ಕನ್ನಡಪ್ರಭ ವಾರ್ತೆ ದಾಬಸ್‍ಪೇಟೆ
ಪಟ್ಟಣದ ವಿ- ಕೇರ್ ಇಂಟರ್ ನ್ಯಾಷನಲ್ ಶಾಲಾ ಆವರಣದಲ್ಲಿ ಸಮಾನ ಮನಸ್ಕರ ವೇದಿಕೆ ವತಿಯಿಂದ ಆಯೋಜಿಸಿದ್ದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವುದರಿಂದ ಅವರ ಭವಿಷ್ಯ ಉಜ್ವಲವಾಗುತ್ತದೆ. ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ಶಿಸ್ತನ್ನು ಮೈಗೂಡಿಸಿಕೊಂಡಾಗ ಮಾತ್ರ ಜೀವನದಲ್ಲಿ ಪರಿಪೂರ್ಣ ಯಶಸ್ಸು ಗಳಿಸಲು ಸಾಧ್ಯ. ಸೋಂಪುರ ಹೋಬಳಿಯ 18 ಪ್ರೌಢಶಾಲೆ ಹಾಗೂ 5 ಪಿಯುಸಿ ಕಾಲೇಜಿನ ಸುಮಾರು 60 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಸಮಾನ ಮನಸ್ಕರ ವೇದಿಕೆ ಮುಖಾಂತರ ಆಯೋಜನೆ ಮಾಡಿದ್ದು ಉತ್ತಮ ಕೆಲಸ, ಎಲ್ಲಾ ವಿದ್ಯಾರ್ಥಿಗಳಿಗೆ ಕಲಿಕೋಪಕರಣ ವಿತರಿಸಿರುವುದು ಒಳ್ಳೆಯ ಬೆಳವಣಿಗೆ, ಈ ಸಾರ್ಥಕ ಕಾರ್ಯ ಮುಂದುವರಿಯಲಿ ಎಂದರು.ನೆಲಮಂಗಲ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಗಳಕುಪ್ಪೆ ಗೋವಿಂದರಾಜು ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಹಾಗೂ ಪಟ್ಟಣದ ವಿದ್ಯಾರ್ಥಿಗಳಿಗೆ ಇಂತಹ ವೇದಿಕೆಗಳು ಬಹಳ ಮುಖ್ಯ. ಪ್ರತಿಭಾವಂತರನ್ನು ಗುರುತಿಸಿ ಗೌರವಿಸುವುದರಿಂದ ಇತರೆ ವಿದ್ಯಾರ್ಥಿಗಳಿಗೂ ಸಾಧನೆ ಮಾಡುವ ಪ್ರೇರಣೆ ಸಿಗುತ್ತದೆ. ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉನ್ನತ ಸ್ಥಾನಕ್ಕೇರುವ ಮೂಲಕ ತಂದೆ- ತಾಯಿ ಹಾಗೂ ಊರಿಗೆ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು.
-----
-ಅಂಚೆಮನೆ ರಾಜಶೇಖರ್, ಅಧ್ಯಕ್ಷರು, ವಿ- ಕೇರ್ ಇಂಟರ್ ನ್ಯಾಷನಲ್ ಶಾಲೆ.