ಭವಿಷ್ಯ ಉತ್ತಮಗೊಳ್ಳಲು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ: ಪ್ರಭಂಜನಕುಮಾರ್

KannadaprabhaNewsNetwork |  
Published : Feb 29, 2024, 02:01 AM IST
ಬಳ್ಳಾರಿಯ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ಪುನರ್ ಮನನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಾಲಿಕೆ ಸದಸ್ಯ ಪ್ರಭಂಜನಕುಮಾರ್ ಅವರು ಪ್ರಬಂಧ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.  | Kannada Prabha

ಸಾರಾಂಶ

ಪದವಿ ವ್ಯಾಸಂಗ ಮಾಡುತ್ತಿರುವ ನೀವು ಜವಾಬ್ದಾರಿಯುತವಾಗಿ ವ್ಯಕ್ತಿತ್ವ ರೂಪಿಸಿಕೊಂಡು ಉತ್ತಮ ಭವಿಷ್ಯಕ್ಕೆ ಬುನಾದಿ ಹಾಕಿಕೊಳ್ಳಬೇಕು.

ಬಳ್ಳಾರಿ: ಭವಿಷ್ಯತ್ತಿನಲ್ಲಿ ಉತ್ತಮ ಬದುಕು ನಿಮ್ಮದಾಗಬೇಕೆಂದರೆ ವರ್ತಮಾನದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡರೆ ಮಾತ್ರ ಸಾಧ್ಯ ಎಂದು ಮಹಾನಗರ ಪಾಲಿಕೆಯ ಸದಸ್ಯ ಎಂ. ಪ್ರಭಂಜನಕುಮಾರ್ ತಿಳಿಸಿದರು.

ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮದರ್ಜೆ ಸ್ವಾಯತ್ತ ಕಾಲೇಜಿನಲ್ಲಿ ಏರ್ಪಡಿಸಿದ್ದ ಪುನರ್ ಮನನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯಾವುದೇ ವ್ಯಕ್ತಿಯ ಬದುಕಿನಲ್ಲಿ ಬಾಲ್ಯಾವಸ್ಥೆಯಲ್ಲಿ ಪೋಷಣೆ ಸರಿಯಾಗಿ ಸಿಕ್ಕಾಗ ಹೇಗೆ ಆರೋಗ್ಯವಂತರಾಗುತ್ತಾರೋ, ಅದೇ ರೀತಿ 15ರಿಂದ 25 ವರ್ಷದವರೆಗಿನ ಅವಧಿಯು ವ್ಯಕ್ತಿತ್ವ ರೂಪಿಸುವ ಪ್ರಮುಖ ಘಟ್ಟವಾಗಿದೆ ಎಂದರಲ್ಲದೆ, ಪದವಿ ವ್ಯಾಸಂಗ ಮಾಡುತ್ತಿರುವ ನೀವು ಜವಾಬ್ದಾರಿಯುತವಾಗಿ ನಿಮ್ಮ ವ್ಯಕ್ತಿತ್ವ ರೂಪಿಸಿಕೊಂಡು ಉತ್ತಮ ಭವಿಷ್ಯಕ್ಕೆ ಬುನಾದಿ ಹಾಕಿಕೊಳ್ಳಬೇಕು ಎಂದರು.

ಟಿ. ವಿಶ್ವನಾಥ್, ರಘುಪತಿ ಆಚಾರ್ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಎಚ್.ಕೆ. ಮಂಜುನಾಥ ರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇತ್ತೀಚೆಗೆ ಕಾಲೇಜು ಅಭಿವೃದ್ಧಿ ಸಮಿತಿ ವತಿಯಿಂದ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಪಾಲಿಕೆ ಸದಸ್ಯ ಪ್ರಭಂಜನಕುಮಾರ್ ಅವರಿಗೆ ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಎಸ್.ಕೆ. ಸಲ್ಮಾ, ವಿಶ್ವನಾಥ ನಾಯ್ಕ, ರೇಷ್ಮಾ ಪಾಲಿಕೆ ಸದಸ್ಯ ನೂರ್ ಮೊಹಮ್ಮದ್, ಕನ್ನಡ ವಿಭಾಗದ ಮುಖ್ಯಸ್ಥ ಡಾ. ದಸ್ತಗೀರಸಾಬ ದಿನ್ನಿ ಮತ್ತಿತರರು ವೇದಿಕೆಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಂಗಭೂಮಿ ನಾಡಿನ ಸಂಸ್ಕೃತಿ ಪರಂಪರೆಯ ಪ್ರತಿಬಿಂಬ
ಕರೂರು-ಬಾರಂಗಿ ಸಮಸ್ಯೆ: ನಾಳೆ ಬಿಜೆಪಿ ಪಾದಯಾತ್ರೆ