ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ

KannadaprabhaNewsNetwork |  
Published : Aug 21, 2024, 12:33 AM IST
ಕೊರಟಗೆರೆ ಪಟ್ಟಣದಲ್ಲಿ ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ತಾಲೂಕು ಕಛೇರಿಯ ನ್ಯಾಯಾಲಯದ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ದಿವಾಂಗತ ಡಿ.ದೇವರಾಜು ಅರಸು ರವರ ೧೦೯ ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌವಿಸಲಾಯಿತು. | Kannada Prabha

ಸಾರಾಂಶ

ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ

ಕನ್ನಡಪ್ರಭ ವಾರ್ತೆ ಕೊರಟಗೆರೆ

ರಾಜ್ಯದಲ್ಲಿ ಭೂ ಒಡೆತನ, ಮೀಸಲಾತಿ ಸೌಲಭ್ಯ ಕಲ್ಪಿಸಿ ಶೋಷಿತ ಸಮುದಾಯಗಳಿಗೆ ಆಸ್ಮಿತೆಯನ್ನು ತಂದುಕೊಟ್ಟ ಸಾಮಾಜಿಕ ಕ್ರಾಂತಿಯ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರು ಎಂದು ತಹಸೀಲ್ದಾರ್ ಮಂಜುನಾಥ್ ತಿಳಿಸಿದರು.

ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ತಾಲೂಕು ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜು ಅರಸುರವರ ೧೦೯ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಡಿ.ದೇವರಾಜು ಅರಸುರವರ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಿ ಮಾತನಾಡಿ, ೧೯೧೫ರ ಆಗಸ್ಟ್ ೨೦ ರಂದು ಮೈಸೂರಿನ ಹುಣಸೂರು ತಾಲೂಕಿನ ಕಲ್ಲಹಳ್ಳಿ ಎಂಬ ಗ್ರಾಮದಲ್ಲಿ ಜನಿಸಿದ ದೇವರಾಜ ಅರಸುರವರು ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿಯಲ್ಲಿ ಭೂ ಸುಧಾರಣೆ, ಉಳುವವನೇ ಹೊಲದೊಡೆಯ ಕಾನೂನುಗಳನ್ನು ಜಾರಿಗೆ ತಂದು ಬಡ ಜನತೆಗೆ ಜಮೀನು ದೊರೆಯುವಂತೆ ಮಾಡಿದ್ದರು, ಹಿಂದುಳಿದ ವರ್ಗದ ಕಲ್ಯಾಣಕ್ಕಾಗಿ ಹಾವನೂರು ಆಯೋಗವನ್ನು ರಚಿಸಿದ್ದರು ಹಾಗೂ ಪ್ರತಿ ತಾಲೂಕು ಹಾಗೂ ಹೋಬಳಿ ಕೇಂದ್ರಗಳಲ್ಲಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿ ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಕಾರಣರಾಗಿದ್ದರು ಎಂದು ತಿಳಿಸಿದರು.

ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅನಂತರಾಜು ಮಾತನಾಡಿದರು.

ವಿದ್ಯಾರ್ಥಿ ನಿಲಯದಲ್ಲಿ ಅಡಿಗೆಯವರಾಗಿ ಕೆಲಸ ನಿರ್ವಹಿಸುತ್ತಿರುವ ರಾಘವೇಂದ್ರರವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ೧೧೦ ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಲಾಂಗ್‌ಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಧಾನ ಪಡೆದಿದ್ದರಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು ಹಾಗೂ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಾದ ಕೆ.ಅಕ್ಷಯ್, ಸಿ.ಎಸ್.ವರ್ಷಿತಾ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಜಯಸುಧಾ ಮತ್ತು ಧನುಷ್ ರನ್ನು ಗೌರವಿಸಲಾಯಿತು.

ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಅನಿಲ್, ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಈರಪ್ಪನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು, ಸಮಾಜ ಕಲ್ಯಾಣಾಧಿಕಾರಿ ಯಮುನಾ, ಅರಣ್ಯ ಇಲಾಖೆಯ ಅಧಿಕಾರಿಗಳಾದ ರವಿ ಮತ್ತು ಶಿಲ್ಪ, ಪಶು ಇಲಾಖೆಯ ಡಾ.ರವಿ, ತಾಪಂ ಮಧುಸೂಧನ್, ಕಂದಾಯ ಇಲಾಖೆಯ ಆರ್.ಐ ಬಸವರಾಜು, ಮುಖಂಡರಾದ ಚಿಕ್ಕರಂಗಯ್ಯ, ಅರವಿಂದ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ