ರಾಜಕಾರಣ ಅಲ್ಲ, ಅಭಿವೃದ್ಧಿ ಶಾಶ್ವತ: ಶಾಸಕ ಕೆ.ಎಂ.ಉದಯ್

KannadaprabhaNewsNetwork |  
Published : Nov 23, 2025, 01:45 AM IST
22ಕೆಎಂಎನ್ ಡಿ19 | Kannada Prabha

ಸಾರಾಂಶ

ರಾಜಕಾರಣ ಶಾಶ್ವತವಲ್ಲ. ಅಭಿವೃದ್ಧಿ ಕಾರ್ಯಗಳೇ ಶಾಶ್ವತ. ಚುನಾವಣಾ ವೇಳೆ ಮಾತ್ರ ರಾಜಕಾರಣ ಮಾಡೋಣ. ಉಳಿದ ವೇಳೆ ಅಭಿವೃದ್ಧಿ ಕೆಲಸಗಳತ್ತ ಗಮನ ಹರಿಸೋಣ. ಹಾಗಾಗಿ ಕ್ಷೇತ್ರದ ವಿವಿಧ ಗ್ರಾಮಗಳ ಕುಂದು ಕೊರತೆ ಪಟ್ಟಿ ಮಾಡಿದ್ದು, ಹಂತ ಹಂತವಾಗಿ ಸಾಧ್ಯವಾದಷ್ಟು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿನಂತೆ ಪ್ರತಿ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿದ್ದೇನೆ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು.

ತಾಲೂಕಿನ ಕೊತ್ತನಹಳ್ಳಿ, ಹೊಸಕೆರೆ, ನಿಲುವಾಗಿಲು, ಸೀನಪ್ಪನದೊಡ್ಡಿ ಹಾಗೂ ಎನ್.ಕೋಡಿಹಳ್ಳಿಯಲ್ಲಿ ಅಂದಾಜು 2.50 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿನಂತೆ ಅರಿವಿಟ್ಟುಕೊಂಡು ಹಗಲು-ರಾತ್ರಿ ಎನ್ನದೇ ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗಿದ್ದೇನೆ. ಯಾರು ನನಗೆ ಅರ್ಜಿ ಕೊಟ್ಟು ಅಭಿವೃದ್ಧಿ ಮಾಡಿ ಎಂದು ಕೇಳಿಲ್ಲ. ಆದರೆ, ಕ್ಷೇತ್ರದ ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ಮೇಲೆ ಸಿಎಂ, ಡಿಸಿಎಂ ಮೇಲೆ ಒತ್ತಡ ಹೇರಿ 1500 ಕೋಟಿಗೂ ಹೆಚ್ಚು ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇನೆ ಎಂದರು.

ರಾಜಕಾರಣ ಶಾಶ್ವತವಲ್ಲ. ಅಭಿವೃದ್ಧಿ ಕಾರ್ಯಗಳೇ ಶಾಶ್ವತ. ಚುನಾವಣಾ ವೇಳೆ ಮಾತ್ರ ರಾಜಕಾರಣ ಮಾಡೋಣ. ಉಳಿದ ವೇಳೆ ಅಭಿವೃದ್ಧಿ ಕೆಲಸಗಳತ್ತ ಗಮನ ಹರಿಸೋಣ. ಹಾಗಾಗಿ ಕ್ಷೇತ್ರದ ವಿವಿಧ ಗ್ರಾಮಗಳ ಕುಂದು ಕೊರತೆ ಪಟ್ಟಿ ಮಾಡಿದ್ದು, ಹಂತ ಹಂತವಾಗಿ ಸಾಧ್ಯವಾದಷ್ಟು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದರು.

ಈ ವೇಳೆ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೈಲೂರು ಚಲುವರಾಜು, ನಿರ್ದೇಶಕ ಪಿ.ಸಂದರ್ಶ್, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಕಾಂಗ್ರೆಸ್ ಮುಖಂಡ ಗೋಪಿ, ಸುಧಾಕರ್, ಕೆ.ಆರ್.ಮಹೇಶ್, ಅಮರ್, ಇಂಜಿನಿಯರ್ ರಮೇಶ್ ಸೇರಿದಂತೆ ಮತ್ತಿತರರು ಇದ್ದರು.

ನಿವೃತ್ತ ನೌಕರರಿಗೆ ಪಿಂಚಣಿ ಹೆಚ್ಚಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಕನ್ನಡಪ್ರಭ ವಾರ್ತೆ ಮಂಡ್ಯ

ನಗರದ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಎದುರು ನಿವೃತ್ತ ನೌಕರರು ಹಾಗೂ ರಾಷ್ಟ್ರೀಯ ಸಂಘರ್ಷ ಸಮಿತಿ ಕಾರ್ಯಕರ್ತರು ಪಿಂಚಣಿ ಹೆಚ್ಚಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

2025ಕ್ಕೆ ಮುಂಚಿತವಾಗಿ ಸಾರಿಗೆ ನಿಗಮಗಳ ನಿವೃತ್ತ ನೌಕರರು ಅರ್ಜಿಗಳನ್ನು ಸಲ್ಲಿಸಿರುತ್ತಾರೆ. ಉದ್ಯೋಗದಾತರಿಂದ ಅನುಮೋದನೆಗೊಂಡು ಗರಿಷ್ಠ ಪಿಂಚಣಿಗಳಗಾಗಿ ಸಲ್ಲಿರುವ ಜಂಟಿ ಆಯ್ಕೆ ಪತ್ರಗಳನ್ನು ಪರಿಗಣಿಸಿ ಹೆಚ್ಚಿನ ಪಿಂಚಣಿ ಸೌಲಭ್ಯ ಪಡೆಯಲು ವಿಳಂಬವಾಗುತ್ತಿದೆ ಎಂದು ದೂರಿದರು.

ಎಲ್ಲಾ ನೌಕರರಿಗೆ ಕನಿಷ್ಠ ಪಿಂಚಣಿ 1,000 ದಿಂದ 7,500ಕ್ಕೆ ಹೆಚ್ಚಿಸಬೇಕು. ಉಚಿತ ವೈದ್ಯಕೀಯ ಸೌಲಭ್ಯ, ಇಪಿಎಸ್‌ ಪಿಂಚಣಿದಾರರಲ್ಲದವರಿಗೆ 5,000 ನೀಡಬೇಕು ಎಂದು ಮನವಿ ಮಾಡಿದರು.

ಹೈಕೋರ್ಟ್‌, ಸುಪ್ರೀಂಕೋರ್ಟ್‌, ಜೆಮ್‌ಶೆಡ್‌ಪುರ ಭವಿಷ್ಯ ನಿಧಿ ಆಯುಕ್ತರು–1 ಅವರ ಆದೇಶಗಳು ವಿನಾಯಿತಿ ಪಡೆದ ಸಂಸ್ಥೆಗಳ ನಿವೃತ್ತ ನೌಕರರು, ಹಾಲಿನೌಕರರು ವಾಸ್ತವಿಕ ಸಂಬಳದ ಮೇಲೆ ಮೇಲಿನ ಪ್ರಕರಣಗಳಂತೆ ಹೆಚ್ಚಿನ ಪಿಂಚಣಿಗಾಗಿ ಅರ್ಹರು ಎಂಬುದು ಸ್ಪಷ್ಟವಾಗಿದೆ. ಅದರಂತೆ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಹುಚ್ಚಪ್ಪ, ಮಹದೇವಸ್ವಾಮಿ, ರಾಮೇಗೌಡ, ಶಿವಣ್ಣ, ಲೋಕೇಶ್‌, ಚಲುವಯ್ಯ, ಬಾಲಕೃಷ್ಣ, ಲಿಂಗರಾಜು ಸೇರಿದಂತೆ ಹಲವರು ಭಾಗಿಯಾಗಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಜೆಪಿ ಎಷ್ಟು ಕೇಸ್‌ ಸಿಬಿಐಗೆ ನೀಡಿದೆ? : ಸಿಎಂ
ರಾಷ್ಟ್ರಧ್ವಜ ತಯಾರಿಸ್ತಿ ದ್ದ ಕೈಗಳಲ್ಲೀಗ ಕೆಲಸವಿಲ್ಲ!