ದೇವರಾಜ ಅರಸು ದಾಖಲೆ ಸರಿಗಟ್ಟಿದ ಸಿದ್ದು: ಅಭಿಮಾನಿಗಳಿಂದ ಸಂಭ್ರಮ

KannadaprabhaNewsNetwork |  
Published : Jan 07, 2026, 02:00 AM IST
ಪೊಟೋ: 06ಎಸ್‌ಎಂಜಿಕೆಪಿ04ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣದ ಎದುರು ಮಂಗಳವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 2792 ದಿನ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು, ಮಾಜಿ ಸಿಎಂ ದೇವರಾಜ ಅರಸು ಅವರ ದಾಖಲೆ ಸರಿಗಟ್ಟಿದ ಸಂಭ್ರಮದ ಅಂಗವಾಗಿ ಸಿದ್ಧರಾಮಯ್ಯ ಅಭಿಮಾನಿಗಳಿಂದ ಸಾರ್ವಜನಿಕರಿಗೆ ನಾಟಿ ಕೋಳಿ ಬಿರಿಯಾನಿ ಮತ್ತು ಸಿಹಿಯನ್ನು ಹಂಚಲಾಯಿತು. | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2792 ದಿನ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿ, ಮಾಜಿ ಸಿಎಂ ದೇವರಾಜ ಅರಸು ಅವರ ದಾಖಲೆ ಸರಿಗಟ್ಟಿದ ಸಂಭ್ರಮದ ಅಂಗವಾಗಿ ಸಿದ್ದರಾಮಯ್ಯ ಅಭಿಮಾನಿಗಳಿಂದ ಮಂಗಳವಾರ ಅಶೋಕ ವೃತ್ತ, ಮೆಗ್ಗಾನ್ ಆಸ್ಪತ್ರೆ ಮತ್ತು ವಿವಿಧೆಡೆ ನಾಟಿ ಕೋಳಿ ಬಿರಿಯಾನಿ ಮತ್ತು ಸಿಹಿಯನ್ನು ಸಾರ್ವಜನಿಕರಿಗೆ ಹಂಚಲಾಯಿತು.

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2792 ದಿನ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿ, ಮಾಜಿ ಸಿಎಂ ದೇವರಾಜ ಅರಸು ಅವರ ದಾಖಲೆ ಸರಿಗಟ್ಟಿದ ಸಂಭ್ರಮದ ಅಂಗವಾಗಿ ಸಿದ್ದರಾಮಯ್ಯ ಅಭಿಮಾನಿಗಳಿಂದ ಮಂಗಳವಾರ ಅಶೋಕ ವೃತ್ತ, ಮೆಗ್ಗಾನ್ ಆಸ್ಪತ್ರೆ ಮತ್ತು ವಿವಿಧೆಡೆ ನಾಟಿ ಕೋಳಿ ಬಿರಿಯಾನಿ ಮತ್ತು ಸಿಹಿಯನ್ನು ಸಾರ್ವಜನಿಕರಿಗೆ ಹಂಚಲಾಯಿತು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಸಿದ್ದರಾಮಯ್ಯ ಅವರು ಎಲ್ಲಾ ಮುಖ್ಯಮಂತ್ರಿಗಳಿಗಿಂತ ಹೆಚ್ಚಿನ ಅವಧಿ ಯಶಸ್ವಿಯಾಗಿ ಮುಖ್ಯಮಂತ್ರಿಗಳಾಗಿ 16 ಬಾರಿ ಬಜೆಟ್ ಮಂಡನೆ ಮಾಡಿ ದಾಖಲೆ ನಿರ್ಮಿಸಿದ್ದಾರೆ ಎಂದರು.

ಸಿದ್ದರಾಮಯ್ಯ ಅವರಿಗೆ ರಾಜ್ಯದ ಜನರ ಆಶೀರ್ವಾದವಿದೆ. ಉಚಿತ ಅಕ್ಕಿ, ಶಕ್ತಿ ಯೋಜನೆ, ಯುವನಿಧಿ, ಗೃಹಜ್ಯೋತಿ, ಗೃಹಲಕ್ಷ್ಮಿ ಎಂಬ 5 ಗ್ಯಾರಂಟಿಗಳನ್ನು ನಿರಂತರವಾಗಿ ನೀಡಿ ಯಶಸ್ವಿಯಾಗಿದ್ದಾರೆ. ಶಕ್ತಿ ಯೋಜನೆಯಡಿ ಉಚಿತವಾಗಿ ಬಸ್‌ನಲ್ಲಿ ಪ್ರಯಾಣಿಸಿದ ತಾಯಂದಿರು ಮನಪೂರ್ವಕವಾಗಿ ಅವರನ್ನು ಹರಸಿದ್ದಾರೆ. ಕೊಟ್ಟ ಮಾತು ಉಳಿಸಿದ ಏಕೈಕ ಮುಖ್ಯಮಂತ್ರಿ ಅವರು. 56 ಸಾವಿರ ಕೋಟಿ ರು.ಗಳ ಗ್ಯಾರಂಟಿ ಯೋಜನೆಯಲ್ಲಿ ಯಾರಿಗೂ ನಯಾಪೈಸೆ ಕಮಿಷನ್ ಇಲ್ಲದೇ ನೇರವಾಗಿ ಫಲಾನುಭವಿಗಳಿಗೆ ಸಿಗುವ ಹಾಗೆ ಮಾಡಿದ್ದಾರೆ. ಅದ್ದರಿಂದ ಅವರಿಗೆ ಜನರ ಆಶೀರ್ವಾದ ಇದೆ ಎಂದರು.ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಮಾತನಾಡಿ, ಅಂದು ಅರಸು ಇಂದು ಸಿದ್ದರಾಮಯ್ಯ ಬಡವರಿಗೆ ನೆಮ್ಮದಿ ಕೊಟ್ಟವರು. ಅವರ ಗ್ಯಾರಂಟಿ ಯೋಜನೆ ಎಲ್ಲರ ಮನೆಗೂ ಈಗಾಗಲೇ ತಲುಪಿದೆ. ನಮ್ಮ ಕಾರ್ಯಕರ್ತರು ಪ್ರತಿ ಮನೆಗೂ ಭೇಟಿ ನೀಡಿ ಆ ಯೋಜನೆಯ ಪ್ರಾಮುಖ್ಯತೆಯನ್ನು ವಿವರಿಸುವ ಕೆಲಸ ಮಾಡಬೇಕು ಎಂದರು.ಯುವ ನಾಯಕ ಕೆ.ರಂಗನಾಥ್ ಮಾತನಾಡಿ, ರೆಕಾರ್ಡ್ ಮುಖ್ಯಮಂತ್ರಿ ಸಿದ್ಧರಾಮಯ್ಯನವರು. ದೀರ್ಘಾವಧಿ ಮುಖ್ಯಮಂತ್ರಿಯಾಗಿದ್ದಾರೆ. ಪ್ರೀತಿ ಪೂರ್ವಕವಾಗಿ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ. ೩೦ ಅಡಿ ಎತ್ತರದ ಅವರ ಕಟೌಟ್‌ಗೆ ಪುಷ್ಪವೃಷ್ಠಿ ಸಲ್ಲಿಸಿ ಒಟ್ಟು ವಿವಿಧೆಡೆ ೫ ಸಾವಿರಕ್ಕೂ ಹೆಚ್ಚು ಜನರಿಗೆ ನಾಟಿಕೋಳಿ ಬಿರಿಯಾನಿ ಮತ್ತು ಸಿಹಿ ಹಂಚಿ ಹಬ್ಬದ ವಾತಾವರಣ ಮೂಡಿಸಿದ್ದಾರೆ. ಅವರ ಅಭಿಮಾನಿಗಳ ಸಂಭ್ರಮಾಚರಣೆಯ ಮೂಲಕ ಅವರ ಬಗ್ಗೆ ಇರುವ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ ಎಂದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಕಲಗೋಡು ರತ್ನಾಕರ್, ಜಿ.ಡಿ.ಮಂಜುನಾಥ್, ಆರ್.ಸಿ.ನಾಯ್ಕ್, ನಾಗರಾಜ್ ಕಂಕಾರಿ, ಕಲೀಂ ಪಾಷಾ, ಸೈಯದ್ ವಾಹಿದ್ ಅಡ್ಡು, ಹೆಚ್.ಪಿ.ಗಿರೀಶ್, ಸುವರ್ಣಾ ನಾಗರಾಜ್, ಪಾಲಾಕ್ಷಿ, ವಿನಯ್ ತಾಂಡ್ಲೆ, ಶಿವಾನಂದ್, ವಿನೋದ್, ಶರತ್ ಮರಿಯಪ್ಪ, ದರ್ಶನ್, ಅಜೀಜ್ ಅಹಮ್ಮದ್, ಸಂತೋಷ್, ಚಿದಾನಂದ್, ಲೋಕೇಶ್, ಆರೀಫ್, ರೇಖಾ ರಂಗನಾಥ್, ಕುಮರೇಶ್, ಪವನ್, ರಾಕೇಶ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಲ್ಲಿ ಬಸವಣ್ಣ ಜೀವ ವೈವಿಧ್ಯ ಉದ್ಯಾನವನ
ಕೆಎಂಎಫ್‌ನಲ್ಲಿ ಉದ್ಯೋಗದ ನೆಪದಲ್ಲಿ50 ಲಕ್ಷ ವಂಚನೆ:ಇಬ್ಬರ ವಿರುದ್ಧ ಕೇಸ್‌