ಸೂಲಿಬೆಲೆ: ಪದವಿ ಪೂರ್ವ ಕಾಲೇಜಿನ ಸರ್ವಾಂಗೀಣ ಆಭಿವೃದ್ಧಿಯ ಹೊಣೆ ನಮ್ಮದಾಗಿದ್ದು, ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ಫಲಿತಾಂಶ ನೀಡಬೇಕು ಎಂದು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ ಹೇಳಿದರು
ಸೂಲಿಬೆಲೆ: ಪದವಿ ಪೂರ್ವ ಕಾಲೇಜಿನ ಸರ್ವಾಂಗೀಣ ಆಭಿವೃದ್ಧಿಯ ಹೊಣೆ ನಮ್ಮದಾಗಿದ್ದು, ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ಫಲಿತಾಂಶ ನೀಡಬೇಕು ಎಂದು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ ಹೇಳಿದರು.
ಸೂಲಿಬೆಲೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ವಾರ್ಷಿಕೋತ್ಸವ ಸಮಾರೋಪ ಸಮಾರಂಭದ ಉದ್ಘಾಟಿಸಿ ಮಾತನಾಡಿದ ಅವರು, ಶಾಸಕ ಶರತ್ ಬಚ್ಚೇಗೌಡರು ಶೈಕ್ಷಣಿಕವಾಗಿ ಹೆಚ್ಚಿನ ಅಸಕ್ತಿ ಹೊಂದಿದ್ದು ಕಾಲೇಜಿನ ಅಭಿವೃದ್ಗೆ ಅಗತ್ಯ ಸೌಲಭ್ಯ ಒದಗಿಸಿಕೊಟ್ಟಿದ್ದಾರೆ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶದ ಬಹುಮಾನ ನೀಡಬೇಕು ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಖಜಾಂಚಿ ವಿ.ಪ್ರಸಾದ್ ಮಾತನಾಡಿ, ವಿದ್ಯಾರ್ಥಿ ದಿಸೆಯಲ್ಲಿ ಶಿಸ್ತು ಸಂಯಮ ಮೈಗೂಡಿಸಿಕೊಳ್ಳಬೇಕು. ಓದಿನ ಕಡೆ ಆಸಕ್ತಿ ವಹಿಸಬೇಕು. ಕಠಿಣ ಪರಿಶ್ರಮದಿಂದ ಸಾಧನೆ ಮಾಡಲು ಸಾಧ್ಯ.
ಉತ್ತಮ ನಾಗರಿಕ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಅನಿವಾರ್ಯ. ಈ ಬಗ್ಗೆ ವಿದ್ಯಾರ್ಥಿಗಳು ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡರು ೨೦೦ ವಿದ್ಯಾರ್ಥಿಗಳಿಗೆ ನಂದಿನಿ ಪೇಡಾ, ನಂದಿನಿ ಮಜ್ಜಿಗೆ ಹಾಗೂ ಊಟದ ವ್ಯವಸ್ಥೆ ಕಲ್ಪಿಸಿಕೊಟ್ಟರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ನಗರೇನಹಳ್ಳಿ ನಾಗರಾಜಪ್ಪ ಅವರು ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾ ವಿಜೇತರಿಗೆ ಹಾಗೂ ದೀತಿಯ ಪಿಯುಸಿಯಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಾಷಾ, ಪ್ರಾಂಶುಪಾಲ ಮಂಜುನಾಥ್, ಗ್ರಾಪಂ ಅಧ್ಯಕ್ಷ ಜನಾರ್ದನರೆಡ್ಡಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ನಗರೇನಹಳ್ಳಿ ನಾಗರಾಜಪ್ಪ,ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಾಷಾ,ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ವೆಂಕಟೇಶ್, ಜಿಯಾವುಲ್ಲಾ, ಪ್ರಶಾಂತ್, ಬೆಟ್ಟಹಳ್ಳಿ ಗೋಪಿನಾಥ್, ರಾಜೇಶ್ವರಿ, ರಾಜ್ಯ ವೈಜ್ಞಾನಿಕ ವಿಜ್ಞಾನ ಪರಿಷತ್ ಜಿಲ್ಲಾಧ್ಯಕ್ಷ ಎಂ.ಆರ್.ಉಮೇಶ್, ಜೇನುಗೂಡು ಟ್ರಸ್ಟ್ ಉಪಾಧ್ಯಕ್ಷ ಕೆ.ಎಂ.ಚೌಡೇಗೌಡ, ನಿರ್ದೇಶಕ ಅತ್ತಿಬೆಲೆ ಮಂಜುನಾಥ್, ಸೈಯದ್ ಮಹಬೂಬ್, ನಯಾಜ್‌ಖಾನ್, ಉಪನ್ಯಾಸಕರಾದ ಸುಬ್ರಹ್ಮಣಿ, ಕುಮಾರ್, ಸರಸ್ವತಿ, ರೇಣುಕಾ, ಶ್ರೀಕೃಪಾ, ಮೃತ್ಯುಂಜಯ, ನಾಗರಾಜ್, ಉರ್ದು ಶಾಲೆ ಅಧ್ಯಕ್ಷ ಇನಾಯತ್ ಇತರರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.