ಕ್ರೀಡೆಯಲ್ಲಿ ಸೋಲು, ಗೆಲುವು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಿರಿ

KannadaprabhaNewsNetwork |  
Published : Apr 04, 2026, 02:30 AM IST
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಭರತ ಬೊಮ್ಮಾಯಿ ಕ್ರಿಕೆಟ್ ಟ್ರೋಫಿ ಪ್ರಶಸ್ತಿ ಭಾಜಪ ಯುವ ಮುಖಂಡ ಭರತ್ ಬೊಮ್ಮಾಯಿ ವಿತರಣೆ ಮಾಡಿ ಮಾತನಾಡಿದರು. | Kannada Prabha

ಸಾರಾಂಶ

ಕ್ರೀಡೆಯಲ್ಲಿ ಸೋಲು, ಗೆಲುವುಗಳು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಅಂದಾಗ ಮಾತ್ರ ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಬಿಜೆಪಿ ಯುವ ಮುಖಂಡ ಭರತ್ ಬೊಮ್ಮಾಯಿ ಹೇಳಿದರು.

ಶಿಗ್ಗಾಂವಿ: ಕ್ರೀಡೆಯಲ್ಲಿ ಸೋಲು, ಗೆಲುವುಗಳು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಅಂದಾಗ ಮಾತ್ರ ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಬಿಜೆಪಿ ಯುವ ಮುಖಂಡ ಭರತ್ ಬೊಮ್ಮಾಯಿ ಹೇಳಿದರು.ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಭರತ ಬೊಮ್ಮಾಯಿ ಕ್ರಿಕೆಟ್ ಟ್ರೋಫಿ ಪ್ರಶಸ್ತಿ ವಿತರಣೆ ಮಾಡಿ ಮಾತನಾಡಿದ ಅವರು ದುಶ್ಚಟಗಳಿಗೆ ಬಲಿಯಾಗದೇ ಯುವಕರನ್ನು ಕ್ರೀಡೆಗಳತ್ತ ಸೆಳೆದು ಸದೃಢ ಆರೋಗ್ಯ ಹೊಂದಲು ಹಾಗೂ ದೈಹಿಕವಾಗಿ ಆರೋಗ್ಯವಂತರಾಗಿರಲು ನಮ್ಮನ್ನು ನಾವು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.ಕಳೆದ ೨೦ ವರ್ಷಗಳಿಂದ ತಂದೆ ಬಸವರಾಜ ಬೊಮ್ಮಾಯಿಯವರು ತಾಲೂಕಿಗೆ ಅಂಟಿದ್ದ ''''''''''''''''ಹಿಂದುಳಿದ ತಾಲೂಕು'''''''''''''''' ಎಂಬ ಹಣೆಪಟ್ಟಿಯನ್ನು ಅಳಿಸಿ ಹಾಕುವಲ್ಲಿ ಅವರು ಯಶಸ್ವಿಯಾಗಿದ್ದಾರೆ. ತಂದೆಯವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕೈಗೊಂಡ ಹಲವಾರು ಅಭಿವೃದ್ಧಿ ಕಾರ್ಯಗಳು ನನಗೆ ಪ್ರೇರಣೆ ಹಾಗೂ ಸ್ಫೂರ್ತಿಯಾಗಿವೆ. ಯುವಕರು ಮತ್ತು ಮಹಿಳೆಯರ ಉದ್ಯೋಗಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಮೂಲಕ ಅವರ ಅಭಿವೃದ್ಧಿ ಪಥವನ್ನು ನಾನು ಮುಂದುವರಿಸಲಿದ್ದೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಭರತ ಬೊಮ್ಮಾಯಿ ಟ್ರೋಫಿ ಕ್ರಿಕ್ರೆಟ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಸ್ವಸ್ತಿಕ ಕ್ರಿಕೆಟ್ ಕ್ಲಬ್ ಶಿಗ್ಗಾವಿ ತಂಡಕ್ಕೆ ೭೦ ಸಾವಿರ ನಗದು ಬಹುಮಾನ ಮತ್ತು ಟ್ರೋಫಿ ಹಾಗೂ ದ್ವಿತೀಯ ಸ್ಥಾನ ಪಡೆದ ವನಹಳ್ಳಿ ಅಪ್ಪು ಬಾಯ್ಸ್ ಕ್ರಿಕೆಟ್ ಕ್ಲಬ್ ತಂಡಕ್ಕೆ ೪೦ ಸಾವಿರ ನಗದು ಬಹುಮಾನ ಮತ್ತು ಟ್ರೋಫಿ ಅಲ್ಲದೇ ವೈಯಕ್ತಿಕ ಬಹುಮಾನ ಮತ್ತು ಪ್ರಶಸ್ತಿ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ. ಸಂಕನೂರ, ವಿಶ್ವನಾಥ ಹರವಿ, ಅನಿಲ ಸಾತಣ್ಣವರ, ಆನಂದ ಸುಭೇದಾರ, ಮಂಜುನಾಥ ಬ್ಯಾಹಟ್ಟಿ, ಉಮೇಶ ಅಂಗಡಿ, ರೇಣುಕನಗೌಡ ಪಾಟೀಲ, ಸಚಿನ ಮಡಿವಾಳರ, ಚೇತನ ಕಲಾಲ, ಸಂತೊಷ ಸುಭೇದಾರ ಸೇರಿದಂತೆ ಕ್ರೀಡಾಭಿಮಾನಿಗಳು, ಭರತ ಬೊಮ್ಮಾಯಿ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರ
ಯಕ್ಷಧ್ರುವ ಪಟ್ಲ ಫೌಂಡೇಶನ್: ಮಂಗಳೂರು ಘಟಕದ ಅಷ್ಟಮ ಸಂಭ್ರಮ