ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಡೆಂಗ್ಯೂ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಬೇಕು. ಪರಿಸರ ಸ್ವಚ್ಛತೆ ಕಾಪಾಡಿಕೊಂಡು ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಮತ್ತು ಲಾರ್ವಮುಕ್ತ ಸೊಳ್ಳೆಮುಕ್ತ ಶಾಲಾ ಕಾಲೇಜು ಘೋಷಣೆ ಮಾಡಲು ಸರ್ವರು ಶ್ರಮಿಸಬೇಕು ಎಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಮಾತನಾಡಿ, ಇದ್ದಕ್ಕಿದ್ದಂತೆ ಜ್ವರ ಬರುವುದು, ಕಣ್ಣಿನ ಹಿಂಭಾಗ ನೋವು, ಕೀಲು ಮಾಂಸಖಂಡಗಳ ನೋವು, ಹಲವರಿಗೆ ಹೊಟ್ಟೆ ನೋವು ಬರಬಹುದು, ಇವು ಡೆಂಗ್ಯೂ ಜ್ವರದ ಲಕ್ಷಣಗಳು. ಡೆಂಗ್ಯೂ ಜ್ವರ ಬಂದರೆ ನಿಗದಿತವಾದ ಚಿಕಿತ್ಸೆ ಲಭ್ಯವಿಲ್ಲ. ರೋಗಲಕ್ಷಣಗಳಿಗನುಸಾರವಾಗಿ ವೈದ್ಯರು ಚಿಕಿತ್ಸೆಯನ್ನು ನೀಡುತ್ತಾರೆ ಎಂದರು.ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಗುರುಮೂರ್ತಿ ಮಾತನಾಡಿ, ಸೊಳ್ಳೆ ನಿಯಂತ್ರಣಕ್ಕೆ ಮನೆ ಮುಂದೆ ಬೇವಿನ ಹೊಗೆ ಹಾಕಿರಿ, ನಿರುಪಯುಕ್ತ ವಸ್ತುಗಳನ್ನು ದೂರವಿಲೇವಾರಿ ಮಾಡಿ ,ಮನೆಯಲ್ಲಿನ ನೀರಿನ ತಾಣಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ ಮನೆಯ ಮುಂದೆ ಚೆಂಡು ಹೂವು, ಸೇವಂತಿಗೆ ಬೆಳೆಸಿ ಸೊಳ್ಳೆಗಳನ್ನು ನಿಯಂತ್ರಿಸಿ ಎಂದರು.