ಶಿವಮೊಗ್ಗ: ನಾಣ್ಯ ನೋಟುಗಳ ಸಂಗ್ರಹದ ಹವ್ಯಾಸವನ್ನು ಇಂದಿನ ಪೀಳಿಗೆ ಬೆಳೆಸಿಕೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಕರೆ ನೀಡಿದರು.
ನಾವು ಮಕ್ಕಳಿದ್ದಾಗ ಹಳೆಯ ಕಾಲದ ನಾಣ್ಯಗಳನ್ನು ಡಬ್ಬಗಳಲ್ಲಿ ಸಂಗ್ರಹಿಸುತ್ತಿದ್ದೇವು. ಅವುಗಳ ಮೇಲೆ ನಮಗಿರುವ ಭಾವನೆಗಳು ಮುಖ್ಯವಾಗುತ್ತವೆ ಎಂದರು.
ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ಇಂದಿನ ಮಕ್ಕಳಲ್ಲಿ ಹಳೆಯ ನಾಣ್ಯ ನೋಟುಗಳ ಸಂಗ್ರಹದ ಹವ್ಯಾಸ ಬೆಳೆಸಬೇಕು ಎಂದ ಅವರು, ಇಂತಹ ಪ್ರದರ್ಶನವು ನಮ್ಮ ಗತಕಾಲದ ಇತಿಹಾಸ, ಸಂಸ್ಕೃತಿಯ ಪ್ರತಿಬಿಂಬವಾಗಿದೆ. ನಮ್ಮ ಚರಿತ್ರೆಯ ಮೆಲಕು ಹಾಕಲು ಸಾಧ್ಯವಾಗುತ್ತದೆ ಎಂದರು.ನಮ್ಮ ದೇಶದ ಶ್ರೀಮಂತಿಕೆಯು ಹಳೆಯ ನಾಣ್ಯಗಳಿಂದ ತಿಳಿಯುತ್ತದೆ. ಇತ್ತೀಚೆಗೆ ಲಕ್ಕುಂಡಿಯ ಮನೆಯ ಅಡಿಪಾಯದಲ್ಲಿ ಬಂಗಾರದ ಆಭರಣ, ನಾಣ್ಯಗಳು ಸಿಕ್ಕಿವೆ. ಇದರಿಂದ ನಮ್ಮಲ್ಲಿದ್ದ ಬಂಗಾರದ ವೈಭವ ತಿಳಿದು ಬರುತ್ತದೆ ಎಂದರು.ಸೂಡ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ಭಾರತವನ್ನು ಅನೇಕ ಅರಸರು, ವಿದೇಶಿ ಅಕ್ರಮಣಕಾರರು ಆಳಿದ್ದಾರೆ. ಅವರ ಕಾಲದ ಆಡಳಿತವನ್ನು ತಿಳಿಯಲು ಆಗಿನ ನಾಣ್ಯ ಮತ್ತು ನೋಟುಗಳು ಸಹಕಾರಿ. ಇಂತಹ ಅಮೂಲ್ಯವಾದ ನಾಣ್ಯ ನೋಟುಗಳ ಪ್ರದರ್ಶನವನ್ನು ೩ ದಿನಗಳ ಕಾಲ ಹಮ್ಮಿಕೊಂಡಿರುವುದು ಅತ್ಯುತ್ತಮ ಕೆಲಸ ಎಂದು ಶ್ಲಾಘಸಿದರು. . ಸಮಾರಂಭದ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷ ದೇವದಾಸ್ ಎನ್. ನಾಯಕ್ ವಹಿಸಿದ್ದರು. ಕಾರ್ಯದರ್ಶಿ ಎಸ್. ಚಂದ್ರಕಾಂತ್, ಜಂಟಿ ಕಾರ್ಯದರ್ಶಿ ಎಲ್. ಸುಬ್ರಹ್ಮಣ್ಯ, ಕೋಶಾಧ್ಯಕ್ಷ ವಿನೋದ್ ಕುಮಾರ್ ಜೈನ್, ಮಾಜಿ ಸೂಡ ಅಧ್ಯಕ್ಷ ಜ್ಯೋತಿ ಪ್ರಕಾಶ್ ಮತ್ತಿತರರಿದ್ದರು.