ಬಳ್ಳಾರಿಯಲ್ಲಿ ಸಂಭ್ರಮದ ಶ್ರೀ ಭಗೀರಥ ಜಯಂತಿ ಆಚರಣೆಕನ್ನಡಪ್ರಭ ವಾರ್ತೆ ಬಳ್ಳಾರಿ
ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಭಾನುವಾರ ಏರ್ಪಡಿಸಿದ್ದ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವನ್ನು ಮಹರ್ಷಿ ಭಗೀರಥ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಭಗೀರಥರು ಛಲ ಮತ್ತು ದೃಢ ವಿಶ್ವಾಸದಿಂದ ಶಿವನನ್ನು ಮೆಚ್ಚಿಸಲು ಘೋರ ತಪಸ್ಸು ಮಾಡಿದವರು ಎಂದು ತಿಳಿಸಿದರು.ಸಹಾಯಕ ಆಯುಕ್ತ ಪ್ರಮೋದ್ ಮಾತನಾಡಿ, ಸೂರ್ಯವಂಶದ ರಾಜನಾದ ಭಗೀರಥ ಮಹಾರಾಜ ತನ್ನ ಜನರಿಗಾಗಿ ಶಿವನನ್ನು ಕುರಿತು ತಪಸ್ಸು ಮಾಡಿ ಗಂಗೆಯನ್ನು ಧರೆಗೆ ತಂದ ಮಹಾ ಪುರುಷ. ಅವರ ತತ್ವ-ಸಿದ್ದಾಂತಗಳು ಇಂದಿಗೂ ಪ್ರಸ್ತುತ ಎಂದರು.
ಕನ್ನಡ ಉಪನ್ಯಾಸಕ ಅಮಾತಿ ಬಸವರಾಜ ವಿಶೇಷ ಉಪನ್ಯಾಸ ನೀಡಿ, ಭಗೀರಥರು ಶಿವನನ್ನು ಮೆಚ್ಚಿಸಲು ತಪಸ್ಸು ಮಾಡಿದವರು. ಪವಿತ್ರ ಗಂಗೆಯನ್ನು ತಪಸ್ಸು ಮಾಡುವ ಮೂಲಕ ಸ್ವರ್ಗದಿಂದ ಭೂಮಿಯ ಮೇಲೆ ತರಿಸಿದವರು ಎಂದರು.
ಈ ಸಂದರ್ಭ ಮಹಾನಗರ ಪಾಲಿಕೆಯ ಸಭಾ ನಾಯಕ ಪಿ.ಗಾದೆಪ್ಪ, ಜಿಲ್ಲಾ ಭಗೀರಥ ಉಪ್ಪಾರ ಸಂಘ ಅಧ್ಯಕ್ಷ ಹನುಮೇಶ್ ಉಪ್ಪಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಸಮಾಜದ ಮುಖಂಡರು, ಜನಪ್ರತಿನಿಧಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಭಗೀರಥ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಯು ಸಡಗರದಿಂದ ನಡೆಯಿತು. ಮೆರವಣಿಗೆಯು ನಗರದ ರಾಜ್‌ಕುಮಾರ್ ರಸ್ತೆಯ ಮುನ್ಸಿಪಲ್ ಕಾಲೇಜು ಮೈದಾನದಿಂದ ಆರಂಭಗೊಂಡು ಗಡಿಗಿ ಚೆನ್ನಪ್ಪ ವೃತ್ತ-ಬೆಂಗಳೂರು ರಸ್ತೆ-ಹಳೆ ಬ್ರೂಸ್ ಪೇಟೆ ಪೊಲೀಸ್ ಠಾಣೆ ರಸ್ತೆ-ತೇರು ಬೀದಿ-ಹೆಚ್.ಆರ್.ಗವಿಯಪ್ಪ ವೃತ್ತ- ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ಸಾಗಿ ಬಂದು ಸಂಪನ್ನಗೊಂಡಿತು. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸಿ ಮೆರಗು ನೀಡಿದವು.