ಕುಮಟಾ- ಶಿರಸಿ ರಸ್ತೆ ಅಭಿವೃದ್ಧಿ ಮಾಡಲು ದೇಶಪಾಂಡೆ ಆಗ್ರಹ

KannadaprabhaNewsNetwork |  
Published : Nov 07, 2024, 11:54 PM IST
7ಎಚ್.ಎಲ್.ವೈ-1: ಹಳಿಯಾಳದಲ್ಲಿ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಚುನಾವಣೆಯ ಸಮಯದಲ್ಲಿ ಮತದಾರರಿಗೆ ನೀಡಿದ ವಾಗ್ದಾನದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಅದಕ್ಕಾಗಿ ₹65ಸಾವಿರ ಕೋಟಿ ಖರ್ಚಾಗುತ್ತಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಬದಲಾವಣೆ ಮಾಡುವುದಿಲ್ಲ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ಹಳಿಯಾಳ: ಹದಗೆಟ್ಟಿರುವ ಕುಮಟಾ- ಶಿರಸಿ ರಸ್ತೆಯ ಅಭಿವೃದ್ಧಿ ಮಾಡಬೇಕು. ಅದಕ್ಕಾಗಿ ಈ ಮಾರ್ಗದ ಸೇತುವೆ ಮತ್ತು ರಸ್ತೆ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ತಾತ್ಕಾಲಿಕವಾಗಿ ಈ ಮಾರ್ಗವನ್ನು ಬಂದ್ ಮಾಡಬೇಕೆಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಆಗ್ರಹಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಈ ಬಾರಿಯ ಅತಿವೃಷ್ಟಿಯಿಂದಾಗಿ ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ಹೆದ್ದಾರಿಗಳು ಸಂಪೂರ್ಣ ಹಾಳಾಗಿದ್ದು, ಇದನ್ನು ನಾನು ಸರ್ಕಾರದ ಗಮನಕ್ಕೆ ತಂದಿದ್ದೇನೆ. ಮುಖ್ಯಮಂತ್ರಿಗಳೊಂದಿಗೂ ಚರ್ಚಿಸಿದ್ದು, ಬೇಗನೆ ರಸ್ತೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದರು. ಚುನಾವಣೆಯ ಸಮಯದಲ್ಲಿ ಮತದಾರರಿಗೆ ನೀಡಿದ ವಾಗ್ದಾನದಂತೆ ಪಂಚ ಗ್ಯಾರಂಜಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಅದಕ್ಕಾಗಿ ₹65ಸಾವಿರ ಕೋಟಿ ಖರ್ಚಾಗುತ್ತಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಬದಲಾವಣೆ ಮಾಡುವುದಿಲ್ಲ. ಅವು ಮುಂದುವರಿಯಲಿವೆ ಎಂದು ಮುಖ್ಯಮಂತ್ರಿಗಳು ಜನತೆಗೆ ಭರವಸೆ ನೀಡಿದ್ದಾರೆ ಎಂದರು.

ಪರಿಸರ ಪ್ರವಾಸೋದ್ಯಮದ ಹೆಸರಿನಲ್ಲಿ ದಾಂಡೇಲಿ, ಜೋಯಿಡಾ ತಾಲೂಕಿನಲ್ಲಿ ಅನಧಿಕೃತವಾಗಿ ಅರಣ್ಯ ಮತ್ತು ಕಂದಾಯ ಜಮೀನನ್ನು ಅತಿಕ್ರಮಿಸಿಕೊಂಡು ನಿರ್ಮಾಣವಾಗಿರುವ ಹೋಮ್ ಸ್ಟೇ, ರೆಸಾರ್ಟ್‌ಗಳನ್ನು ತೆರವು ಮಾಡಬೇಕೆಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪಾಟೀಲ, ಕೆಪಿಸಿಸಿ ಸದಸ್ಯ ಸುಭಾಸ ಕೊರ್ವೆಕರ, ಪುರಸಭಾ ನಾಮನಿರ್ದೇಶಿತ ಸದಸ್ಯ ರವಿ ತೋರಣಗಟ್ಟಿ, ಸತ್ಯಜಿತ ಗಿರಿ ಇದ್ದರು.

ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಹಳಿಯಾಳದ ಕಾಮಧೇನುತಾಲೂಕಿನ ರೈತರ ಪಾಲಿಗೆ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ಕಾಮಧೇನುವಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ರೈತರ ಒತ್ತಾಯ ಹಾಗೂ ಕಾರ್ಖಾನೆಯ ಮಾಲೀಕರ ಕೋರಿಕೆಯ ಮೇರೆಗೆ ರಾಜ್ಯ ಸರ್ಕಾರ ಆದೇಶವನ್ನು ಪರಿಷ್ಕರಿಸಿದ ಹಿನ್ನೆಲೆ ಕಬ್ಬು ನುರಿಸುವ ಹಂಗಾಮು ನ. 15ರ ಬದಲು 8ರಿಂದ ಆರಂಭಗೊಳ್ಳಲಿದೆ. ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯವರು ರೈತರ ಹಿತರಕ್ಷಣೆಯ ದೃಷ್ಟಿಯಲ್ಲಿ ಹೆಜ್ಜೆಯಿಡಬೇಕು. ಹಾಗೆಯೇ ರೈತರು ಕಾರ್ಖಾನೆಗೆ ಕಬ್ಬನ್ನು ನೀಡಿ ಸಹಕರಿಸಬೇಕು ಎಂದರು.

PREV

Recommended Stories

ಬಸವಣ್ಣ ಅಧ್ಯಯನ ಪೀಠ ಸ್ಥಾಪನೆ ಮಾಡಿ: ಮೊಯ್ಲಿ
ಮಾನವ ಸಂಬಂಧಗಳ ಪುನರ್‌ ನಿರ್ಮಾಣ ಬಹು ಮುಖ್ಯ: ಪ್ರೊ.ಸೌರವ್‌