ಕೃಷಿ ಕ್ಷೇತ್ರದಲ್ಲಿ ಮಕ್ಕಳ ಬಳಕೆ ಬಗ್ಗೆ ಕ್ರಿಯಾ ಯೋಜನೆ ರೂಪಿಸಿ

KannadaprabhaNewsNetwork |  
Published : Apr 18, 2026, 03:00 AM IST
ಬೆಳಗಾವಿ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಕೃಷಿ ಕ್ಷೇತ್ರದಲ್ಲಿ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕೆ ಸಂಬಂಧಿಸಿದಂತೆ ನವದೆಹಲಿಯಿಂದ ಜಿಲ್ಲೆಯನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಲಾಗಿದ್ದು, ಸದರಿ ಅಧ್ಯಯನಕ್ಕೆ ಸಂಬಂಧಿಸಿದಂತೆ ಕ್ರಿಯಾ ಯೋಜನೆಯನ್ನು ರೂಪಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕೃಷಿ ಕ್ಷೇತ್ರದಲ್ಲಿ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕೆ ಸಂಬಂಧಿಸಿದಂತೆ ನವದೆಹಲಿಯಿಂದ ಜಿಲ್ಲೆಯನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಲಾಗಿದ್ದು, ಸದರಿ ಅಧ್ಯಯನಕ್ಕೆ ಸಂಬಂಧಿಸಿದಂತೆ ಕ್ರಿಯಾ ಯೋಜನೆಯನ್ನು ರೂಪಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ರಾಷ್ಟ್ರೀಯ ಯೋಜನಾ ಸಮನ್ವಯಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಮೂರು ವರ್ಷಗಳ ಈ ಯೋಜನೆ ಕುರಿತು ವಿಸ್ತೃತ ಕ್ರಿಯಾಯೋಜನೆ ರೂಪಿಸಿ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ನಿರಂತರ ಸಭೆಗಳನ್ನು ಆಯೋಜಿಸುವಂತೆ ಹೇಳಿದರು.

ಈ ಕುರಿತು ಗ್ರಾಮಿಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಕಾರ್ಯಾಗಾರಗಳನ್ನು ಆಯೋಜಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ, ಉದ್ಯೋಗದಾತರು, ಉದ್ಯೋಗಸ್ಥರು ಹಾಗೂ ಗುತ್ತಿಗೆದಾರರಿಗೂ ಕಾರ್ಯಾಗಾರಗಳನ್ನು ಆಯೋಜಿಸಿ ಈ ಯೋಜನೆಯ ಮಾಹಿತಿ ಹಾಗೂ ಜಾಗೃತಿ ಮೂಡಿಸಬೇಕು. ಐ.ಎಲ್.ಓ ಪ್ರತಿನಿಧಿ ಜೊತೆ ನಿರಂತರ ಸಂಪರ್ಕ ಸಾಧಿಸಬೇಕು. ಸಧ್ಯ ರಚಿಸಲಾದ ಸಮಿತಿಯ ಜೊತೆಗೆ ಉಪಸಮಿತಿ ರಚಿಸಿ ಯೋಜನೆಯ ಕುರಿತು ಕ್ರಿಯಾಯೋಜನೆ ರಚಿಸಿ ಯಶಸ್ವಿಯಾಗಿ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು.ರಾಷ್ಟ್ರೀಯ ಯೋಜನಾ ಸಂಯೋಜಕ ರಂಜಿತ ಪ್ರಕಾಶ ಮಾತನಾಡಿ, ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಔ) ಸಾಮಾಜಿಕ ನ್ಯಾಯ ಮತ್ತು ಅಂತರ ರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ಮಾನವ ಮತ್ತು ಕಾರ್ಮಿಕ ಹಕ್ಕುಗಳನ್ನು ಉತ್ತೇಜಿಸಲು ಮೀಸಲಾಗಿರುವ ವಿಶೇಷ ಓ ಸಂಸ್ಥೆಯಾಗಿದೆ. ಯೋಗ್ಯ ಕೆಲಸವನ್ನು ಉತ್ತೇಜಿಸುವುದು, ಉತ್ಪಾದಕ, ಸುರಕ್ಷಿತ ಮತ್ತು ನ್ಯಾಯಯುತ ಕೆಲಸದ ವಾತಾವರಣಗಳನ್ನು ರಚಿಸುವತ್ತ ಗಮನಹರಿಸಲಾಗುತ್ತಿದ್ದು, ಭಾರತದಲ್ಲಿ, ಐಔ ಕೆಲಸದ ಸ್ಥಳದ ಆರೋಗ್ಯ ಮತ್ತು ಸುರಕ್ಷತೆಯನ್ನು ಸುಧಾರಿಸುವಲ್ಲಿ ಕೆಲಸ ಮಾಡುತ್ತದೆ. ತ್ರಿಪಕ್ಷೀಯ ಸಾಮಾಜಿಕ ಸಂವಾದ ಮೂಲಕ ಕಾರ್ಮಿಕ ನೀತಿ ಮತ್ತು ಆರ್ಥಿಕ ಪ್ರಗತಿಯ ಮೇಲೆ ಪ್ರಭಾವ ಬೀರಲು ಸರ್ಕಾರಗಳು, ಉದ್ಯೋಗದಾತರು ಮತ್ತು ಕಾರ್ಮಿಕರ ನಡುವೆ ಸಹಕಾರವನ್ನು ಬೆಳೆಸುವುದರ ಜೊತೆಗೆ ಕೆಲಸದ ಭವಿಷ್ಯದ ಕುರಿತು ಸಂಶೋಧನೆ ಪ್ರಕಟಿಸುವುದು ಮತ್ತು ಅಂತಾರಾಷ್ಟ್ರೀಯ ತರಬೇತಿ ಕೇಂದ್ರದ ಮೂಲಕ ತರಬೇತಿ ಒದಗಿಸುವುದು ಇದರ ಮುಖ್ಯ ಉದ್ದೇಶ. ರಾಜ್ಯದಲ್ಲಿ ಪ್ರಾಯೋಗಿಕವಾಗಿ ರಾಯಚೂರು, ಚಿಕ್ಕಮಗಳೂರು, ಬಾಗಲಕೋಟೆ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ.ನಾಗರಾಜ, ಜಿಪಂ ಯೋಜನಾ ನಿರ್ದೇಶಕ ರವಿಕುಮಾರ ಬಂಗಾರಪ್ಪನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ.ಗಡಾದ, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಮಲ್ಲಿಕಾರ್ಜುನ ಜೋಗುರ, ರಾಜೇಶ ಜಾಧವ, ಕಾರ್ಮಿಕ ನಿರೀಕ್ಷಕರು ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಚೆ ಕಚೇರಿ ವಿಲೀನ ವಿರೋಧಿಸಿ ಪ್ರತಿಭಟನೆ
ಎಸ್‌ಡಿಎ, ಕಂಪ್ಯೂಟರ್ ಆಪರೇಟರ್ ಲೋಕಾ ಬಲೆಗೆ