ಕನ್ನಡಪ್ರಭ ವಾರ್ತೆ ಮಡಿಕೇರಿ
ಸೋಮವಾರಪೇಟೆಯ ಬಜೆಗುಂಡಿ ಮೊಗೇರ ಸೇವಾ ಸಮಾಜ ಮತ್ತು ಕುಸುಬೂರು ಮೊಗೇರ ಗ್ರಾಮ ಸಮಿತಿ ವತಿಯಿಂದ ಕುಸುಬೂರಿನಲ್ಲಿ ಮೊಗೇರ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಮಾಜವು ಬಲಿಷ್ಠವಾಗಬೇಕಾದರೆ ಶಿಕ್ಷಣವು ಪ್ರಮುಖವಾಗಿದ್ದು, ಪೋಷಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ನೀಡುವಲ್ಲಿ ಶ್ರಮವಹಿಸಬೇಕು. ಪ್ರಸ್ತುತ ದಿನಗಳಲ್ಲಿ ಮೊಗೇರ ಸಮುದಾಯದವರು ಎಲ್ಲ ಕ್ಷೇತ್ರದಲ್ಲೂ ಮುಂದೆ ಬರುತ್ತಿದ್ದು, ಸಮಾಜದ ಅಭಿವೃದ್ಧಿಗೆ ಎಲ್ಲರ ಕೊಡುಗೆ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಮಾಜ ಬಾಂಧವರು ಕೈಜೋಡಿಸುವಂತೆ ಮನವಿ ಮಾಡಿದರು.ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದೇವೆ ಎಂಬ ಕೀಳರಿಮೆ ಬೇಡ. ಸರ್ಕಾರಿ ಶಾಲೆಯಲ್ಲೂ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಸರ್ಕಾರದ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.
ಮೊಗೇರ ಗ್ರಾಮ ಶಾಖೆಯಿಂದ ಕಳೆದ ಒಂಬತ್ತು ವರ್ಷದಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಸಲಾಗುತ್ತಿದ್ದು, ನಮ್ಮ ಸಮುದಾಯದ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ. ಎಲ್ಲರೂ ತಮ್ಮ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.
ಸದಸ್ಯರಾದ ದಿನೇಶ್ ಕುಸುಬೂರು ನಿರೂಪಿಸಿ, ಸ್ವಾಗತಿಸಿದರು. ಶಿವಕುಮಾರ್ ಮಾಸ್ಟರ್ ವಂದಿಸಿದರು.