ಕನ್ನಡಪ್ರಭ ವಾರ್ತೆ ಮಳವಳ್ಳಿ
ಕ್ರಾಂತಿಕಾರಿ ಯೋಜನೆಗಳ ಮೂಲಕ ಅಭಿವೃದ್ಧಿಗೆ ಬುನಾದಿ ಹಾಕಿ ಕೊಟ್ಟ ದೇವರಾಜ ಅರಸು ಅವರು ನಾಡು ಕಂಡ ಅಪ್ರತಿಮ ಮುಖ್ಯಮಂತ್ರಿಗಳಲ್ಲಿ ಒಬ್ಬರು ಎಂದು ತಹಸೀಲ್ದಾರ್ ಡಾ.ಲೋಕೇಶ್ ಬಣ್ಣಿಸಿದರು.ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ದಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿ, ಹಿಂದುಳಿದ ಸಮುದಾಯದ ಕಲ್ಯಾಣಕ್ಕಾಗಿ ತಮ್ಮ ಅಡಳಿತ ಅವಧಿಯಲ್ಲಿ ಹಲವು ಯೋಜನೆ ಜಾರಿಗೊಳಿಸಿ ಅಭಿವೃದ್ಧಿಯ ಹರಿಕಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು ಎಂದು ಸ್ಮರಿಸಿದರು.
ಹಿಂದುಳಿದ ವರ್ಗಗಳ ಆಯೋಗ ರಚಿಸಿ ಯಾವುದೇ ಸರ್ಕಾರಿ ಯೋಜನೆ ಅನುದಾನ ಬಳಕೆಯಲ್ಲಿ ಹಿಂದುಳಿದ ವರ್ಗಗಳಿಗೆ ಇಂತಿಷ್ಟು ಮೀಸಲಾತಿಯನ್ನು ಪ್ರಪ್ರಥಮವಾಗಿ ಜಾರಿಗೆ ತಂದಿರುವುದು ಅವರ ದೂರದೃಷ್ಟಿತ್ವಕ್ಕೆ ಸಾಕ್ಷಿಯಾಗಿದೆ ಎಂದರು.ಮಾಜಿ ಪುರಸಭೆ ಅಧ್ಯಕ್ಷ ದೊಡ್ಡಯ್ಯ ಮಾತನಾಡಿ, ಭೂ ಸುಧಾರಣೆ, ಜೀತಪದ್ಧತಿ ನಿಷೇಧ ಜೊತೆಗೆ 20 ಅಂಶಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದ ದೇವರಾಜ ಅರಸು ಅವರ ಕಾಲದಲ್ಲಿ 1973ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದರು. ಅವರ ಅದರ್ಶ ಗುಣಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕೆಂದು ಹೇಳಿದರು.
ಇದೇ ವೇಳೆ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಚ್.ಮಲ್ಲಿಕಾರ್ಜುನಯ್ಯ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿ.ಸಿ.ರೇಖಾ ಮತ್ತಿತರರು ಹಾಜರಿದ್ದರು.ಕಾಂಗ್ರೆಸ್ ಕಚೇರಿಯಲ್ಲಿ ಅರಸು ಜನ್ಮದಿನ ಆಚರಣೆ
ಮಳವಳ್ಳಿ:ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ದಿ.ದೇವರಾಜ ಅರಸು ಅವರ 110ನೇ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ದೇವರಾಜು ಅರಸು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಟ ನಮನ ಸಲ್ಲಿಸಲಾಯಿತು. ಇದೇ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಪಿರಾಜು, ದೊಡ್ಡಯ್ಯ, ಟಿಎಪಿಸಿಎಂಎಸ್ ನಿರ್ದೇಶಕ ಲಿಂಗರಾಜು, ಪುರಸಭೆ ಸದಸ್ಯರಾದ ಬಸವರಾಜು, ಆನಂದ್, ಯೂತ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಶ್ರೀಕಾಂತ್, ಮುಖಂಡರಾದ ಮುಕ್ರಾಂ, ದಸ್ತಗೀರ್, ಸಿದ್ದಪ್ಪ ಸೇರಿದಂತೆ ಇತರರು ಇದ್ದರು.