ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾದ ದೇವೇಗೌಡರು

KannadaprabhaNewsNetwork |  
Published : Feb 06, 2026, 01:45 AM IST
 ಬೇಡಿಕೆಗಳಿಗೆ ಕೇಂದ್ರ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು. | Kannada Prabha

ಸಾರಾಂಶ

ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ನವದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಹಾಗೂ ಮಾಜಿ ಸಚಿವ ಮತ್ತು ಶಾಸಕರಾದ ಎಚ್.ಡಿ. ರೇವಣ್ಣ ಅವರು ಭೇಟಿ ಮಾಡಿ, ಹಾಸನ ಜಿಲ್ಲೆಯ ರೈಲ್ವೆ ಯೋಜನೆಗಳ ಬಗ್ಗೆ ಮನವಿ ಮಾಡಿದರು. ಮೊಸಳೆ ಹೊಸಳ್ಳಿಯಲ್ಲಿ ಎಲ್ಲ ರೈಲುಗಳ ನಿಲುಗಡೆ, ಚನ್ನರಾಯಪಟ್ಟಣ, ಹೊಳೆನರಸೀಪುರ, ಅರಕಲಗೂಡು, ಕುಶಾಲನಗರ ನಡುವೆ ಹೊಸ ರೈಲು ಮಾರ್ಗಕ್ಕೆ ಸರ್ವೆಗೆ ಈಗಾಗಲೇ ಅನುಮೋದನೆ ಸಿಕ್ಕಿದ್ದು, ಕೂಡಲೇ ಸರ್ವೆ ಕಾರ್ಯ ಆರಂಭಿಸಿ ನುತನ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ನವದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಹಾಗೂ ಮಾಜಿ ಸಚಿವ ಮತ್ತು ಶಾಸಕರಾದ ಎಚ್.ಡಿ. ರೇವಣ್ಣ ಅವರು ಭೇಟಿ ಮಾಡಿ, ಹಾಸನ ಜಿಲ್ಲೆಯ ರೈಲ್ವೆ ಯೋಜನೆಗಳ ಬಗ್ಗೆ ಮನವಿ ಮಾಡಿದರು.ದುದ್ದ ಮೇಲ್ಸೇತುವೆ ಮತ್ತು ಅಂಡರ್‌ಪಾಸ್ ಯೋಜನೆಗೆ 150 ಕೋಟಿ ರು, ಮೊಸಳೆಹೊಸಳ್ಳಿ ಬಳಿ ಮೇಲ್ಸೇತುವೆ ಮತ್ತು ನೂತನ ಫ್ಲಾಟ್‌ಫಾರಂ 120 ಕೋಟಿ ರು, ಮೊಸಳೆ ಹೊಸಳ್ಳಿಯಲ್ಲಿ ಎಲ್ಲ ರೈಲುಗಳ ನಿಲುಗಡೆ, ಚನ್ನರಾಯಪಟ್ಟಣ, ಹೊಳೆನರಸೀಪುರ, ಅರಕಲಗೂಡು, ಕುಶಾಲನಗರ ನಡುವೆ ಹೊಸ ರೈಲು ಮಾರ್ಗಕ್ಕೆ ಸರ್ವೆಗೆ ಈಗಾಗಲೇ ಅನುಮೋದನೆ ಸಿಕ್ಕಿದ್ದು, ಕೂಡಲೇ ಸರ್ವೆ ಕಾರ್ಯ ಆರಂಭಿಸಿ ನುತನ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.ಈ ಎಲ್ಲ ಬೇಡಿಕೆಗಳಿಗೆ ಕೇಂದ್ರ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌