ಹದಗೆಟ್ಟ ಕೊಳ್ಳಿಗನಹಳ್ಳಿ-ಚಿಕ್ಕಲ್ಬಾಳು-ನಾರಾಯಣಪುರ ರಸ್ತೆಗಳು

KannadaprabhaNewsNetwork |  
Published : Oct 26, 2026, 01:15 AM IST
25ಕೆಆರ್ ಎಂಎನ್ 2,3.ಜೆಪಿಜಿಹದಗೆಟ್ಟಿರುವ ರಸ್ತೆ | Kannada Prabha

ಸಾರಾಂಶ

ಹಾರೋಹಳ್ಳಿ: ತಾಲೂಕು ವ್ಯಾಪ್ತಿಯ ಕೊಳ್ಳಿಗನಹಳ್ಳಿ ರಸ್ತೆ, ಚಿಕ್ಕಬ್ಬಾಳು ರಸ್ತೆ ಹಾಗೂ ನಾರಾಯಣಪುರ ರಸ್ತೆಗಳು ಹಲವು ವರ್ಷಗಳಿಂದ ಹದಗೆಟ್ಟಿದ್ದು, ರಸ್ತೆಯುದ್ದಕ್ಕೂ ಗುಂಡಿಗಳು ಬಿದ್ದಿರುವುದರಿಂದ ಸಾರ್ವಜನಿಕರು, ವಾಹನಗಳ ಓಡಾಟಕ್ಕೆ ತೀವ್ರ ತೊಂದರೆಯಾಗಿದೆ

ಹಾರೋಹಳ್ಳಿ: ತಾಲೂಕು ವ್ಯಾಪ್ತಿಯ ಕೊಳ್ಳಿಗನಹಳ್ಳಿ ರಸ್ತೆ, ಚಿಕ್ಕಬ್ಬಾಳು ರಸ್ತೆ ಹಾಗೂ ನಾರಾಯಣಪುರ ರಸ್ತೆಗಳು ಹಲವು ವರ್ಷಗಳಿಂದ ಹದಗೆಟ್ಟಿದ್ದು, ರಸ್ತೆಯುದ್ದಕ್ಕೂ ಗುಂಡಿಗಳು ಬಿದ್ದಿರುವುದರಿಂದ ಸಾರ್ವಜನಿಕರು, ವಾಹನಗಳ ಓಡಾಟಕ್ಕೆ ತೀವ್ರ ತೊಂದರೆಯಾಗಿದೆ.

ಚೀಲೂರು ಮಾರ್ಗವಾಗಿ ಚಿಕ್ಕಲ್ಬಾಳು-ಬೆಳಗುಳಿವರೆಗಿನ ಸುಮಾರು 3.5 ಕಿಲೋಮೀಟರ್ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಹುಳಗೊಂಡನಹಳ್ಳಿ ಮಾರ್ಗವಾಗಿ ನಾರಾಯಣಪುರ, ಕಡಿಸಿಕೊಪ್ಪ, ಗೊಲ್ಲಹಳ್ಳಿ ಹಾಗೂ ದೊಂಬರದೊಡ್ಡಿವರೆಗಿನ ಸುಮಾರು 7 ಕಿಲೋಮೀಟರ್ ರಸ್ತೆ ದುಸ್ಥಿತಿಯಲ್ಲಿದೆ. ಅದೇ ರೀತಿ ಕೊಳ್ಳಿಗನಹಳ್ಳಿ ಮಾರ್ಗವಾಗಿ ಸಿಂಧ್ಯಾನಗರವರೆಗಿನ ಸುಮಾರು 5.5 ಕಿಲೋಮೀಟರ್ ರಸ್ತೆಯೂ ಹಾಳಾಗಿದ್ದು, ವಾಹನ ಸವಾರರು ಪ್ರತಿನಿತ್ಯ ಸಮಸ್ಯೆ ಎದುರಿಸುವಂತಾಗಿದೆ.

ಈ ರಸ್ತೆಗಳು ಸುತ್ತಮುತ್ತಲಿನ ಹಲವು ಗ್ರಾಮಸ್ಥರಿಗೆ ಪ್ರಮುಖ ಸಂಪರ್ಕ ಮಾರ್ಗಗಳಾಗಿವೆ. ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು, ವೃದ್ಧರು ಸಂಚರಿಸಲು ಹಾಗೂ ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಇದೇ ರಸ್ತೆಗಳನ್ನು ಅವಲಂಬಿಸಿದ್ದಾರೆ. ಆದರೆ ರಸ್ತೆಗಳಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿರುವುದರಿಂದ ವಾಹನಗಳ ಸಂಚಾರ ದುಸ್ತರವಾಗಿದೆ. ವಿಶೇಷವಾಗಿ ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುವುದರಿಂದ ಅವುಗಳ ಆಳ ತಿಳಿಯದೆ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗುವ ಆತಂಕ ಎದುರಾಗಿದೆ. ರಾತ್ರಿ ವೇಳೆಯಲ್ಲಿ ಸಂಚರಿಸುವುದಂತೂ ಮತ್ತಷ್ಟು ಕಷ್ಟಕರವಾಗಿದ್ದು, ಸಾರ್ವಜನಿಕರ ಸುರಕ್ಷತೆಗೆ ಅಪಾಯ ಉಂಟಾಗಿದೆ.

ಶಾಶ್ವತ ದುರಸ್ತಿಗೆ ಗ್ರಾಮಸ್ಥರ ಒತ್ತಾಯ:

ಹಲವು ವರ್ಷಗಳಿಂದ ರಸ್ತೆಗಳು ಹದಗೆಟ್ಟಿದ್ದರೂ ಸಮರ್ಪಕ ದುರಸ್ತಿ ಕಾರ್ಯ ಕೈಗೊಳ್ಳದಿರುವುದಕ್ಕೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಲೋಕೋಪಯೋಗಿ ಇಲಾಖೆ ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ರಸ್ತೆ ಹಾನಿಯ ಪ್ರಮಾಣವನ್ನು ಗುರುತಿಸಿ ಅಗತ್ಯ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕೇವಲ ತಾತ್ಕಾಲಿಕವಾಗಿ ಗುಂಡಿಗಳನ್ನು ಮುಚ್ಚುವುದಕ್ಕೆ ಸೀಮಿತವಾಗದೆ, ರಸ್ತೆಗಳ ಗುಣಮಟ್ಟವನ್ನು ಸುಧಾರಿಸುವ ಶಾಶ್ವತ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು. ಕಾಮಗಾರಿಗೆ ನಿಗದಿತ ಕಾಲಮಿತಿ ರೂಪಿಸಿ, ಗುಣಮಟ್ಟದ ಕಾಮಗಾರಿ ನಡೆಯುವಂತೆ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕು. ಮಳೆಗಾಲದಲ್ಲಿ ನೀರು ನಿಲ್ಲದಂತೆ ಅಗತ್ಯ ಚರಂಡಿ ವ್ಯವಸ್ಥೆಯನ್ನೂ ಕಲ್ಪಿಸಬೇಕು ಎಂದು ಗ್ರಾಮಸ್ಥರು ಬೇಡಿಕೆ ಮುಂದಿಟ್ಟಿದ್ದಾರೆ.

ಅಲ್ಲದೆ, ರಸ್ತೆ ದುರಸ್ತಿ ಕಾರ್ಯವನ್ನು ಅನಗತ್ಯವಾಗಿ ವಿಳಂಬ ಮಾಡದೆ ತುರ್ತಾಗಿ ಆರಂಭಿಸಿ, ಸಾರ್ವಜನಿಕರು ಸುರಕ್ಷಿತವಾಗಿ ಸಂಚರಿಸಲು ಅನುಕೂಲ ಮಾಡಿಕೊಡಬೇಕು. ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸಿ, ಮೂರು ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕೋಟ್ ..............

ಸಾರ್ವಜನಿಕರ ದೈನಂದಿನ ಸಂಚಾರ, ವಿದ್ಯಾರ್ಥಿಗಳ ಶಿಕ್ಷಣ ಹಾಗೂ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕಿದೆ.

- ಕೋಟೆ ರಾಜು, ಸ್ಥಳೀಯರು

25ಕೆಆರ್ ಎಂಎನ್ 2,3.ಜೆಪಿಜಿ

ಹದಗೆಟ್ಟಿರುವ ರಸ್ತೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಡಿದ್ದು ಎನ್‌ಕೆ ಮಲ್ಟಿ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಉದ್ಘಾಟನೆ
ಮನ್‌ ಕಿ ಬಾತ್‌ನಲ್ಲಿ ಕಲ್ಬುರ್ಗಿಯ ತೊಗರಿ ಘಮ