ಅವಹೇಳನಕಾರಿ ಹೇಳಿಕೆ; ಸಮನ್ಸ್ ಜಾರಿ ಆದೇಶ ರದ್ದುಗೊಳಿಸಿದ ಹೈಕೋರ್ಟ್‌

KannadaprabhaNewsNetwork |  
Published : Aug 21, 2025, 01:00 AM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ಮಾದಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪ ಸಂಬಂಧ ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾಖಲಾಗಿರುವ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದ ದೂರನ್ನು ವಿಚಾರಣೆಗೆ ಅಂಗೀಕರಿಸಿ ಸಮನ್ಸ್ ಜಾರಿಗೊಳಿಸಿದ ದಾವಣಗೆರೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಬೆಂಗಳೂರು: ಮಾದಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪ ಸಂಬಂಧ ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾಖಲಾಗಿರುವ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದ ದೂರನ್ನು ವಿಚಾರಣೆಗೆ ಅಂಗೀಕರಿಸಿ ಸಮನ್ಸ್ ಜಾರಿಗೊಳಿಸಿದ ದಾವಣಗೆರೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಪ್ರಕರಣ ರದ್ದುಪಡಿಸುವಂತೆ ಕೋರಿ ಬಿ.ಪಿ ಹರೀಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ ಅರುಣ್ ಅವರ ಪೀಠ, ಕೆಲ ತಾಂತ್ರಿಕ ಹಾಗೂ ಕಾನೂನನಾತ್ಮಕ ಪ್ರಕ್ರಿಯೆ ಪಾಲಿಸದ ಕಾರಣ ಜಿಲ್ಲಾ ನ್ಯಾಯಾಲಯದ ಆದೇಶ ರದ್ದುಪಡಿಸಲಾಗುತ್ತಿದೆ. ಆದರೆ, ವಿವೇಚನೆ ಬಳಿಸಿ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸುವ ಬಗ್ಗೆ ಹೊಸದಾಗಿ ಕ್ರಮ ಕೈಗೊಳ್ಳಬೇಕು ಎಂದು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿ, ಅರ್ಜಿಯನ್ನು ಇತ್ಯರ್ಥಪಡಿಸಿ ಆದೇಶಿಸಿತು.

2023ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಹಿನ್ನೆಲೆಯಲ್ಲಿ ದಲಿತ ಸಮುದಾಯದ ಕೆಲ ಮುಖಂಡರು ಬಿ.ಪಿ. ಹರೀಶ್ ಅವರಿಗೆ ಅಭಿನಂದನೆ ಸಲ್ಲಿಸಲು ಬಂದಿದ್ದರು. ಈ ವೇಳೆ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಿಸಿದ್ದರೂ ದಲಿತರು ನಮಗೆ ಮತ ಹಾಕಿಲ್ಲ.‘ಅಪ್ಪನಿಗೆ ಹುಟ್ಟಿದ ಮಾದಿಗರು ಮಾತ್ರ ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಇದರ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಬಿ. ಹನುಮಂತಪ್ಪ ಹಾಗೂ ಇತರರು ಹರಿಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ವಿರುದ್ಧ ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಹಾಗೂ ಐಪಿಸಿ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಾಗಿತ್ತು. ಇದನ್ನು ವಿಚಾರಣೆಗೆ ಅಂಗೀಕರಿಸಿದ್ದ ದಾವಣಗೆರೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬಿ.ಪಿ. ಹರೀಶ್ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು.

- - -

(ಸಾಂದರ್ಭಿಕ ಚಿತ್ರ)

PREV

Recommended Stories

ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಎಮ್ಮೆ ಕೊಡಿಸುವುದಾಗಿ ಪ್ರೇಮ್‌ಗೆ ವಂಚನೆ : ₹4.75 ಲಕ್ಷ ಮೋಸ