ದಕ್ಷಿಣದಲ್ಲಿ ಸೋತರೂ ಜನಮನ ಗೆದ್ದಿದ್ದೇವೆ: ರೇಣು

KannadaprabhaNewsNetwork |  
Published : May 06, 2026, 01:45 AM IST
6 | Kannada Prabha

ಸಾರಾಂಶ

ದಾವಣಗೆರೆ ದಕ್ಷಿಣದಲ್ಲಿ ನಮ್ಮ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಗೆಲ್ಲಬೇಕೆಂದು ಹಗಲು-ರಾತ್ರಿ ಎನ್ನದೇ ನಾವೆಲ್ಲರೂ ಕೆಲಸ ಮಾಡಿದ್ದು, ನಾವು ಸೋಲುತ್ತೇವೆಂದು ಯಾವತ್ತೂ ಅಂದುಕೊಂಡಿರಲಿಲ್ಲ. ಆದರೆ, ಚುನಾವಣೆಯಲ್ಲಿ ನಾವು ಸೋತರೂ, ಜನರ ಮನಸ್ಸಿನಲ್ಲಿ ಗೆದ್ದಿದ್ದೇವೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

- ಸಿದ್ದರಾಮೋತ್ಸವವೇ ಬೇರೆ, ಬಿಎಸ್‌ವೈ ಅಭಿಮಾನೋತ್ಸವವೇ ಬೇರೆ - - -

ದಾವಣಗೆರೆ: ದಾವಣಗೆರೆ ದಕ್ಷಿಣದಲ್ಲಿ ನಮ್ಮ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಗೆಲ್ಲಬೇಕೆಂದು ಹಗಲು-ರಾತ್ರಿ ಎನ್ನದೇ ನಾವೆಲ್ಲರೂ ಕೆಲಸ ಮಾಡಿದ್ದು, ನಾವು ಸೋಲುತ್ತೇವೆಂದು ಯಾವತ್ತೂ ಅಂದುಕೊಂಡಿರಲಿಲ್ಲ. ಆದರೆ, ಚುನಾವಣೆಯಲ್ಲಿ ನಾವು ಸೋತರೂ, ಜನರ ಮನಸ್ಸಿನಲ್ಲಿ ಗೆದ್ದಿದ್ದೇವೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ನಗರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ನಿವಾಸದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಸ್ಲಿಂ ಅಭ್ಯರ್ಥಿಗಳು ಹೆಚ್ಚು ಮತ ಪಡೆಯುತ್ತಾರೆಂದು ಕೊಂಡಿದ್ದೆವು. ಆದರೆ, ಮುಸ್ಲಿಂ ಅಭ್ಯರ್ಥಿಗಳು ಅಷ್ಟೊಂದು ಮತಗಳನ್ನು ಪಡೆಯಲಿಲ್ಲ ಎಂದರು.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಸೋಲುವ ಭೀತಿ ಶುರುವಾಗಿದೆ. ಹಾಗಾಗಿಯೇ, ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸದೇ, ನಿರಂತರವಾಗಿ ಮುಂದೂಡುತ್ತಿದ್ದಾರೆ. ದಾವಣಗೆರೆ ದಕ್ಷಿಣದಲ್ಲಿ ನಾವು ಗೆಲ್ಲಬೇಕಿತ್ತು ಎಂಬುದಾಗಿ ಈಗ ಜನರೆ ಮಾತನಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ರಾಜಕೀಯಕ್ಕೆ ಜೀವನಕ್ಕೆ 50 ವರ್ಷವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪನವರ ಜೀವನಕ್ಕೆ ಗೌರವ ಸಲ್ಲಿಸುವ ಕೆಲಸವೇ ಚಿತ್ರದುರ್ಗದಲ್ಲಿ ಮೇ 9ರಂದು ನಡೆಯುವ ಬಿಎಸ್‌ವೈ ಅಭಿಮಾನೋತ್ವವಾಗಿದೆ. ಇದು ಯಡಿಯೂರಪ್ಪನವರ ಕುಟುಂಬದ ಕಾರ್ಯಕ್ರಮವಲ್ಲ. ಇಡೀ ರಾಜ್ಯದ ಯಡಿಯೂರಪ್ಪನವರ ಅಭಿಮಾನಿಗಳ ಕಾರ್ಯಕ್ರಮ ಎಂದು ಅವರು ಹೇಳಿದರು.

ಚಿತ್ರದುರ್ಗದ ಬಿಎಸ್ವೈ ಅಭಿಮಾನೋತ್ಸವಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವಾರು ನಾಯಕರು ಆಗಮಿಸಲಿದ್ದಾರೆ. ವಿವಿಧ ಮಠಾಧೀಶರು ಕಾರ್ಯಕ್ರಮದ ಸಾನಿಧ್ಯ ವಹಿಸುತವು. ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವವೇ ಬೇರೆ, ಚಿತ್ರದುರ್ಗದಲ್ಲಿ ನಡೆಯುವ ಬಿಎಸ್‌ವೈ ಅಭಿಮಾನೋತ್ಸವವೇ ಬೇರೆ ಎಂದು ರೇಣುಕಾಚಾರ್ಯ ಸ್ಪಷ್ಟಪಡಿಸಿದರು.

- - -

(-ಫೋಟೋ ಇದೆ.)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಂಚಮಸಾಲಿ ಸಮಾಜದ ಸಂಕಲ್ಪ ಈಡೇರಿಸದ ಟ್ರಸ್ಟ್
ಗುಡಾಳ್‌ನಲ್ಲಿ ನೀರಿನ ಬವಣೆ ನೀಗಿಸಿದ ಶಾಸಕ ಬಸವಂತಪ್ಪ