ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ
ಸಾಮರಸ್ಯದಿಂದ ಕನ್ನಡ ಬೆಳೆಸಿ
ಗಡಿ ಪ್ರದೇಶದಲ್ಲಿ ಭಾಷಾ ಸಂಘರ್ಷದ ಬದಲಿಗೆ ಸಾಮರಸ್ಯವನ್ನು ಕಾಪಾಡಿಕೊಂಡು ಬರುವುದರ ಮೂಲಕ ಕನ್ನಡತನಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಹೆಮ್ಮೆಯವಿಚಾರ ಎಂದ ಅವರು ಈ ಭಾಗದಲ್ಲಿ ಕನ್ನಡ ಬಳಕೆಗೆ ಹೆಚ್ಚಿನ ಆದ್ಯತೆ ನೀಡಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕನ್ನಡ ಸಾಹಿತ್ಯ ಪರಿಸಷತ್ ತಾಲೂಕು ಅಧ್ಯಕ್ಷ ಡಿ.ಎನ್.ಕೃಷ್ಣಾರೆಡ್ಡಿ ಮಾತನಾಡಿ, ಕನ್ನಡಿಗರಿಗೆ ಸಂಬಂಧಿಸಿದಂತೆ ಪೂರಕ ಕಾರ್ಯಕ್ರಮಗಳನ್ನು ಹಾಗೂ ಹೋರಾಟಗಳನ್ನು ರೂಪಿಸಿಕೊಂಡು ಬಂದು ಕನ್ನಡಿಗರಲ್ಲಿ ಕನ್ನಡದ ಪ್ರಜ್ಞೆಯನ್ನು ಸದಾ ಜೀವಂತವಾಗಿಸುವ ಕಾರ್ಯಕ್ರಮಗಳನ್ನು ಕನ್ನಡ ಸಾಹಿತ್ಯ ಪರಿಷತ್ ಶತಮಾನಗಳಿಂದ ಮಾಡಿಕೊಂಡು ಬರುತ್ತಿದೆ ಎಂದರು.ಕನ್ನಡ ಸಾಹಿತ್ಯ ಅಧ್ಯಯನ ಮಾಡಿ
ಇದೇ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿಯಲ್ಲಿ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಪ್ರವೀಣ್ ಕುಮಾರ್, ಅಭಿಷೇಕ್, ಗೋವರ್ಧನ್, ತ್ರಿನೀಶ್, ಶಾಪಿಯಾ ಭಾನು ರವರನ್ನು ಕಸಾಪವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಮುಖ್ಯಸ್ಥ ಡಾ.ಸಿ.ಎನ್.ವೆಂಕಟರಾಮರೆಡ್ಡಿ, ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೋ.ತಾಜ್ ಉನ್ನಿಸಾ, ಪ್ರಾಧ್ಯಾಪಕರಾದ ಡಾ.ಅನಿಲ್, ಡಾನಾಗರಾಜ್, ಡಾ.ಮನೋಜ್, ಪ್ರೊ.ಗಂಗಾಧರಪ್ಪ, ಶ್ರೀನಿವಾಸ್, ಓಬಳರೆಡ್ಡಿ ಮತ್ತಿತರರು ಇದ್ದರು.