ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಮಹಿಳಾ ಸರ್ಕಾರಿ ಕಾಲೇಜಿನ (ಸ್ವಾಯತ್ತ), ಸಭಾಂಗಣದಲ್ಲಿ ರಾಜ್ಯ ಪತ್ರಾಗಾರ ಇಲಾಖೆ, ವಿಭಾಗೀಯ ಪತ್ರಾಗಾರ ಕಚೇರಿ, ಮೈಸೂರು ಹಾಗೂ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯತ್ತ) ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಐತಿಹಾಸಿಕ ದಾಖಲೆಗಳ ಮತ್ತು ಛಾಯಾ ಚಿತ್ರ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
ಇತಿಹಾಸ ಉಳಿಸಲು ಇತಿಹಾಸದ ದಾಖಲೆಗಳು ಬಹಳ ಮುಖ್ಯ. ದಾಖಲೆಗಳು ಇಲ್ಲವಾದರೆ ಇತಿಹಾಸವನ್ನು ತಿಳಿಯಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಐತಿಹಾಸಿಕ ಇತಿಹಾಸ ತಿಳಿದು ದಾಖಲೆಗಳನ್ನು ಕ್ರೂಢೀಕರಿಸಿ ಮುಂದಿನ ಪೀಳಿಗೆಗೆ ಒದಗಿಸಲು ನೆರವಾಗಬೇಕು ಎಂದರು.ಇತಿಹಾಸಕ್ಕೆ ಸಂಬಂಧಪಟ್ಟ ಪ್ರತಿಯೊಂದು ಕಾರ್ಯಕ್ರಮಗಳು ಅರ್ಥಗರ್ಭಿತವಾಗಿದೆ. ಐತಿಹಾಸಿಕ ದಾಖಲೆಗಳ ಮತ್ತು ಛಾಯಾ ಚಿತ್ರ ಪ್ರದರ್ಶನ ಕಾರ್ಯಕ್ರಮ ಸದುಪಯೋಗ ಪಡೆದುಕೊಂಡು ಮಂಡ್ಯದ ಐತಿಹಾಸಿಕ ಇತಿಹಾಸ, ವಿಶ್ವ ವಿದ್ಯಾಲಯದ ಇತಿಹಾಸ, ಪರಂಪರೆ ಹಾಗೂ ಮೈಸೂರು ಸಂಸ್ಥಾನದ ಇತಿಹಾಸ ತಿಳಿಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಬೇರೆ ದೇಶದ ಪ್ರವಾಸಿಗರು ನಮ್ಮ ದೇಶದ ಸಂಸ್ಕೃತಿಗೆ ಮಾರು ಹೋಗುತ್ತಿರುವಾಗ ಭಾರದ ನಿವಾಸಿಗಳು ನಮ್ಮ ದೇಶದ ಸಂಸ್ಕೃತಿಯನ್ನು ಮರೆಯುತ್ತಿರುವುದು ಸಮಂಜಸವಲ್ಲ. ಪಾಶ್ಚಿಮಾತ್ಯ ಭಾಷೆ ಕಲಿಯಿರಿ. ಆದರೆ, ನಿಮ್ಮ ದೇಶದ ಇತಿಹಾಸ, ಸಂಸ್ಕೃತಿ ಮರೆಯದಿರಿ ಎಂದರು.
ರಾಜ್ಯ ಪತ್ರಾಗಾರ ಇಲಾಖೆ ನಿರ್ದೇಶಕ ಡಾ.ಗವಿಸಿದ್ದಯ್ಯ ಮಾತನಾಡಿ, ದಾಖಲೆಗಳು ಕೇವಲ ಇತಿಹಾಸ ವಿದ್ಯಾರ್ಥಿಗಳಿಗೆ ಸೀಮಿತವಾದದಲ್ಲ. ಪ್ರತಿಯೊಬ್ಬರಿಗೂ ವೈಯಕ್ತಿಕ ಹಾಗೂ ಶಿಕ್ಷಣಕ್ಕಾಗಿ ದಾಖಲೆಗಳ ಅವಶ್ಯಕತೆ ಇದೆ. ದಾಖಲೆ ಕಳೆದುಕೊಂಡರೆ ಇತಿಹಾಸ ಕಳೆದುಕೊಂಡಂತೆ ಹಾಗೂ ದಾಖಲೆಗಳಿಂದ ಕಳೆದು ಹೋದ ಇತಿಹಾಸವನ್ನು ಮರು ಸೃಷ್ಟಿಸಬಹುದು ಎಂದು ಇತಿಹಾಸದ ದಾಖಲೆಗಳ ಮಹತ್ವವನ್ನು ತಿಳಿಸಿದರು.
ಇದೇ ವೇಳೆ ಮಹಿಳಾ ಸರ್ಕಾರಿ ಕಾಲೇಜಿನ (ಸ್ವಾಯತ್ತ) ಪ್ರಾಂಶುಪಾಲರಾದ ಪ್ರೊ.ಗುರುರಾಜ್ ಪ್ರಭು ಕೆ, ಮೈಸೂರು ವಿಭಾಗೀಯ ಪತ್ರಾಗಾರ ಕಚೇರಿ ಉಪ ನಿರ್ದೇಶಕ ಮಂಜುನಾಥ ಎಚ್.ಎಲ್, ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣಗೌಡ ಎಚ್, ಸಹ ಪ್ರಾಧ್ಯಾಪಕರಾದ ಡಾ.ಶಿವರಾಮು ಎಸ್.ಡಾ.ಕವಿತ ಹಾಗೂ ಕೆ.ಎಂ.ಶಾಂತರಾಜು ಟಿ.ಎನ್ ಸೇರಿದಂತೆ ಇನ್ನಿತರರು ಹಾಜರಿದ್ದರು.