಾರ್ ಅಸೋಸಿಯೇಶನ್ ಸಭಾಂಗಣದಲ್ಲಿ ಚಿತ್ರದುರ್ಗ ಬಾರ್ ಅಸೋಸಿಯೇಶನ್ ಸದಸ್ಯರೊಂದಿಗೆ ಸಾರ್ವಜನಿಕ ಆಡಳಿತ ಮತ್ತು ಗುಡ್ ಗೌರ್ನೆನ್ಸ್ ಕುರಿತು ಸಂವಾದ ನಡೆಸುವರು. ಬೆಳಗ್ಗೆ 11ರಿಂದ 11.30 ರವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಬೆಳಗ್ಗೆ 11.30 ರಿಂದ 1.30 ಗಂಟೆವರೆಗೆ ಹಾಗೂ ಮಧ್ಯಾಹ್ನ 2.30 ರಿಂದ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ಈಗಾಗಲೇ ದಾಖಲಾಗಿರುವ ಪ್ರಕರಣಗಳ ಕುರಿತು ತನಿಖೆ, ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖ ಕಾನೂನು ರೀತ್ಯಾ ವಿಚಾರಣೆ ನಡೆಸುವರು.

ಜ.24ರಂದು ಬೆಳಗ್ಗೆ 9ರಿಂದ 10 ಗಂಟೆವರೆಗೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲೆಯ ನ್ಯಾಯಾಂಗ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆಳಗ್ಗೆ 10.15 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ಹಾಗೂ ಮಧ್ಯಾಹ್ನ 03ರಿಂದ ಸಂಜೆ 05 ರವರೆಗೆ ವಿವಿಧ ಸರ್ಕಾರಿ ಕಚೇರಿಗಳು ಹಾಗೂ ಸಂಸ್ಥೆಗಳಿಗೆ ಅನಿರೀಕ್ಷಿತ ಭೇಟಿ ನೀಡುವರು ಎಂದು ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ ತಿಳಿಸಿದ್ದಾರೆ.

- - - -ಫೋಟೋ: ಫಣೀಂದ್ರ:

PREV

Recommended Stories

KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?