ಶೃಂಗೇರಿ ಕ್ಷೇತ್ರದಲ್ಲಿ ಅಧಿಕಾರಿಗಳು ಶಾಸಕರ ಕೈಗೊಂಬೆಗಳಂತೆ ಕೆಲಸ
ಕ್ಷೇತ್ರದಲ್ಲಿ ಅಭಿವೃದ್ಧಿಯೆಂಬುದು ಮರಿಚೀಕೆಯಾಗಿದೆ. ಮಣ್ಣು, ಮರಳು ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ. ಕಚೇರಿಗಳಳ್ಲಿ ಕೆಲಸ ಕಾರ್ಯಗಳು ಇಲ್ಲ. ಅಧಿಕಾರಿಗಳು ಶಾಸಕರ ಕೈಗೊಂಬೆಗಳಂತೆ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ದ್ವೇಷ ರಾಜಕಾರಣದಿಂದ ಕಳೆದ ಎರಡೂವರೆ ವರ್ಷದಿಂದ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಆರೋಪಿಸಿದರು.
ಪಟ್ಟಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೆಎಸ್ ಆರ್ ಟಿಸಿ ಡಿಪೋ ಹೆಸರಲ್ಲಿ ಜಾಗದ ಮಣ್ಣು ಮಾರಾಟ ವಾಗುತ್ತಿದ್ದು ಬಿಡುಗಡೆಯಾದ ಅನುದಾನವೆಲ್ಲ ಮಣ್ಣು ತೆಗೆಯಲು ಬಳಕೆಯಾಗುತ್ತಿದೆ.100 ಬೆಡ್ ಆಸ್ಪತ್ರೆ ಒಳ್ಳೆ ಜಾಗ ಬಿಟ್ಟು ರಸ್ತೆ ಪಕ್ಕದಲ್ಲಿಯೇ ನಿರ್ಮಾಣ ಮಾಡುತ್ತಿದ್ದು ರಸ್ತೆ ಅಗಲೀಕರಣವಾದರೆ ಮತ್ತೆ ಸಮಸ್ಯೆಯಾಗುತ್ತದೆ ಎಂಬ ಅರಿವಿಲ್ಲದಂತೆ ಯೋಜನೆ ರೂಪಿಸಲಾಗಿದೆ ಎಂದರು.ಧಿ ಮೈದಾನದಲ್ಲಿ ಬದುಕಿಗಾಗಿ ಸುಮಾರು ವರ್ಷಗಳಿಂದ ಅಂಗಡಿ ಹೋಟೇಲ್ ನಡೆಸುತ್ತಿದ್ದ ವ್ಯಾಪಾರಿಗಳನ್ನು ಅಧಿಕಾರಿಗಳ ಮೇಲೆ ಒತ್ತಡ ಹೇರಿ ದ್ವೇಷ ಸಾಧನೆಗೆ ತೆರವು ಗೊಳಿಸಿ ಅವರನ್ನು ಬೀದಿ ಪಾಲು ಮಾಡಲಾಗಿದೆ. ಆದರೆ ಕೋಗಿಲುವಿನಲ್ಲಿ ಜಾತಿ ರಾಜಕಾರಣ ಮಾಡಿ ಪುನರ್ವಸತಿ ಕಲ್ಪಿಸಲಾಗಿದೆ. ಇಲ್ಲಿಯೂ ಅದೇ ರೀತಿ ಪುನರ್ವಸತಿ ಕಲ್ಪಿಸಬೇಕು ಇಲ್ಲದಿದ್ದರೆ ಅಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ತಾಲೂಕು ಬಿಜೆಪಿ ಅಧ್ಯಕ್ಷ ತಲಗಾರು ಉಮೇಶ್, ಕಾರ್ಯದರ್ಶಿ ವೇಣುಗೋಪಾಲ್, ನೂತನ್ ಕುಮಾರ್, ಪ್ರವೀಣ್ ಕುಮಾರ್, ಅಂಗುರುಡಿ ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.