ಸಮಾಜದ ಒಗ್ಗೂಡವಿಕೆಯಿಂದ ಅಭಿವೃದ್ಧಿ ಸಾಧ್ಯ: ಗುರುರಾಜ ಗಂಟಿಹೊಳೆ

KannadaprabhaNewsNetwork |  
Published : Aug 05, 2026, 02:30 AM IST
04ಬೈಂದೂರು | Kannada Prabha

ಸಾರಾಂಶ

ಬೈಂದೂರು ಶಾಸಕರ ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಡಿ ಕ್ಯಾನ್ ಫಿನ್ ಹೋಮ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ಇಲ್ಲಿನ ಹೊಸಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 10 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಶೌಚಾಲಯದ ಭೂಮಿ ಪೂಜೆಯನ್ನು ಶಾಸಕ ಗುರುರಾಜ್ ಗಂಟಿಹೊಳೆ ನೆರವೇರಿಸಿದರು.

ಬೈಂದೂರು: ಬೈಂದೂರು ಶಾಸಕರ ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಡಿ ಕ್ಯಾನ್ ಫಿನ್ ಹೋಮ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ಇಲ್ಲಿನ ಹೊಸಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 10 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಶೌಚಾಲಯದ ಭೂಮಿ ಪೂಜೆಯನ್ನು ಶಾಸಕ ಗುರುರಾಜ್ ಗಂಟಿಹೊಳೆ ನೆರವೇರಿಸಿದರು. ಸಮಾಜದ ಒಗ್ಗೂಡುವಿಕೆಯಿಂದ ಊರಿನ ಸರ್ಕಾರಿ ಶಾಲೆಗಳ ಬಲವರ್ಧನೆ ಹಾಗೂ ಪ್ರತಿಯೊಬ್ಬ ವಿದ್ಯಾರ್ಥಿಗೂ ಉತ್ತಮ ಶಿಕ್ಷಣ ನೀಡಲು ಸಾಧ್ಯ ಎಂದು ಅವರು ಈ ಸಂದರ್ಭ ಹೇಳಿದರು. ಶಾಲಾ ಮುಖ್ಯ ಶಿಕ್ಷಕಿ ಗೀತಾ ಅವರು, ಶಾಸಕರ 300 ಟ್ರೀಸ್ ಯೋಜನೆಯಿಂದ ಇಂದು ಬೈಂದೂರು ಕ್ಷೇತ್ರದ ಹಲವಾರು ಸರ್ಕಾರಿ ಶಾಲೆಗಳಿಗೆ ಭೌತಿಕ ಸೌಲಭ್ಯ ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗಿದೆ. ಶಿಕ್ಷಣ ಕ್ಷೇತ್ರ ಬಗೆಗಿನ ಅವರ ಕಾಳಜಿ ಅಭಿನಂದನಾರ್ಹ ಎಂದರು.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ರೇಖಾ ಗಣೇಶ್, ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಅರಾಟೆ, ಬೈಂದೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಜಯ ಕುಮಾರ್ ಶೆಟ್ಟಿ ಹಾಗೂ ಹಳೆ ವಿದ್ಯಾರ್ಥಿಗಳಾದ ವಿಶ್ವನಾಥ ಶೆಟ್ಟಿ ಕೋಟೆಮಕ್ಕಿ, ಗುರುಕಿರಣ್, ಸಂತೋಷ್ ಮೊಗವೀರ, ಶಾಂತರಾಮ ಶೆಟ್ಟಿ, ಅರುಣ್ ಆಚಾರ್ಯ, ನಿವೃತ್ತ ಶಿಕ್ಷಕ ಸದಾಶಿವ ಶೆಟ್ಟಿ, ತೇಜಪ್ಪ ಶೆಟ್ಟಿ ಹಾಗೂ ನಿವೃತ್ತ ಬ್ಯಾಂಕ್ ಉದ್ಯೋಗಿ ರಾಜೀವ ಶೆಟ್ಟಿ ಕಡ್ಲೇರಮನೆ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವರ್ಗ ಹಾಗೂ ಅಡುಗೆ ಸಿಬ್ಬಂದಿ ಸಹಕರಿಸಿದರು. ಸಹ ಶಿಕ್ಷಕಿ ಪ್ರತಿಮಾ ಜಿ. ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುರುಶಿಷ್ಯ ಪರಂಪರೆ ಹಿಂದೂ ಸಂಸ್ಕೃತಿಯ ಕೊಡುಗೆ: ಡಾ. ರಾಘವೇಂದ್ರ ರಾವ್
ಸಾಧಾರಣ ಮಳೆ: ಮೇಕೇರಿಯಲ್ಲಿ ರಸ್ತೆಗುರುಳಿದ ಮರ