ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಡಯಟ್‍ನಲ್ಲಿ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 6ನೇ ತರಗತಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧಿಸುತ್ತಿರುವ ಶಿಕ್ಷಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಭಾಷೆಯನ್ನು ಯಾಂತ್ರಿಕವಾಗಿ ಕಲಿಸದೆ ಭಾಷಾ ಕೌಶಲ್ಯಗಳಾದ ಆಲಿಸುವ, ಮಾತನಾಡುವ, ಓದುವ ಮತ್ತು ಬರೆಯುವ ಕೌಶಲ್ಯಗಳಲ್ಲಿ ಸಾಮರ್ಥ್ಯ ಬೆಳೆಸಬೇಕು ಎಂದರು.
ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳನ್ನು ಸಜ್ಜುಗೊಳಿಸಲು ಇಂಗ್ಲಿಷ್ ಭಾಷೆಯಲ್ಲಿ ಸಂವಹನ ಸಾಮರ್ಥ್ಯ ಗಳಿಸಲು ಮಾರ್ಗದರ್ಶನ ಮಾಡಬೇಕು ಎಂದು ಸಲಹೆ ನೀಡಿದರು.ಗ್ರಾಮೀಣ ಪ್ರದೇಶದ ಬಹುತೇಕ ಮಕ್ಕಳು ಇಂಗ್ಲೀಷ್ ವಿಚಾರದಲ್ಲಿ ಭೀತಿ ಇಟ್ಟುಕೊಂಡಿರುವ ಸಾಧ್ಯತೆಗಳಿವೆ. ಇದನ್ನು ಹೋಗಲಾಡಿಸಿ ಅವರಲ್ಲಿ ಕಲಿಕೆ ಆಸಕ್ತಿ ಮೂಡಿಸಬೇಕು. ಇಂಗ್ಲೀಷ್ ಭಾಷಾ ಸಾಮರ್ಥ್ಯವನ್ನು ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕರಾದ ಜ್ಞಾನೇಶ್ವರ, ಗಿರಿಜಾ, ಅರ್ಜುಮಂದ್ ಬಾನು, ರೇವಣ್ಣ, ಎಸ್.ಬಸವರಾಜು, ಸಂಪನ್ಮೂಲ ವ್ಯಕ್ತಿಗಳಾದ ಪ್ರಕಾಶ್, ರಂಜಿತಾ, ಮಲ್ಲಿಕಾರ್ಜುನ, ನಾಗರತ್ನ, ಅನಿಲ್ ಮತ್ತು ಶಿಕ್ಷಕರು ಇದ್ದರು.