ಕನ್ನಡಪ್ರಭ ವಾರ್ತೆ ಮಂಡ್ಯ
ಈಚೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಬೆಳಗ್ಗೆ 11 ಗಂಟೆಗೆ ನಗರ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಇಂಡುವಾಳು ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿಯನ್ನು ಮೈಸೂರು ವಿಶ್ರಾಂತ ಕುಲಪತಿ ಡಾ.ಎನ್.ಎಸ್.ರಾಮೇಗೌಡ ಹಾಗೂ ದೇವಮ್ಮ ಇಂಡುವಾಳು ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿಯನ್ನು ಮೈಸೂರು ವಿವಿ ಕುಲ ಸಚಿವರಾದ ವಿ.ಆರ್. ಶೈಲಜಾ ಅವರಿಗೆ ಪ್ರದಾನ ಮಾಡಲಾಗುವುದು ಎಂದರು.
ಶಾರದಮ್ಮ ವಿದ್ಯಾರ್ಥಿ ಪುರಸ್ಕಾರಕ್ಕೆ ಇಂಡುವಾಳು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಚರಣ, ಮಾದೇಗೌಡನ ಕೊಪ್ಪಲು ಗ್ರಾಮದ ದೀಪಿಕಾ ಹಾಗೂ ಕೆಂಪಯ್ಯ ವಿದ್ಯಾರ್ಥಿ ಪುರಸ್ಕಾರಕ್ಕೆ ಕೊತ್ತತ್ತಿ ಗ್ರಾಮದ ಸ್ನೇಹ, ಪೀಹಳ್ಳಿ ಗ್ರಾಮದ ಮಾದೇಶ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು. ಅಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬಿಜೆಪಿ ಮುಖಂಡ ಡಾ.ಸಿದ್ದರಾಮಯ್ಯ ಭಾಗವಹಿಸುವರು. ಇಂಡವಾಳು ಎಚ್. ಹೊನ್ನಯ್ಯ ಅವರ ಪುತ್ರ ಎಚ್.ಸಿದ್ದಪ್ಪ ಉಪಸ್ಥಿತರಿರಲಿದ್ದಾರೆ ಎಂದರು. ಕರ್ನಾಟಕ ಸಂಘದ ಕಾರ್ಯದರ್ಶಿ ಸೋಮಶೇಖರ್, ಕೋಣನಹಳ್ಳಿ ಜಯರಾಮ ಉಪಸ್ಥಿತರಿದ್ದರು.