ಕನ್ನಡಪ್ರಭ ವಾರ್ತೆ ಮಡಿಕೇರಿ
ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಕಾಲೇಜು ಆವರಣದಲ್ಲಿ ನಡೆದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಪರಿಷತ್ತು, ಸಾಂಸ್ಕೃತಿಕ, ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವಿದ್ಯಾರ್ಥಿನಿಯರು ವಿದ್ಯಾಭ್ಯಾಸದ ಜೊತೆಗೆ ಉದ್ಯೋಗಾಧಾರಿತ ಕೌಶಲ್ಯಗಳನ್ನು ರೂಢಿಸಿಕೊಂಡು ಯಶಸ್ವಿ ಪ್ರಜೆಗಳಾಗಿ ಜೀವನ ನಡೆಸಬೇಕು ಎಂದು ಸಲಹೆ ಮಾಡಿದರು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರೊ.ಸೀನಪ್ಪ ಅವರು ವಿದ್ಯಾರ್ಥಿಗಳು ಉದಾತ್ತವಾದ ಆಲೋಚನೆಗಳು, ಆತ್ಮವಿಶ್ವಾಸ, ಶಿಸ್ತು, ಸತತ ಅಭ್ಯಾಸ, ಕನಸುಗಳನ್ನು ಸಾಕಾರಗೊಳಿಸುವಲ್ಲಿ ಪಡಬೇಕಾದ ಸತತ ಪರಿಶ್ರಮ ಮತ್ತಿತರ ರೂಢಿಸಿಕೊಳ್ಳಬೇಕು ಎಂದು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಸರಸ್ವತಿ ಡಿ.ಕೆ.ಅವರು ಈ ದಿನ ಉದ್ಘಾಟನೆಗೊಂಡಿರುವ ಸಾಂಸ್ಕೃತಿಕ ಮತ್ತು ಕ್ರೀಡೆ ಮತ್ತಿತರ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ವೇದಿಕೆಯಾಗಲಿದೆ. ಸಾಧ್ಯವಾದಷ್ಟು ಎಲ್ಲಾ ವಿದ್ಯಾರ್ಥಿಗಳು ತಮಗೆ ದೊರೆತಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಇಂಗ್ಲೀಷ್ ಸಹ ಪ್ರಾಧ್ಯಾಪಕರಾದ ಎನ್.ಪಿ.ಸತೀಶ್, ಗೆಜೆಟೆಡ್ ಮ್ಯಾನೇಜರ್ ಕೆ.ಪಿ.ರವಿಕಿರಣ್, ದೈಹಿಕ ಶಿಕ್ಷಣ ನಿರ್ದೇಶಕರಾದ ರಾಖಿ ಪೂವಣ್ಣ, ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳು ಇದ್ದರು.ಆಶಿತಾ ಮತ್ತು ತಂಡದವರು ಪ್ರಾರ್ಥಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ಸಂಚಾಲಕರಾದ ನಿರ್ಮಲಾ ಅವರು ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಕಿಶೋರ್ ಅವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಪ್ರಥಮ ಪದವಿ ತರಗತಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.