ಧಾರವಾಡ:
ಜನತಾ ಶಿಕ್ಷಣ ಸಮಿತಿಯ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನವಾಗಿ ಪ್ರಾರಂಭಿಸಲಾದ ಆರ್ಯಭಟ ಗಣಿತ ಸಂಶೋಧನಾ ಕೇಂದ್ರ ಉದ್ಘಾಟಿಸಿದ ಅವರು, ಜೆಎಸ್‌ಎಸ್‌ನ ಎಲ್ಲ ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ಕೇಂದ್ರದ ಪ್ರಯೋಜನ ಪಡೆಯಲಿದ್ದಾರೆ ಎಂದರು.ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಮಾತನಾಡಿ, ವಿದ್ಯಾರ್ಥಿಗಳಿಗೆ ಗಣಿತ ವಿಷಯ ಸ್ವಲ್ಪ ಕಷ್ಟಕರವಾಗಿ ಗೋಚರಿಸುವದರಿಂದ ಆಟವಾಡುತ್ತಲೇ ಕಲಿಯುವಂತಹ ವಾತಾವರಣ ನಿರ್ಮಿಸುವ ಸಲುವಾಗಿ ಈ ಕೇಂದ್ರ ಸ್ಥಾಪಿಸಲಾಗಿದೆ. ಗಣಿತ ವಿಷಯಗಳಿಗೆ ಸಂಬಂಧಿಸಿದ ಮಾದರಿ ಹಾಗೂ ಇಂಟರ್ಯಾಕ್ಟಿವ್ ಬೋರ್ಡ್ ಮುಖಾಂತರ ವಿದ್ಯಾರ್ಥಿಗಳಿಗೆ ಗಣಿತ ವಿಷಯ ಬೋಧನೆ ಮಾಡಲಾಗುತ್ತದೆ ಎಂದರು.
ಈ ವೇಳೆ ಎಸ್‌ಡಿಎಂನ ಕಾರ್ಯದರ್ಶಿ ಜೀವಂಧರಕುಮಾರ, ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ವೀರಣ್ಣ ಬೋಳಿಶೆಟ್ಟಿ, ಡಾ. ಮೋಹನ ತಾವರಗೇರಿ, ಪ್ರಾಚಾರ್ಯರಾದ ಮಹಾವೀರ ಉಪಾಧ್ಯೆ, ಉಷಾ ಸಂತೋಷ, ಸಹ ಸಂಯೋಜಕರಾದ ನಿರ್ಮಲ ಪಾಟೀಲ್, ಸಾವಿತ್ರಿ ಗತಾಡೆ, ಕಮಲಾಕ್ಷಿ ಸಣ್ಣಕ್ಕಿ ಇದ್ದರು.