ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಸಂದೇಶ ಯುವಕನ ಬಂಧನ

KannadaprabhaNewsNetwork |  
Published : Oct 06, 2023, 01:17 AM ISTUpdated : Oct 06, 2023, 10:40 AM IST
 Ambedkar statue

ಸಾರಾಂಶ

ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ ಪರಿಣಾಮ ತಾಲೂಕಿನ ಚಿಕ್ಕಗುಂಜಳ ಗ್ರಾಮದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಯುವಕನನ್ನು ಬಂಧಿಸಲಾಗಿದೆ.

ಕನ್ನಡಪ್ರಭ ವಾರ್ತೆ ಕುಂದಗೋಳ ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ ಪರಿಣಾಮ ತಾಲೂಕಿನ ಚಿಕ್ಕಗುಂಜಳ ಗ್ರಾಮದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಯುವಕನನ್ನು ಬಂಧಿಸಲಾಗಿದೆ. ಗ್ರಾಮದ ಬಸನಗೌಡ ಮಂಜುನಾಥಗೌಡ ನೇಗಳೂರ ಎಂಬ ಯುವಕ ತನ್ನ ಇನ್‌ಸ್ಟಾ ಗ್ರಾಂ ಖಾತೆಯಲ್ಲಿ ಅಂಬೇಡ್ಕರ್‌ ಸಂದೇಶಕ್ಕೆ ಅವಹೇಳನಕಾರಿಯಾಗಿ ಸಂದೇಶ ಪೋಸ್ಟ್‌ ಮಾಡಿದ್ದ. ವಿಷಯ ತಿಳಿದು ಗ್ರಾಮಕ್ಕೆ ಕುಂದಗೋಳ ಸಿಪಿಐ ಶಿವಾನಂದ ಅಂಬಿಗೇರ್‌ ತೆರಳಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು. ಯುವಕನ ವಿರುದ್ಧ ಗ್ರಾಮದ ಉಡಚಪ್ಪ ಸಣ್ಣನಿಂಗಪ್ಪ ಪರಸಣ್ಣವರ ಗುಡಿಗೇರಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆತನನ್ನು ಬಂಧಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ