ಸಮಾಜ ವಿಜ್ಞಾನ ವಿಷಯದ ವಸ್ತು ಪ್ರದರ್ಶನದ ಉದ್ಘಾಟಿಸಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಸಮಾಜ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಮಾದರಿ ನಿರ್ಮಾಣ ಚಟುವಟಿಕೆಗಳು ಮಕ್ಕಳಲ್ಲಿ ಸೃಜನಾತ್ಮಕತೆ ಬೆಳೆಸುವಲ್ಲಿ ಮಹತ್ತರವಾದ ಪಾತ್ರ ವಹಿಸುತ್ತವೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗುಪ್ತಾ ಹೇಳಿದರು.
ನಗರದ ಶ್ರೀ ಗವಿಸಿದ್ಧೇಶ್ವರ ಸಂಯುಕ್ತ ಪ್ರೌಢಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನದ ಅಂಗವಾಗಿ ಸಮಾಜ ವಿಜ್ಞಾನ ವಿಷಯದ ವಸ್ತು ಪ್ರದರ್ಶನದ ಉದ್ಘಾಟಿಸಿ ಮಾತನಾಡಿದರು.ವಸ್ತು ಪ್ರದರ್ಶನಗಳು ಮಕ್ಕಳಲ್ಲಿ ವಿಭಿನ್ನಾತ್ಮಕ ಆಲೋಚನೆ ಮತ್ತು ಚಿಂತನೆಯನ್ನು ಬೆಳೆಸುವ ಮೂಲಕ ಮಕ್ಕಳ ಅನುಭವಪೂರಿತವಾದ ಕಲಿಕೆಗೆ ಸಹಾಯಕಾರಿ ಆಗುತ್ತದೆ ಎಂದರು.
ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ತಾವು ತಯಾರಿಸಿದ ಮಾದರಿಗಳ ವಿವರಣೆಯನ್ನು ನೀಡಿದರು. ಚನ್ನಬಸಪ್ಪ ಹೊಳೆಯಪ್ಪನವರ ಹಾಗೂ ಲಲಿತ್ ಜೈನ್ ಇತರರಿದ್ದರು. ಶಾಲಾ ಮುಖ್ಯ ಗುರು ಅಮರೇಶ ಎ. ಕರಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಗವಿಸಿದ್ಧಪ್ಪ ಹತ್ತಿ ನಿರೂಪಿಸಿದರು.