ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ

KannadaprabhaNewsNetwork |  
Published : Jun 01, 2025, 03:36 AM IST
31-ಎನ್ಪಿ ಕೆ-1. ನಾಪೋಕ್ಲು ಮಹಿಳಾ ಸಮಾಜದಲ್ಲಿ ಗೋಣಿಕೊಪ್ಪದ ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಇಲಾಖೆಯ ಸ೦ಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮವನ್ನು ನಾಪೋಕ್ಲು ಗ್ರಾಮ ಪಂಚಾಯಿತಿ ಸದಸ್ಯ ಕುಲ್ಲೇಟಿರ ಅರುಣ್ ಬೇಬ ಉದ್ಘಾಟಿಸಿದರು. 31-ಎನ್ಪಿ ಕೆ-2.ನಾಪೋಕ್ಲು ಮಹಿಳಾ ಸಮಾಜದಲ್ಲಿ ಗೋಣಿಕೊಪ್ಪದ ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಇಲಾಖೆಯ ಸ೦ಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮದಲ್ಲಿ ಕೃಷಿ  ಇಲಾಖೆಯಸಹಾಯಕ ನಿರ್ದೇಶಕ  ಡಾ.ಪರಮೇಶ್  ಮಾತನಾಡಿದರು.31-ಎನ್ಪಿ ಕೆ-3..ನಾಪೋಕ್ಲು ಮಹಿಳಾ ಸಮಾಜದಲ್ಲಿ ಗೋಣಿಕೊಪ್ಪದ ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಇಲಾಖೆಯ ಸ೦ಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರೈತರು. | Kannada Prabha

ಸಾರಾಂಶ

ಬಿತ್ತನೆ ಬೀಜಗಳು, ಕೃಷಿ ಪರಿಕರಗಳು, ಯಂತ್ರೋಪಕರಣಗಳು ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿದ್ದು ರೈತರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಪರಮೇಶ್‌ ಹೇಳಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಬಿತ್ತನೆ ಬೀಜಗಳು, ಕೃಷಿ ಪರಿಕರಗಳು, ಯಂತ್ರೋಪಕರಣಗಳು ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿದ್ದು ರೈತರು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಪರಮೇಶ್ ಹೇಳಿದರು.

ಗೋಣಿಕೊಪ್ಪದ ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಇಲಾಖೆಯ ಸ೦ಯುಕ್ತ ಆಶ್ರಯದಲ್ಲಿ ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿದ್ದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಆಸಕ್ತ ರೈತರು ಅರ್ಜಿ ಸಲ್ಲಿಸಿ:

ಉಳುಮೆ ಯಂತ್ರ , ಕಟಾವು ಯಂತ್ರ , ಟಾರ್ಪಲಿನ್ ಸೇರಿದಂತೆ ವಿವಿಧ ಕೃಷಿ ಪರಿಕರಗಳು ರೈತ ಕೇಂದ್ರದಲ್ಲಿ ಲಭ್ಯವಿದ್ದು ಆಸಕ್ತ ರೈತರು ಅರ್ಜಿ ಸಲ್ಲಿಸಿ ಅವುಗಳನ್ನು ಪಡೆದುಕೊಳ್ಳಬಹುದಾಗಿದೆ. ಕೃಷಿ ಪರಿಕರಗಳು ಸಾಮಾನ್ಯ ರೈತರಿಗೆ ಶೇಕಡ 50 ದರದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇಕಡ 90 ದರದಲ್ಲಿ ಲಭ್ಯವಿದೆ. ಬತ್ತದ ಬಿತ್ತನೆ ಬೀಜವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ 937.50 ರು. ಗಳಿಗೆ ವಿತರಿಸಲಾಗುವುದು ಎಂದರು.

ಹಿಂದೆ ಸಾವಯವ ಗೊಬ್ಬರ ಹೆಚ್ಚು ಬಳಕೆಯಾಗುತ್ತಿತ್ತು. ಈಗ ಕೃಷಿಗೆ ಮಹತ್ವ ಹೆಚ್ಚಿದ್ದು ಲಘು ಪೋಷಕಾಂಶಗಳನ್ನು ಒದಗಿಸುವ ಅಗತ್ಯವಿದೆ. ಸಕಾಲದಲ್ಲಿ ಅವುಗಳನ್ನು ಬಳಕೆ ಮಾಡುವುದರಿಂದ ಉತ್ತಮ ಇಳುವರಿ ಪಡೆಯಬಹುದಾಗಿದೆ ಎಂದರು.

ಉತ್ತಮ ಇಳುವರಿ ಪಡೆಯಬಹುದು:

ಕೃಷಿ ವಿಜ್ಞಾನ ಕೇಂದ್ರದ ಡಾ. ಮೋಹನ್ ಕುಮಾರ್ ಮಾತನಾಡಿ, ರೈತರು ಉತ್ತಮ ಇಳುವರಿ ಪಡೆಯಲು 17 ಸಸ್ಯ ಪೋಷಕಾಂಶಗಳು ಬೇಕಿವೆ. ರಸಗೊಬ್ಬರ, ಸಸ್ಯ ಪೋಷಕಾಂಶಗಳನ್ನು ಸಕಾಲದಲ್ಲಿ ಪೂರೈಸುವುದರಿಂದ ಉತ್ತಮ ಇಳುವರಿ ಪಡೆಯಬಹುದು. ಸಾರಜನಕ, ರಂಜಕ ಪೊಟ್ಯಾಶ್ ಸೇರಿದಂತೆ ಅಗತ್ಯ ಪೋಷಕಾಂಶಗಳನ್ನು ರೈತರು ಸಸ್ಯಗಳಿಗೆ ಒದಗಿಸಬೇಕು. ಮಣ್ಣಿನ ಸಾರವನ್ನು ಕಾಪಾಡಿ ಉತ್ತಮ ಗುಣಮಟ್ಟದ ಬಿತ್ತನೆ ಬೀಜದ ಬಳಕೆ ಮಾಡಬೇಕು ಎಂದರು.

ಪಶುವೈದ್ಯಾಧಿಕಾರಿ ಡಾ. ಶಿಲ್ಪ ಅವರು ಇಲಾಖೆಯಲ್ಲಿ ಲಭ್ಯವಿರುವ ಕಾಲು ಮತ್ತು ಬಾಯಿ ರೋಗ ಹಾಗೂ ಹಂದಿ ಜ್ವರ ವಿರುದ್ಧ ಪ್ರಾಣಿಗಳಿಗೆ ಸಕಾಲಿಕ ಲಸಿಕೆ ಹಾಕುವುದು ಇತರ ಸೇವೆಗಳ ಬಗ್ಗೆ ಮಾತನಾಡಿದರು.

ಕೃಷಿ ವಿಜ್ಞಾನಿ ಡಾ. ಬಸವಲಿಂಗಯ್ಯ ಅವರು ಬತ್ತದ ಬೀಜ ಆಯ್ಕೆ, ಸಂಸ್ಕರಣೆಯ ಮಹತ್ವವನ್ನು ಹಾಗೂ ಇನ್ನಿತರ ವಿಷಯಗಳನ್ನು ರೈತರಿಗೆ ಮನಮುಟ್ಟುವಂತೆ ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಸದಸ್ಯ ಕುಲ್ಲೇಟಿರ ಅರುಣ್ ಬೇಬ ಕಾರ್ಯಕ್ರಮ ಉದ್ಘಾಟಿಸಿದರು.

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಪ್ರಭಾಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ದವಸ, ಧಾನ್ಯ, ಹಣ್ಣು ಹಂಪಲುಗಿಡಗಳ ಪ್ರದರ್ಶನದ ಮೂಲಕ ರೈತರಿಗೆ ಕೃಷಿ ಪೂರಕ ಮಾಹಿತಿಗಳನ್ನು ನೀಡಲಾಯಿತು. ಅಭಿಯಾನದಲ್ಲಿ ಪಾಲ್ಗೊಂಡಿದ್ದ ರೈತರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ನಾಪೋಕ್ಲು

ಹೋಬಳಿಯ 78 ರೈತರು ವಿಕಸಿತ ಕೃಷಿ ಸಂಕಲ್ಪ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ